ಬ್ರಿಸ್ಬೇನ್ (ಜ. 15): ಇಲ್ಲಿನ ದಿ ಗಬ್ಬಾ ಕ್ರಿಕೆಟ್ ಗ್ರೌಂಡ್ನಲ್ಲಿ ಆರಂಭವಾಗಿರುವ ಭಾರತ ವಿರುದ್ಧದ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅದರಲ್ಲೂ ಭಾರತ ಪರ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವಾಷಿಂಗ್ಟನ್ ಸುಂದರ್ ವಿಶ್ವದ 2ನೇ ಟೆಸ್ಟ್ ಬ್ಯಾಟ್ಸ್ಮನ್ ಆಗಿರುವ ಸ್ಟೀವ್ ಸ್ಮಿತ್ ವಿಕೆಟ್ ಕಿತ್ತು ಮಿಂಚಿದ್ದಾರೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು...
ಭಾರತ ಪರ ಇಬ್ಬರು ಆಟಗಾರರು ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಯಾರ್ಕರ್ ಕಿಂಗ್ ಟಿ. ನಟರಾಜನ್ ಹಾಗೂ ವಾಷಿಂಗ್ಟನ್ ಸುಂದರ್ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಇನ್ನೂ ಶಾರ್ದೂಲ್ ಠಾಕೂರ್ ಹಾಗೂ ಮಯಾಂಕ್ ಅಗರ್ವಾಲ್ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ಮೊಹಮ್ಮದ್ ಸಿರಾಜ್ ಬೌಲಿಂಗ್ನ ಮೊದಲ ಓವರ್ನಲ್ಲೆ ಡೇವಿಡ್ ವಾರ್ನರ್(1) ಔಟ್ ಆದರೆ, ಮಾರ್ಕಸ್ ಹ್ಯಾರಿಸ್ 5 ರನ್ ಗಳಿಸಿ ಶಾರ್ದೂಲ್ ಠಾಕೂರ್ಗೆ ವಿಕೆಟ್ ಒಪ್ಪಿಸಿದರು.
ಬಳಿಕ ಒಂದಾದ ಮಾರ್ನಸ್ ಲಾಬುಶೇನ್ ಹಾಗೂ ಸ್ಟೀವ್ ಸ್ಮಿತ್ ಎಚ್ಚರಿಕೆಯಿಂದ ಬ್ಯಾಟ್ ಬೀಸಿದರು. ಕ್ರೀಸ್ ಕಚ್ಚಿ ನಿಂತ ಈ ಜೋಡಿ ಅರ್ಧಶತಕದ ಜೊತೆಯಾಟ ಆಡಿತು. ಕಳೆದ ಪಂದ್ಯದಲ್ಲಿ ಭರ್ಜರಿ ಆಟ ಪ್ರದರ್ಶಿಸಿದ್ದ ಸ್ಮಿತ್ ಈ ಬಾರಿ ಕೂಡ ಅದೇ ಲಯದಲ್ಲಿ ಬ್ಯಾಟ್ ಬೀಸುತ್ತಿದ್ದರು. ಆದರೆ, ಇವರ ಆಟಕ್ಕೆ ಬ್ರೇಕ್ ಹಾಕಿದ್ದು ವಾಷಿಂಗ್ಟನ್ ಸುಂದರ್.
ಹೌದು, ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ವಿಶ್ವ ಶ್ರೇಷ್ಠ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಅವರನ್ನು ಔಟ್ ಮಾಡಿ ಡ್ರೀಮ್ ಡೆಬ್ಯೂ ಮಾಡಿದರು. ಸುಂದರ್ ಸ್ಪಿನ್ ಮೋಡಿಗೆ 77 ಎಸೆತಗಳಲ್ಲಿ 36 ರನ್ ಗಳಿಸಿದ್ದ ಸ್ಮಿತ್ ಪೆವಿಲಿನ್ ಸೇರಬೇಕಾಯಿತು.
Sophie Devine: 9 ಸೂಪರ್ ಸಿಕ್ಸ್, 7 ಭರ್ಜರಿ ಬೌಂಡರಿ: ಸೋಫಿ ಸಿಡಿಲಬ್ಬರಕ್ಕೆ ಟಿ20 ದಾಖಲೆ ಉಡೀಸ್..!
ಭಾರತ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯಾ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನವ್ದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮರೊನ್ ಗ್ರೀನ್, ಟಿಮ್ ಪೈನ್(ನಾಯಕ- ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹೇಝಲ್‌ವುಡ್, ನಾಥನ್ ಲಿಯಾನ್.
ಈಗಾಗಲೇ ಸರಣಿ 1-1 ಸಮಬಲ ಸ್ಥಿತಿಯಲ್ಲಿದ್ದು, ಭಾರತ ಈ 4ನೇ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳಲಿದೆ. ಆದರೆ ಈ ಟ್ರೋಫಿ ಆಸ್ಟ್ರೇಲಿಯಕ್ಕೆ ಸಿಗಬೇಕಾದರೆ ಅದು ಗೆಲ್ಲುವುದು ಅನಿವಾರ್ಯ.
IPL 2021: ಮುಂಬೈ ಇಂಡಿಯನ್ಸ್ ಈ ಮೂವರನ್ನು ಕೈ ಬಿಡುವುದು ಬಹುತೇಕ ಖಚಿತ..!
ಸಿಡ್ನಿಯಲ್ಲಿ ಆಸೀಸ್ ಪಡೆಗೆ ಗೆಲ್ಲುವ ಉತ್ತಮ ಅವಕಾಶ ವೊಂದಿತ್ತು. ಆದರೆ, ಭಾರತ ಶಿಸ್ತು ಹಾಗೂ ಕೆಚ್ಚೆದೆಯ ಆಟದ ಮೂಲಕ ಪಂದ್ಯವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಹನುಮಾ ವಿಹಾರಿ ಹಾಗೂ ಆರ್. ಅಶ್ವಿನ್ ತಂಡಕ್ಕೆ ನೆರವಾದರು. ಹೀಗಾಗಿ ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ