ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಭಾರತ ಕ್ರಿಕೆಟ್ ತಂಡಕ್ಕೆ ಭಾರೀ ಆಘಾತ ಉಂಟಾಗಿದೆ. ಕಳೆದ ಮೂರುವರೆ ವರ್ಷಗಳಿಂದ ನಂಬರ್ ಒನ್ ಸ್ಥಾನದಲ್ಲಿ ಭದ್ರವಾಗಿದ್ದ ವಿರಾಟ್ ಕೊಹ್ಲಿ ಪಡೆ ನೂತನ ಟೆಸ್ಟ್ ರ್ಯಾಂಕಿಂಗ್ನಲ್ಲಿ ಕೆಳಗಿಳಿದಿದ್ದು ಮೂರನೇ ಸ್ಥಾನಕ್ಕೆ ಕುಸಿದಿದೆ.
ಟೆಸ್ಟ್ ಹಾಗೂ ಟಿ-20 ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾ ನಂಬರ್ 1ಸ್ಥಾನಕ್ಕೆ ಲಗ್ಗೆ ಹಾಕಿದ್ದು, ಏಕದಿನ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದೆ.
👉 India displaced from top in Tests for the first time since October 2016.
👉 Pakistan slip in T20I rankings after 27 months as No.1.
Details ⬇️ https://t.co/gfBjYsdFMW
— ICC (@ICC) May 1, 2020
ಒಟ್ಟು 116 ಅಂಕದೊಂದಿಗೆ ಕಾಂಗರೂ ಪಡೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂಬರ್ ಒನ್ ಸ್ಥಾನಕ್ಕೇರಿದ್ದರೆ, ಎರಡನೇ ಸ್ಥಾನದಲ್ಲಿ 115 ಪಾಯಿಂಟ್ ಹೊಂದಿ ನ್ಯೂಜಿಲೆಂಡ್ ತಂಡವಿದೆ. ಭಾರತ ಮೂರನೇ ಸ್ಥಾನಕ್ಕೆ ಕುಸಿದಿದ್ದು 114 ರೇಟಿಂಗ್ನಲ್ಲಿದೆ.
ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದು ಕಳೆದ 2016 ರಿಂದ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಇತ್ತು. ಆದರೆ, ಸದ್ಯ ಸುಮಾರು ಮೂರುವರೆ ವರ್ಷಗಳ ಬಳಿಕ ಮೂರನೇ ಸ್ಥಾನಕ್ಕೆ ಕುಸಿದಿದೆ.
ಐಸಿಸಿ ನಿಯಮಗಳ ಪ್ರಕಾರ 2016-17ರಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿತ್ತು. ಆ ದಾಖಲೆ ತೆಗೆದು ಹಾಕಿದ್ದರಿಂದ ಟೀಂ ಇಂಡಿಯಾ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಹೀಗಾಗಿ 2016ರ ಬಳಿಕ ಆಸ್ಟ್ರೇಲಿಯಾ ಮತ್ತೊಮ್ಮೆ ಅಗ್ರಸ್ಥಾನದಲ್ಲಿ ಮುಂದುವರಿದಿದೆ.
2016-17 ರಲ್ಲಿ ಭಾರತ 12 ಟೆಸ್ಟ್ ಪಂದ್ಯಗಳನ್ನು ಆಡಿತ್ತು. ಇದರಲ್ಲಿ ಕೇವಲ ಒಂದು ಟೆಸ್ಟ್ನಲ್ಲಿ ಮಾತ್ರ ಸೋಲುಂಡಿತ್ತು. ಆದರೆ, ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಅಗ್ರಸ್ಥಾನದಲ್ಲಿದೆ.
ನಾನು ತಂಡಕ್ಕೆ ಆಯ್ಕೆಯಾದಾಗ ತಾಯಿ ನನ್ನ ಬಿಟ್ಟು ಹೋದರು..!
ಇನ್ನೂ ಐಸಿಸಿ ಟಿ-20 ರ್ಯಾಂಕಿಂಗ್ನಲ್ಲೂ ಆಸ್ಟ್ರೇಲಿಯಾ 278 ಪಾಯಿಂಟ್ ಹೊಂದಿ ಅಗ್ರಸ್ಥಾನಕ್ಕೇರಿದೆ. ಎರಡನೇ ಸ್ಥಾನದಲ್ಲಿ 268 ಅಂಕದೊಂದಿಗೆ ಇಂಗ್ಲೆಂಡ್ ತಂಡವಿದ್ದರೆ, ಭಾರತ 266 ಪಾಯಿಂಟ್ ಹೊಂದಿ ಮೂರನೇ ಸ್ಥಾನದಲ್ಲಿದೆ.
ಇತ್ತ ಏಕದಿನ ರ್ಯಾಂಕಿಂಗ್ನಲ್ಲಿ 127 ರೇಟಿಂಗ್ ಹೊಂದಿ ಇಂಗ್ಲೆಂಡ್ ಟಾಪ್ ಒಂದರಲ್ಲಿದೆ. ಭಾರತ 119 ರೇಟಿಂಗ್ನಲ್ಲಿ ಎರಡನೇ ಸ್ಥಾನದಲ್ಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ