• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • Irfan Pathan: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತದ ಸೋಲಿಗೆ ಪ್ರಮುಖ ಕಾರಣ ತಿಳಿಸಿ ಇರ್ಫಾನ್ ಪಠಾಣ್

Irfan Pathan: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತದ ಸೋಲಿಗೆ ಪ್ರಮುಖ ಕಾರಣ ತಿಳಿಸಿ ಇರ್ಫಾನ್ ಪಠಾಣ್

Irfan Pathan

Irfan Pathan

ವಾರಗಳೇ ಕಳೆದರೂ ಫೈನಲ್ ಪಂದ್ಯದ ಕುರಿತಾದ ಚರ್ಚೆಗಳು ಮುಂದುವರೆದಿದೆ. ಅದರಲ್ಲೂ ಭಾರತ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈಚೆಲ್ಲಿಕೊಂಡಿತು ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

  • Share this:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಗೆಲ್ಲುವ ಫೇವರೇಟ್ ತಂಡವೆನಿಸಿಕೊಂಡಿದ್ದ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋಲನುಭವಿಸಿತು. ಸೌತಂಪ್ಟನ್​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 8 ವಿಕೆಟ್​ಗಳಿಂದ ಬಗ್ಗು ಬಡಿದು ಕೇನ್ ವಿಲಿಯಮ್ಸನ್ ನೇತೃತ್ವದ ಕಿವೀಸ್ ಪಡೆ ಚೊಚ್ಚಲ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಮುಡಿಗೇರಿಸಿಕೊಂಡಿತು. ಇದಾಗಿ ವಾರಗಳೇ ಕಳೆದರೂ ಫೈನಲ್ ಪಂದ್ಯದ ಕುರಿತಾದ ಚರ್ಚೆಗಳು ಮುಂದುವರೆದಿದೆ. ಅದರಲ್ಲೂ ಭಾರತ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೈಚೆಲ್ಲಿಕೊಂಡಿತು ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.


ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್, ಸೋಲಿಗೆ ಪ್ರಮುಖ ಕಾರಣವನ್ನು ವಿಶ್ಲೇಷಿಸಿದ್ದಾರೆ. ಪಠಾಣ್ ಪ್ರಕಾರ ಭಾರತ ಫೈನಲ್ ಪಂದ್ಯದಲ್ಲಿ ಸೋಲಲು ಮುಖ್ಯ ಕಾರಣ ಕಡಿಮೆ ಬ್ಯಾಟ್ಸ್​ಮನ್​ಗಳೊಂದಿಗೆ ಕಣಕ್ಕಿಳಿದಿರುವುದು. ತಂಡದಲ್ಲಿ ಹೆಚ್ಚುವರಿ ಬ್ಯಾಟ್ಸ್​ಮನ್ ಇದ್ದಿದ್ದರೆ ಭಾರತಕ್ಕೆ ಗೆಲ್ಲುವ ಅಥವಾ ಡ್ರಾ ಮಾಡಿಕೊಳ್ಳುವ ಅವಕಾಶವಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ ಇರ್ಫಾನ್ ಪಠಾಣ್.


ಭಾರತ ತಂಡವು ಆಲ್​ರೌಂಡರ್​ನೊಂದಿಗೆ ಕಣಕ್ಕಿಳಿದಿತ್ತು. ಆದರೆ ನ್ಯೂಜಿಲೆಂಡ್ ತಂಡದಲ್ಲಿದ್ದಂತೆ ವೇಗದ ಬೌಲರ್ ಹೊಂದಿರುವ ಆಲ್​ರೌಂಡರ್ ಭಾರತ ತಂಡದಲ್ಲಿರಲಿಲ್ಲ. ಇದಾಗ್ಯೂ ಭಾರತ ಮೊದಲ ಇನಿಂಗ್ಸ್​ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿತು ಎನ್ನಬಹುದು. ಆದರೆ ಎರಡನೇ ಇನಿಂಗ್ಸ್​ನಲ್ಲಿ ಭಾರತದ ಬ್ಯಾಟಿಂಗ್ ನಿರಾಶಾದಾಯಕವಾಗಿತ್ತು ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.


ಏಕೆಂದರೆ ಎರಡನೇ ಇನ್ನಿಂಗ್‌ನಲ್ಲಿ ಚೆಂಡು ಹೆಚ್ಚು ಸ್ವಿಂಗ್ ಆಗುತ್ತಿರಲಿಲ್ಲ. ಹೀಗಾಗಿ ಭಾರತೀಯ ಬ್ಯಾಟ್ಸಮನ್‌ಗಳು ಹೆಚ್ಚು ಜವಾಬ್ದಾರಿಯುತವಾಗಿ ಬ್ಯಾಟಿಂಗ್ ಮಾಡಬೇಕಿತ್ತು. ರಿಷಭ್ ಪಂತ್ ಅತ್ಯುತ್ತಮ ಬ್ಯಾಟ್ಸ್​ಮನ್ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಇದರ ಅರ್ಥ ವೇಗದ ಬೌಲರ್​ಗಳಿಗೆ ಬೇಜವಾಬ್ದಾರಿಯಿಂದ ಆಡುವುದು ಎಂದರ್ಥವಲ್ಲ ಎಂದು ಇರ್ಫಾನ್ ಪಠಾಣ್ ಹೇಳಿದರು.


ಒಟ್ಟಿನಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳ ಕಳಪೆ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಜಯ ಸಾಧಿಸಲು ಅಥವಾ ಡ್ರಾ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಮ್ ಇಂಡಿಯಾ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

top videos
    First published: