news18-kannada Updated:February 24, 2021, 6:26 PM IST
axar patel
ವಿಶ್ವದ ಅತೀ ದೊಡ್ಢ ಕ್ರಿಕೆಟ್ ಮೈದಾನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುರುವಾಗಿರುವ ಭಾರತ-ಇಂಗ್ಲೆಂಡ್ ನಡುವಣ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ, ಜೋ ರೂಟ್ ಪಡೆ ಮೊದಲ ಇನಿಂಗ್ಸ್ನಲ್ಲಿ ಕೇವಲ 112 ರನ್ಗಳಿಗೆ ಸರ್ವಪತನ ಕಂಡಿದೆ. ಟೀಮ್ ಇಂಡಿಯಾ ಯುವ ಸ್ಪಿನ್ನರ್ ಅಕ್ಷರ್ ಪಟೇಲ್ ಸ್ಪಿನ್ ಮೋಡಿಗೆ ತತ್ತರಿಸಿದ ಇಂಗ್ಲೆಂಡ್ ಬ್ಯಾಟ್ಸ್ಮನ್ಗಳು ಪೆವಿಲಿಯನ್ ಪರೇಡ್ ನಡೆಸಿದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ಗೆ ಆರಂಭಿಕ ಆಘಾತ ನೀಡುವಲ್ಲಿ ಟೀಮ್ ಇಂಡಿಯಾ ಬೌಲರುಗಳು ಜಾನಿ ಬೈರ್ಸ್ಟೋ ಅವರನ್ನೂ ಸಹ ಅಕ್ಷರ್ ಪಟೇಲ್ ಶೂನ್ಯಕ್ಕೆ ಔಟ್ ಮಾಡಿ ಎರಡನೇ ಯಶಸ್ಸು ತಂದುಕೊಟ್ಟರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ಜೋ ರೂಟ್, ಆರಂಭಿಕ ಝಾಕ್ ಕ್ರಾಲಿ ಎಚ್ಚರಿಕೆಯ ಆಟಕ್ಕೆ ಒತ್ತು ನೀಡಿದರು.
ಆದರೆ ತಂಡದ ಮೊತ್ತ 74 ರನ್ಗಳಾಗಿದ್ದ ವೇಳೆ ದಾಳಿಗಿಳಿದ ಅಶ್ವಿನ್ ರೂಟ್ (17) ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರ ಬೆನ್ನಲ್ಲೇ ಅರ್ಧಶತಕ ಸಿಡಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಕ್ರಾಲಿ (53) ವಿಕೆಟ್ ಪಡೆದು ಅಕ್ಷರ್ ಪಟೇಲ್ ಟೀಮ್ ಇಂಡಿಯಾಗೆ 4ನೇ ಯಶಸ್ಸು ತಂದುಕೊಟ್ಟರು.
ಇದರ ಬಳಿಕ ಒಬ್ಬರ ಹಿಂದೆ ಒಬ್ಬರಂತೆ ಒಲಿ ಪೋಪ್ (1) ಹಾಗೂ ಬೆನ್ ಸ್ಟೋಕ್ಸ್ (6) ವಿಕೆಟ್ಗಳನ್ನು ಉರುಳಿಸಿದ ಅಕ್ಷರ್ ಪಟೇಲ್ ಹಾಗೂ ಅಶ್ವಿನ್ ಇಡೀ ಪಂದ್ಯವನ್ನು ತೆಕ್ಕೆಗೆ ತೆಗೆದುಕೊಂಡರು. ಆ ಬಳಿಕ ಬಂದ ಯಾವುದೇ ಬ್ಯಾಟ್ಸ್ಮನ್ಗಳನ್ನು ನೆಲೆಯೂರಲು ಬಿಡದ ಟೀಮ್ ಇಂಡಿಯಾ ಸ್ಪಿನ್ನರ್ಗಳು ತಂಡದ ಮೊತ್ತ 100ರ ಗಡಿದಾಟುವಷ್ಟರಲ್ಲಿ 8 ವಿಕೆಟ್ ಉರುಳಿಸಿದರು.
ಇನ್ನು ಸ್ಟುವರ್ಟ್ ಬ್ರಾಡ್ ವಿಕೆಟ್ ಪಡೆಯುವುದರೊಂದಿಗೆ ಅಕ್ಷರ್ ಪಟೇಲ್ 2ನೇ ಟೆಸ್ಟ್ನಲ್ಲೂ ಐದು ವಿಕೆಟ್ ಪಡೆದ ಸಾಧನೆ ಮಾಡಿದರು. ಇದಕ್ಕೂ ಮುನ್ನ ಚೆನ್ನೈ ಟೆಸ್ಟ್ನಲ್ಲಿ ಪಾದರ್ಪಣೆ ಮಾಡಿದ್ದ ಅಕ್ಷರ್ ಇನಿಂಗ್ಸ್ವೊಂದರಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಕೊನೆಯ ವಿಕೆಟ್ ಪಡೆಯುವ ಮೂಲಕ ಅಕ್ಷರ್ ಪಟೇಲ್ ಒಟ್ಟು 6 ವಿಕೆಟ್ ಕಬಳಿಸಿದರು. ಇದರೊಂದಿಗೆ ಇಂಗ್ಲೆಂಡ್ ತಂಡವು 112 ರನ್ಗಳಿಗೆ ಸರ್ಪಪತನ ಕಂಡಿತು.
ಟೀಮ್ ಇಂಡಿಯಾ ಪರ ಅಕ್ಷರ್ ಪಟೇಲ್ 6 ವಿಕೆಟ್ ಕಬಳಿಸಿ ಮಿಂಚಿದರೆ, ರವಿಚಂದ್ರನ್ ಅಶ್ವಿನ್ 3 ಹಾಗೂ ಇಶಾಂತ್ ಶರ್ಮಾ 1 ವಿಕೆಟ್ ಪಡೆದರು.
Published by:
zahir
First published:
February 24, 2021, 6:25 PM IST