ICC ODI Rankings: ಕುಸಿದ ಇಂಗ್ಲೆಂಡ್; ನಂಬರ್ ಒನ್ ಸ್ಥಾನಕ್ಕೇರಿದ ಭಾರತ

ಈಗಾಗಲೇ ಟೆಸ್ಟ್​ ಕ್ರಿಕೆಟ್​ನಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಭಾರತ ಸದ್ಯ ಐಸಿಸಿ ಏಕದಿನ ರ್ಯಾಂಕಿಂಗ್​ ಪಟ್ಟಿಯಲ್ಲಿ 123 ಅಂಕದೊಂದಿಗೆ ಮೊದಲ ಸ್ಥಾನಕ್ಕೇರಿದೆ.

Vinay Bhat | news18
Updated:June 27, 2019, 6:15 PM IST
ICC ODI Rankings: ಕುಸಿದ ಇಂಗ್ಲೆಂಡ್; ನಂಬರ್ ಒನ್ ಸ್ಥಾನಕ್ಕೇರಿದ ಭಾರತ
ಟೀಂ ಇಂಡಿಯಾ ಆಟಗಾರರು
  • News18
  • Last Updated: June 27, 2019, 6:15 PM IST
  • Share this:
ಬೆಂಗಳೂರು (ಜೂ. 27): ಸದ್ಯ ಸಾಗುತ್ತಿರುವ ವಿಶ್ವಕಪ್​ನಲ್ಲಿ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿರುವ ಭಾರತ ತಂಡ ಐಸಿಸಿ ಏಕದಿನ ರ್ಯಾಂಕಿಂಗ್​ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡ ಬೆನ್ನಲ್ಲೆ ಇಂಗ್ಲೆಂಡ್ ರ್ಯಾಂಕಿಂಗ್​ನಲ್ಲಿ ಕುಸಿತ ಕಂಡಿದ್ದು, ಎರಡನೇ ಸ್ಥಾನಕ್ಕೆ ಇಳಿದಿದೆ.

ಈಗಾಗಲೇ ಟೆಸ್ಟ್​ ಕ್ರಿಕೆಟ್​ನಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಭಾರತ ಸದ್ಯ ಐಸಿಸಿ ಏಕದಿನ ರ್ಯಾಂಕಿಂಗ್​ ಪಟ್ಟಿಯಲ್ಲಿ 123 ಅಂಕದೊಂದಿಗೆ ಮೊದಲ ಸ್ಥಾನಕ್ಕೇರಿದೆ. ಇತ್ತ 122 ಅಂಕ ಸಂಪಾದಿಸಿ ಇಂಗ್ಲೆಂಡ್ ಎರಡನೇ ಸ್ಥಾನಕ್ಕೆ ಕುಸಿದಿದೆ. ನ್ಯೂಜಿಲೆಂಡ್ 114 ಪಾಯಿಂಟ್​ನೊಂದಿಗೆ 3ನೇ ಸ್ಥಾನದಲ್ಲಿದೆ.

India vs West Indies: ವಿರಾಟ್ ಕೊಹ್ಲಿ ವಿಶ್ವದಾಖಲೆ; ಸಚಿನ್-ಲಾರಾ ದಾಖಲೆ ಉಡೀಸ್..!

 ಇದರ ಜೊತೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕದಿನ ಹಾಗೂ ಟೆಸ್ಟ್​ ರ್ಯಾಂಕಿಂಗ್​ನಲ್ಲಿ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿದ್ದಾರೆ. ಜಸ್​ಪ್ರೀತ್ ಬುಮ್ರಾ ಕೂಡ ಏಕದಿನ ಬೌಲಿಂಗ್​ ಶ್ರೇಯಾಂಕದಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

First published:June 27, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ