ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೇವಲ 2 ದಿನಗಳೊಳಗೆ ಮುಕ್ತಾಯವಾದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಮೊದಲ ಇನಿಂಗ್ಸ್ನಲ್ಲಿ 112 ರನ್ಗಳಿಸಿತ್ತು. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 145 ರನ್ಗೆ ಸರ್ವಪತನ ಕಾಣುವ ಮೂಲಕ 33 ರನ್ಗಳ ಮುನ್ನಡೆ ಪಡೆಯಿತು. ಆದರೆ ದ್ವಿತೀತ ಇನಿಂಗ್ಸ್ನಲ್ಲೂ ಅಕ್ಷರ್-ಅಶ್ವಿನ್ ಸ್ಪಿನ್ ಮೋಡಿಗೆ ತತ್ತರಿಸಿದ ಇಂಗ್ಲೆಂಡ್ ಕೇವಲ 81 ರನ್ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ಕೇವಲ 49 ರನ್ಗಳ ಟಾರ್ಗೆಟ್ ಪಡೆದ ಭಾರತ 7.4 ಓವರ್ನಲ್ಲಿ ಗುರಿ ಮುಟ್ಟುವ ಮೂಲಕ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಈ ಜಯದೊಂದಿಗೆ ನಾಲ್ಕು ಪಂದ್ಯಗಳ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ. ಅಷ್ಟೇ ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ.
ಈ ಹಿಂದೆ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ನಲ್ಲಿ ಹೀನಾಯವಾಗಿ ಸೋತಿದ್ದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಕುಸಿದಿತ್ತು. ಅಲ್ಲದೆ ಆಂಗ್ಲರ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನೊಂದಿಗೆ 2ನೇ ಸ್ಥಾನಕ್ಕೇರುವ ಮೂಲಕ, ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಸೆಯನ್ನು ಜೀವಂತವಿರಿಸಿಕೊಂಡಿತ್ತು. ಇದೀಗ ಮತ್ತೊಂದು ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡುವ ವಿಶ್ವಾಸದಲ್ಲಿದೆ.
ಭಾರತದ ವಿರುದ್ಧದ ಮೂರನೇ ಪಂದ್ಯದ ಸೋಲಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಚಾಂಪಿಯನ್ಶಿಪ್ ಫೈನಲ್ಗೇರುವ ಇಂಗ್ಲೆಂಡ್ ಆಸೆ ನುಚ್ಚು ನೂರಾಗಿದೆ. ಮುಂದಿನ ಪಂದ್ಯದಲ್ಲಿ ಭಾರತ ಡ್ರಾ ಸಾಧಿಸಿದರೆ ಫೈನಲ್ಗೆ ಏರಲಿದೆ. ಒಂದು ವೇಳೆ ಅಂತಿಮ ಟೆಸ್ಟ್ನಲ್ಲಿ ಭಾರತ ಸೋತರೆಆಸ್ಟ್ರೇಲಿಯಾ ಪಾಲಿಗೆ ವರದಾನವಾಗಲಿದ್ದು, ಪಾಯಿಂಟ್ ನೆಟ್ ಸರಾಸರಿಯಲ್ಲಿ ಭಾರತವನ್ನು ಹಿಂದಕ್ಕೆ ತಳ್ಳಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ಆಡುವ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲಿದೆ.
India top the table 👏
They now need to win or draw the last Test to book a place in the #WTC21 final 👀#INDvENG pic.twitter.com/FQcBTw6dj6
— ICC (@ICC) February 25, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ