ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಮತ್ತು ಪಾಕಿಸ್ತಾನ -ನ್ಯೂಜಿಲೆಂಡ್ ನಡುವಣ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮುಕ್ತಾಯವಾದ ಬೆನ್ನಲ್ಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟ ಮಾಡಿದೆ. ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ನಂ.1 ಸ್ಥಾನಕ್ಕೇರಿದ್ದಾರೆ. ಟೌರಂಗಾದಲ್ಲಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಕೇನ್ ಇಬ್ಬರು ಅಗ್ರ ಆಟಗಾರರನ್ನು ಹಿಂದಿಕ್ಕಿದ್ದಾರೆ. ವಿಲಿಯಮ್ಸನ್ 2015ರ ಅಂತ್ಯದ ವೇಳೆಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದರು. ಸ್ಮಿತ್ ಅಥವಾ ಕೊಹ್ಲಿ ಇಬ್ಬರೂ ಮೊದಲ ಸ್ಥಾನದಲ್ಲಿರುತ್ತಿದ್ದರು. ಆದರೆ, ಈ ವರ್ಷಾಂತ್ಯಕ್ಕೆ ವಿಲಿಯಮ್ಸನ್ 890 ಪಾಯಿಂಟ್ನೊಂದಿಗೆ ನಂಬರ್ ಒನ್ ಟೆಸ್ಟ್ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದಾರೆ.
IND vs AUS: ಮೂರನೇ ಟೆಸ್ಟ್ಗೆ ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆ: ಮತ್ತೊಬ್ಬ ಆಟಗಾರ ಪದಾರ್ಪಣೆ?
ಕಳೆದ ಹಲವು ವರ್ಷಗಳಿಂದ ಬ್ಯಾಟ್ಸ್‌ಮನ್‌ಗಳ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯ ಮೊದಲ ಎರಡು ಸ್ಥಾನಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಆಸೀಸ್‌ನ ಮಾಜಿ ನಾಯಕ ಸ್ಟೀವ್ ಸ್ಮಿತ್ ನಡುವೆ ಹಾವು ಏಣಿ ಆಟ ನಡೆಯುತ್ತಿತ್ತು. ಆದರೆ, ಈ ವರ್ಷ ಅದ್ಭುತ ಪ್ರದರ್ಶನ ನೀಡಿರುವ ವಿಲಿಯಮ್ಸನ್, ವೆಸ್ಟ್ ಇಂಡೀಸ್ ಎದುರು ದ್ವಿಶತಕ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸುವ ಮೂಲಕ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಪಾಕಿಸ್ತಾನ ವಿರುದ್ಧ ಬುಧವಾರ ಅಂತ್ಯಗೊಂಡ ಪ್ರಥಮ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 129 ರನ್ ಮತ್ತು 2ನೇ ಇನಿಂಗ್ಸ್‌ನಲ್ಲಿ 21 ರನ್ ಗಳಿಸಿದ ವಿಲಿಯಮ್ಸನ್, ಒಟ್ಟು 13 ರ‍್ಯಾಂಕಿಂಗ್ ರೇಟಿಂಗ್ ಸಂಪಾದಿಸಿದ್ದಾರೆ. ಇದರೊಂದಿಗೆ 2ನೇ ಸ್ಥಾನದಲ್ಲಿ ಇರುವ ವಿರಾಟ್ ಕೊಹ್ಲಿಗಿಂತಲೂ 11 ಅಂಕಗಳ ಮುನ್ನಡೆಯೊಂದಿಗೆ ನಂ.1 ಪಟ್ಟ ಪಡೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ 879 ರೇಟಿಂಗ್ನೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಭಾರತ ವಿರುದ್ಧ ಅತ್ಯಂತ ಕಳಪೆ ಪ್ರದರ್ಶನ ತೋರಿದ ಸ್ಟೀವ್ ಸ್ಮಿತ್ 877 ರೇಟಿಂಗ್ನೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಮಾರ್ನಸ್ ಲ್ಯಾಬುಶೇನ್(850) 4ನೇ ಸ್ಥಾನದಲ್ಲಿದ್ದರೆ, 5ನೇ ಸ್ಥಾನದಲ್ಲಿ ಬಾಬರ್ ಅಜಾಂ(789) ಇದ್ದಾರೆ.
ಮಾಡೆಲ್ಗಳಿಗೆ ಸೆಡ್ಡು ಹೊಡೆಯುತ್ತಿರುವ ಕ್ರಿಸ್ ಗೇಲ್ ಹೆಂಡತಿ ನತಾಶ: ಇಲ್ಲಿದೆ ಫೋಟೋಗಳು
ವಿಶೇಷ ಎಂದರೆ ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿಯ ಅನುಪಸ್ಥಿತಿಯಲ್ಲಿ ನಾಯಕತ್ವ ವಹಿಸಿಕೊಂಡಿರುವ ಅಜಿಂಕ್ಯಾ ರಹಾನೆ, ಮೆಲ್ಬೋರ್ನ್‌ನಲ್ಲಿ ತೋರಿದ ಉತ್ತಮ ಪ್ರದರ್ಶನದಿಂದಾಗಿ ನೂತನ ಶ್ರೇಯಾಂಕದಲ್ಲಿ 6ನೇ ಸ್ಥಾನಕ್ಕೇರಿದ್ದಾರೆ. ಎಂಸಿಜಿಯಲ್ಲಿ ಮೊದಲ ಇನಿಂಗ್ಸ್‌ನಲ್ಲಿ 112 ರನ್‌ಗಳ ಅಮೋಘ ಶತಕ ಬಾರಿಸಿ ಪಂದ್ಯಶ್ರೇಷ್ಠ ಗೌರವಕ್ಕೂ ಪಾತ್ರರಾದ ರಹಾನೆ 5 ಸ್ಥಾನ ಮೇಲೇರುವ ಮೂಲಕ ಟಾಪ್ 10 ಒಳಗೆ ಕಾಲಿರಿಸಿ 6ನೇ ರ‍್ಯಾಂಕ್ ತಮ್ಮದಾಗಿಸಿಕೊಂಡಿದ್ದಾರೆ. ಇನ್ನೂ ಸರಣಿಯಲ್ಲಿ ಮಿಂಚದ ಚೇತೇಶ್ವರ್ ಪೂಜಾರ 10ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಇನ್ನು ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾದ ಆರ್ ಅಶ್ವಿನ್ 2 ಸ್ಥಾನ ಜಿಗಿದು 7ನೇ ರ‍್ಯಾಂಕ್ ಪಡೆದುಕೊಂಡರೆ, ಜಸ್‌ಪ್ರೀತ್ ಬುಮ್ರಾ ಒಂದು ಸ್ಥಾನ ಸುಧಾರಿಸಿಕೊಳ್ಳುವ ಮೂಲ 9ನೇ ರ‍್ಯಾಂಕ್ ಆಕ್ರಮಿಸಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ