• Home
 • »
 • News
 • »
 • sports
 • »
 • India T20 squad in NZ: ನ್ಯೂಜಿಲೆಂಡ್, ಬಾಂಗ್ಲಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ

India T20 squad in NZ: ನ್ಯೂಜಿಲೆಂಡ್, ಬಾಂಗ್ಲಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಗಮನಾರ್ಹ ವಿಷಯವೆಂದರೆ ದಿನೇಶ್ ಕಾರ್ತಿಕ್. ನ್ಯೂಜಿಲೆಂಡ್‌ಗೆ ಟಿ20 ತಂಡದಿಂದ ದಿನೇಶ್ ಕಾರ್ತಿಕ್​ರನ್ನುಕೈಬಿಡಲಾಗಿದೆ.

 • Share this:

  ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧದ ಭಾರತ ತಂಡದ ಪ್ರವಾಸಕ್ಕೆ ಟೀಮ್ ಇಂಡಿಯಾ ತಂಡ ಪ್ರಕಟಿಸಲಾಗಿದೆ. ಹಾರ್ದಿಕ್ ಪಾಂಡ್ಯ ಟಿ20 ಅಂತರಾಷ್ಟ್ರೀಯ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದು, ಶಿಖರ್ ಧವನ್ ಏಕದಿನ ಕ್ರಿಕೆಟ್‌ಗೆ ನಾಯಕತ್ವ ವಹಿಸಲಿದ್ದಾರೆ. ನ್ಯೂಜಿಲೆಂಡ್ ಸರಣಿಯಿಂದ (India T20 squad in NZ) ರೋಹಿತ್ ಶರ್ಮಾ (Rohit Sharma) ಕೆಎಲ್ ರಾಹುಲ್ (KL Rahul) ಮತ್ತು ವಿರಾಟ್ ಕೊಹ್ಲಿಗೆ (Virat Kohli) ವಿಶ್ರಾಂತಿ ನೀಡಲಾಗಿದೆ.  ಆದರೆ ಬಾಂಗ್ಲಾದೇಶ ಪ್ರವಾಸಕ್ಕೆ ಕೊಹ್ಲಿ ಮರಳಲಿದ್ದಾರೆ. ಸಂಜು ಸ್ಯಾಮ್ಸನ್ ಕೂಡ ನ್ಯೂಜಿಲೆಂಡ್ ಸರಣಿಗೆ ಮರಳಿದ್ದಾರೆ. ಆದರೆ, ಅವರು ಬಾಂಗ್ಲಾದೇಶ ಪ್ರವಾಸದಿಂದ ಹೊರಗುಳಿದಿದ್ದಾರೆ. ಉಮ್ರಾನ್ ಮಲಿಕ್ ಕೂಡ ಸ್ಥಾನ ಪಡೆದಿದ್ದಾರೆ.


  ಬೆನ್ನುನೋವಿನಿಂದ ಬಳಲುತ್ತಿರುವ ದೀಪಕ್ ಚಹಾರ್ ಬಾಂಗ್ಲಾದೇಶ ಪ್ರವಾಸಕ್ಕೆ ಮರಳಲಿದ್ದಾರೆ. ಆದರೆ, ಜಸ್ಪ್ರೀತ್ ಬುಮ್ರಾಗೆ ಅವಕಾಶ ನೀಡಲಾಗಿಲ್ಲ.  ತವರಿನಲ್ಲಿ ಆಸ್ಟ್ರೇಲಿಯಾ ಸರಣಿಗಾಗಿ ಅವರು ಡಿಸೆಂಬರ್‌ನಲ್ಲಿ ಮರಳುವ ಸಾಧ್ಯತೆಯಿದೆ. ಇನ್ನೊಂದು ಗಮನಾರ್ಹ ವಿಷಯವೆಂದರೆ ದಿನೇಶ್ ಕಾರ್ತಿಕ್. ನ್ಯೂಜಿಲೆಂಡ್‌ಗೆ ಟಿ20 ತಂಡದಿಂದ ದಿನೇಶ್ ಕಾರ್ತಿಕ್​ರನ್ನುಕೈಬಿಡಲಾಗಿದೆ.


  ಕೆಎಲ್ ರಾಹುಲ್ ಅವರಿಗೆ ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.


  ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯಕ್ಕೆ ಭಾರತ ತಂಡ ಹೀಗಿರಲಿದೆ:
  ಹಾರ್ದಿಕ್ ಪಾಂಡ್ಯ (C), ರಿಷಬ್ ಪಂತ್ (vc & wk), ಶುಬ್ಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (wk), W ಸುಂದರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊ. ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.


  ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಪಂದ್ಯಕ್ಕೆ ತಂಡ ಹೀಗಿದೆ
  ಶಿಖರ್ ಧವನ್ (C), ರಿಷಬ್ ಪಂತ್ (vc & wk), ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (wk), W ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ದೀಪಕ್ ಚಹಾರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.


  ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯಕ್ಕೆ ತಂಡ ಹೀಗಿದೆ
  ರೋಹಿತ್ ಶರ್ಮಾ (ಸಿ), ಕೆಎಲ್ ರಾಹುಲ್ (ವಿಸಿ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಾಕ್), ಇಶಾನ್ ಕಿಶನ್ (ವಾಕ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಡಬ್ಲ್ಯೂ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್


  ಇದನ್ನೂ ಓದಿ: Virat Kohli: ಕೊಹ್ಲಿ ಬೆಡ್​​​ ರೂಂ ವಿಡಿಯೋ ವೈರಲ್​, ತಾಳ್ಮೆ ಕಳೆದುಕೊಂಡ ವಿರಾಟ್!


  ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ತಂಡ
  ರೋಹಿತ್ ಶರ್ಮಾ (ಸಿ), ಕೆಎಲ್ ರಾಹುಲ್ (ವಿಸಿ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಾಕ್), ಕೆಎಸ್ ಭರತ್ (ವಾಕ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊ. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.


  2022ರ ಟಿ20 ವಿಶ್ವಕಪ್‌ ಮುಂದಿನ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಅಲಭ್ಯ
  2022ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಮೊದಲ ಸೋಲು ಕಂಡಿದೆ. ಸತತ ಎರಡು ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ರೋಹಿತ್ ಸೇನೆಗೆ ದಕ್ಷಿಣ ಆಫ್ರಿಕಾದ ಕೈಯಿಂದ ಆಘಾತ ಎದುರಾಗಿದೆ.


  ಇದನ್ನೂ ಓದಿ: IND vs BAN: ಭಾರತ-ಬಾಂಗ್ಲಾ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ, ಸೆಮೀಸ್​ಗೆ ಪಾಕ್​ ಎಂಟ್ರಿ?


  ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಮಾಡುತ್ತಿರುವಾಗ, ಕಾರ್ತಿಕ್ ಹಾರ್ದಿಕ್ ಪಾಂಡ್ಯ ಅವರ ಬೌನ್ಸರ್ ಅನ್ನು ತಡೆಯುವ ಪ್ರಯತ್ನದಲ್ಲಿ ಗಾಳಿಯಲ್ಲಿ ಎತ್ತರಕ್ಕೆ ಹಾರಿದರು. ಈ ವೇಳೆ ಅವರ ಬೆನ್ನು ಉಳುಕಿದೆ.

  Published by:ಗುರುಗಣೇಶ ಡಬ್ಗುಳಿ
  First published: