news18-kannada Updated:March 8, 2021, 10:32 PM IST
WTC
ಭಾರತ-ನ್ಯೂಜಿಲೆಂಡ್ ನಡುವಣ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಕ್ರೀಡಾಂಗಣವನ್ನು ಬದಲಿಸಲಾಗಿದೆ. ಈ ಹಿಂದೆ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಿಗದಿಯಾಗಿದ್ದ ಪಂದ್ಯವನ್ನು ಇದೀಗ ಇಂಗ್ಲೆಂಡ್ನ ಸೌತಾಂಪ್ಟನ್ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಸೌತಾಂಪ್ಟನ್ನ ಏಜಸ್ಬೌಲ್ನಲ್ಲಿ ಜೂನ್ 18 ರಿಂದ 22ರವರೆಗೆ ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಕ್ರಿಕೆಟ್ ಕದನ ನಡೆಯಲಿದೆ.
ಈ ಹಿಂದೆ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಲಾರ್ಡ್ಸ್ ಮೈದಾನದಲ್ಲಿ ಟೆಸ್ಟ್ ಚಾಂಪಿಯನ್ಶಿಪ್ ನಡೆಸಲು ನಿರ್ಧರಿಸಿತ್ತು. ಆದರೀಗ ಸೌತಾಂಪ್ಟನ್ ಕ್ರೀಡಾಂಗಣವನ್ನು ಅಂತಿಮಗೊಳಿಲಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಸೌತಾಂಪ್ಟನ್ನ ಸ್ಟೇಡಿಯಂನಲ್ಲೇ ಫೈವ್ ಸ್ಟಾರ್ ಹೋಟೆಲ್ನ ಸೌಲಭ್ಯವಿದೆ. ಇದರಿಂದ ಆಟಗಾರರ ಪ್ರಯಾಣ ಹಾಗೂ ಬಯೋಬಬಲ್ ವ್ಯವಸ್ಥೆ ಮಾಡಲು ಸಹಾಯಕವಾಗಲಿದೆ. ಹೀಗಾಗಿ ಮೈದಾನವನ್ನು ಬದಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ವೇಳೆ ನಾನು ಕೂಡ ಇಂಗ್ಲೆಂಡ್ಗೆ ಪ್ರಯಾಣಿಸುವುದಾಗಿ ತಿಳಿಸಿದ ಗಂಗೂಲಿ, ಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ನ್ನು ಸೋಲಿಸಿ ಟೆಸ್ಟ್ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Published by:
zahir
First published:
March 8, 2021, 10:32 PM IST