ನೂತನ ಟೆಸ್ಟ್​ ರ‍್ಯಾಂಕಿಂಗ್‌ ಪಟ್ಟಿ ಪ್ರಕಟ: ಕಿಂಗ್​ ಸ್ಥಾನದಲ್ಲಿ ಕ್ಯಾಪ್ಟನ್ ಕೊಹ್ಲಿ

ICC Test rankings: ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ಪ್ಯಾಟ್ ಕಮ್ಮಿನ್ಸ್ 914 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ದ್ವಿತೀಯ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಕಗಿಸೋ ರಬಾಡ(851) ಹಾಗೂ 3ನೇ ಸ್ಥಾನದಲ್ಲಿ ಇಂಗ್ಲೆಂಡ್ ತಂಡದ ಜೇಮ್ಸ್ ಅಂಡರ್ಸನ್ (823) ಇದ್ದಾರೆ.

zahir | news18-kannada
Updated:August 20, 2019, 11:46 AM IST
ನೂತನ ಟೆಸ್ಟ್​ ರ‍್ಯಾಂಕಿಂಗ್‌ ಪಟ್ಟಿ ಪ್ರಕಟ: ಕಿಂಗ್​ ಸ್ಥಾನದಲ್ಲಿ ಕ್ಯಾಪ್ಟನ್ ಕೊಹ್ಲಿ
Virat kohli
  • Share this:
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ನೂತನ ಟೆಸ್ಟ್​ ರ‍್ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. ಈ ಮೂಲಕ ಟೆಸ್ಟ್​​ ಕ್ರಿಕೆಟ್​ನ ಕಿಂಗ್​ ಆಗಿ ಕೊಹ್ಲಿ ಮತ್ತೊಮ್ಮೆ ಹೊರಹೊಮ್ಮಿದ್ದಾರೆ.

ಪರಿಷ್ಕೃತ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್ ಅಲಂಕರಿಸಿದ್ದಾರೆ. ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿರುವ ಆಸೀಸ್ ಆಟಗಾರ ಒಂದು ಸ್ಥಾನ ಮೇಲೆಕ್ಕೆ ಜಿಗಿದಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ 922 ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಪಡೆದರೆ, 913 ಪಾಯಿಂಟ್​ಗಳೊಂದಿಗೆ ಸ್ಮಿತ್ ನಂತರ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಆ್ಯಶಸ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿರುವ ಸ್ಮಿತ್ ಕಳೆದ ಮೂರು ಇನಿಂಗ್ಸ್​ನಲ್ಲಿ 378 ರನ್​ಗಳನ್ನು ಕಲೆಹಾಕಿದ್ದರು.

ಇನ್ನು 881 ಅಂಕಗಳೊಂದಿಗೆ ಟೀಂ ಇಂಡಿಯಾ ಆಟಗಾರ ಚೇತೇಶ್ವರ್ ಪೂಜಾರ ಕೂಡ ಅಗ್ರ 10 ಮಂದಿಯ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದು, 4ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಅದೇ ರೀತಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿಅಮೋಘ ಪ್ರದರ್ಶನ ನೀಡಿದ ಶ್ರೀಲಂಕಾದ ದಿಮುತ್ ಕರುಣಾರತ್ನೆ ಏಕಾಏಕಿ ನಾಲ್ಕು ಸ್ಥಾನಗಳಲ್ಲಿ ಜಿಗಿತ ಕಂಡಿದ್ದಾರೆ. ಪ್ರಸ್ತುತ ರ್ಯಾಕಿಂಗ್ ಪಟ್ಟಿಯಲ್ಲಿ ಲಂಕಾ ಆಟಗಾರ 8ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಅದೇ ರೀತಿ ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ಪ್ಯಾಟ್ ಕಮ್ಮಿನ್ಸ್ 914 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ದ್ವಿತೀಯ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಕಗಿಸೋ ರಬಾಡ(851) ಹಾಗೂ 3ನೇ ಸ್ಥಾನದಲ್ಲಿ ಇಂಗ್ಲೆಂಡ್ ತಂಡದ ಜೇಮ್ಸ್ ಅಂಡರ್ಸನ್ (823) ಇದ್ದಾರೆ. 794 ಅಂಕಗಳೊಂದಿಗೆ ಟೀಂ ಇಂಡಿಯಾ ಆಟಗಾರ ರವೀಂದ್ರ ಜಡೇಜಾ 5ನೇ ಹಾಗೂ ರವಿಚಂದ್ರನ್ ಅಶ್ವಿನ್ (763) 10ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

ಟೆಸ್ಟ್​ ಬ್ಯಾಟ್ಸ್​ಮನ್​ ರ‍್ಯಾಂಕಿಂಗ್‌ ಪಟ್ಟಿ:

1. ವಿರಾಟ್ ಕೊಹ್ಲಿ (ಭಾರತ) - 9222. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ) - 913

3. ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್) - 887

4. ಚೇತೇಶ್ವರ ಪೂಜಾರ (ಭಾರತ) - 881

5. ಹೆನ್ರಿ ನಿಕೋಲ್ಸ್ (ನ್ಯೂಜಿಲೆಂಡ್) - 770

6. ಐಡೆನ್ ಮಾರ್ಕ್ರಮ್ (ದಕ್ಷಿಣ ಆಫ್ರಿಕಾ) - 719

7. ಕ್ವಿಂಟನ್ ಡಿ ಕಾಕ್ (ದಕ್ಷಿಣ ಆಫ್ರಿಕಾ) - 718

8. ದಿಮುತ್ ಕರುಣರತ್ನ (ಶ್ರೀಲಂಕಾ) - 716

9. ಜೋ ರೂಟ್ (ಇಂಗ್ಲೆಂಡ್) - 710

10. ಫಾಫ್ ಡು ಪ್ಲೆಸಿಸ್ (ದಕ್ಷಿಣ ಆಫ್ರಿಕಾ) - 702

ಟೆಸ್ಟ್ ಬೌಲಿಂಗ್​ ರ‍್ಯಾಂಕಿಂಗ್‌ ಪಟ್ಟಿ:

1. ಪ್ಯಾಟ್ ಕಮ್ಮಿನ್ಸ್ (ಆಸ್ಟ್ರೇಲಿಯಾ) - 914

2. ಕಗಿಸೊ ರಬಡಾ (ದಕ್ಷಿಣ ಆಫ್ರಿಕಾ) - 851

3. ಜೇಮ್ಸ್ ಅಂಡರ್ಸನ್ (ಇಂಗ್ಲೆಂಡ್) - 823

4. ವೆರ್ನಾನ್ ಫಿಲಾಂಡರ್ (ದಕ್ಷಿಣ ಆಫ್ರಿಕಾ) - 813

5. ರವೀಂದ್ರ ಜಡೇಜಾ (ಭಾರತ) - 794

6. ನೀಲ್ ವ್ಯಾಗ್ನರ್ (ನ್ಯೂಜಿಲೆಂಡ್) - 793

7. ಟ್ರೆಂಟ್ ಬೌಲ್ಟ್ (ನ್ಯೂಜಿಲೆಂಡ್) - 785

8. ಮೊಹಮ್ಮದ್ ಅಬ್ಬಾಸ್ (ಪಾಕಿಸ್ತಾನ್) - 770

8. ಜೇಸನ್ ಹೋಲ್ಡರ್ (ವೆಸ್ಟ್ ಇಂಡೀಸ್) - 770

10. ರವಿಚಂದ್ರನ್ ಅಶ್ವಿನ್ (ಭಾರತ) - 763

First published:August 20, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ