ICC U-19 World Cup: ಇಂಗ್ಲೆಂಡ್‌ ಸೋಲಿಸಿ 'ವಿಶ್ವ'ವಿಜೇತನಾದ ಭಾರತ, 5 ಬಾರಿ ಗೆದ್ದು ದಾಖಲೆ

ಕಿರಿಯರ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ 5 ಬಾರಿ ಟ್ರೋಫಿ ಗೆದ್ದು ಅತ್ಯಂತ ಯಶಸ್ವಿ ತಂಡವೆನಿಸಿದೆ. ಆಸ್ಟ್ರೇಲಿಯಾ ಮೂರು ಬಾರಿ ಗೆದ್ದು ಎರಡನೇ ಯಶಸ್ವಿ ತಂಡವಾಗಿದ್ದು, ಪಾಕಿಸ್ತಾನ ಎರಡು ಬಾರಿ ಗೆದ್ದಿದೆ. ಉಳಿದಂತೆ ಬಾಂಗ್ಲಾದೇಶ, ಸೌತ್‌ ಆಫ್ರಿಕಾ, ವೆಸ್ಟ್‌ ಇಂಡೀಸ್‌ ಮತ್ತು ಇಂಗ್ಲೆಂಡ್‌ ತಲಾ ಒಂದು ಬಾರಿ ಗೆದ್ದಿವೆ

ಗೆಲುವಿನ ಸಂಭ್ರಮದಲ್ಲಿ ಭಾರತ ಕಿರಿಯರ ತಂಡ

ಗೆಲುವಿನ ಸಂಭ್ರಮದಲ್ಲಿ ಭಾರತ ಕಿರಿಯರ ತಂಡ

  • Share this:
ಆಂಟಿಗುವಾ: ಐಸಿಸಿ (ICC) ಅಂಡರ್ 19 (Under 19) ವಿಶ್ವಕಪ್‌ನಲ್ಲಿ (World Cup) ಭಾರತ (India) ವಿಶ್ವವಿಜೇತನಾಗಿ ಗೆದ್ದಿದೆ. ಆಂಟಿಗುವಾದ (Antigua) ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ(Sir Vivian Richards Stadium) ನಡೆದ ಪಂದ್ಯದಲ್ಲಿ ಇಂಗ್ಲೆಂಡ್ (England) ತಂಡವನ್ನು ಮಣಿಸಿದೆ. ಭಾರತದ ಕಿರಿಯರ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಅಂಡರ್-19 ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿದೆ. ಆಲ್‌ರೌಂಡ್‌ ಪ್ರದರ್ಶನ ನೀಡಿದ ಯಶ್ ಧುಲ್‌ (Yash Dhull ) ಸಾರಥ್ಯದ ಕಿರಿಯರ ಭಾರತ ತಂಡ, ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆದ ಐಸಿಸಿ ಅಂಡರ್-19 ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆಯಿತು. ಟಾಸ್ ನಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಬ್ಯಾಟ್ಸ್ ಮನ್ ಗಳಿಗೆ ಭಾರತೀಯ ಬೌಲರ್ ಗಳು ಸವಾಲಾಗಿ ಪರಿಣಮಿಸಿದರು. ಪರಿಣಾಮ 44.5 ಓವರ್ ಗಳಿಗೆ ಇಂಗ್ಲೆಂಡ್ ತಂಡ 189 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಜೇಮ್ಸ್ ರೆವ್ ನ 95 ರನ್ ಗಳು ಹಾಗೂ ಸೇಲ್ಸ್ ನೊಂದಿಗೆ 93 ರನ್ ಗಳ ಜೊತೆಯಾಟ ಇಂಗ್ಲೆಂಡ್ ಗೆ ಸಹಕಾರಿಯಾಯಿತು. 

ಸಾಧಾರಣ ಮೊತ್ತ ಬೆನ್ನಟ್ಟಿದ ಭಾರತ

ಭಾರತದ ಪರ ಬೌಲಿಂಗ್ ವಿಭಾಗದಲ್ಲಿ ರವಿ ಕುಮಾರ್ 34 ರನ್ ಗಳನ್ನು ನೀಡಿ 4 ವಿಕೆಟ್ ಹಾಗೂ ರಾಜ್ ಬಾವ 31 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು, ಇಬ್ಬರೂ ಬೌಲರ್ ಗಳು ತಲಾ 1 ಮೇಡಿನ್ ಓವರ್ ಮಾಡಿದರು. 

ಇಂಡಿಯಾಗೆ ಆರಂಭಿಕ ಆಘಾತ

ಇಂಗ್ಲೆಂಡ್ ತಂಡ ನೀಡಿದ್ದ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆಂಗ್ಕ್ರಿಶ್ ರಘುವಂಶಿ ಎರಡು ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೇ ವಿಕೆಟ್ ನೀಡಿದ್ದು ಆರಂಭಿಕ ಆಘಾತವಾಯಿತು. ಮತ್ತೋರ್ವ ಆರಂಭಿಕ ಆಟಗಾರ ಹರ್ನೂರ್ ಸಿಂಗ್ ಸಹ 46 ಎಸೆತಗಳನ್ನು ಎದುರಿಸಿ 21 ರನ್ ಗಳ ಸಾಧಾರಣ ಮೊತ್ತವನ್ನು ಕಲೆಹಾಕಿದರು. ಇದರಿಂದ 2ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಮೇಲೆ ಒತ್ತಡ ಹೆಚ್ಚಿಸಿತ್ತು.

ಇದನ್ನೂ ಓದಿ: MS Dhoni: ಅಥರ್ವನಾಗಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡ ಕೂಲ್ ಕ್ಯಾಪ್ಟನ್ ಧೋನಿ

 ನಡೆಯದ ರಶೀದ್-ಧುಲ್ ಜೊತೆಯಾಟ

ಈ ನಂತದಲ್ಲಿ 84 ಎಸೆತಗಳನ್ನು ಎದುರಿಸಿ 50 ರನ್ ಗಳಿಸುವ ಮೂಲಕ ಶೇಖ್ ರಶೀದ್ ತಂಡಕ್ಕೆ ಚೇತರಿಕೆ ನೀಡಿದರಾದರೂ ಯಶ್ ಧುಲ್ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ನಂತರ, ನಿಶಾಂತ್ ಸಿಂಧು 54 ಎಸೆತಗಳಲ್ಲಿ 50 ರನ್ ಗಳಿಸಿ ತಂಡದ ಗೆಲುವಿನ ಕನಸನ್ನು ಜೀವಂತವಾಗಿರಿಸಿದರು. ರಾಜ್ ಬಾವ 54 ಎಸೆತಗಳಲ್ಲಿ 34 ರನ್ ಗಳಿಸಿದರೆ, ನಿಶಾಂತ್ ಸಿಂಧು ಹಾಗೂ ದಿನೇಶ್ ಬನಾ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು.

ಟೀಂ ಇಂಡಿಯಾ ಉತ್ತಮ ಪ್ರದರ್ಶನ

ಶೇಖ್‌ ರಶೀದ್‌ (50 ರನ್‌, 84 ಎಸೆತ, 6 ಫೋರ್‌) ಮತ್ತು ನಿಶಾಂತ್‌ ಸಿಂಧೂ (50*) ಅವರ ಜವಾಬ್ದಾರಿಯುತ ಅರ್ಧಶತಕ ಹಾಗೂ ರಾಜ್ ಬಾವಾ ಮತ್ತು ರವಿ ಕುಮಾರ್‌ ಅವರ ಪರಿಣಾಮಕಾರಿ ಬೌಲಿಂಗ್‌ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ವಿಶ್ವ ಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಸೋಲಿಸಿತು. ಈ ಮೂಲಕ ದಾಖಲೆಯ ಐದನೇ ಬಾರಿ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿತು.

5ನೇ ಬಾರಿ ಅಂಡರ್ 19 ವಿಶ್ವಕಪ್ ಗೆದ್ದ ಭಾರತ

ಕಿರಿಯರ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ 5 ಬಾರಿ ಟ್ರೋಫಿ ಗೆದ್ದು ಅತ್ಯಂತ ಯಶಸ್ವಿ ತಂಡವೆನಿಸಿದೆ. ಆಸ್ಟ್ರೇಲಿಯಾ ಮೂರು ಬಾರಿ ಗೆದ್ದು ಎರಡನೇ ಯಶಸ್ವಿ ತಂಡವಾಗಿದ್ದು, ಪಾಕಿಸ್ತಾನ ಎರಡು ಬಾರಿ ಗೆದ್ದಿದೆ. ಉಳಿದಂತೆ ಬಾಂಗ್ಲಾದೇಶ, ಸೌತ್‌ ಆಫ್ರಿಕಾ, ವೆಸ್ಟ್‌ ಇಂಡೀಸ್‌ ಮತ್ತು ಇಂಗ್ಲೆಂಡ್‌ ತಲಾ ಒಂದು ಬಾರಿ ಗೆದ್ದಿವೆ.

ಇದನ್ನೂ ಓದಿ: Cristiano Ronaldo: 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಸ್ಟಿಯಾನೋ ರೊನಾಲ್ಡೊ

ವಿಶ್ವ ವಿಜೇತ ಭಾರತ

2018 ರಲ್ಲಿ ಪೃಥ್ವಿ ಶಾ ನೇತೃತ್ವದಲ್ಲಿ ಭಾರತ ಅಂಡರ್-19 ಕ್ರಿಕೆಟ್ ತಂಡ ಆಸ್ಟ್ರೇಲಿಯಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿ ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿತ್ತು. 2022 ರ ಗೆಲುವಿನ ಮೂಲಕ ಭಾರತ ಅಂಡರ್ 19 ತಂಡ 5ನೇ ಬಾರಿಗೆ ಅಂಡರ್ 19 ವಿಶ್ವಕಪ್ ಗೆದ್ದಂತಾಗಿದೆ.
Published by:Annappa Achari
First published: