ಅಡಿಲೇಡ್ (ಡಿ. 19): ಇಲ್ಲಿನ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಭಾರತ ವಿರುದ್ಧದ ಮೊದಲ ಡೇ – ನೈಟ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಗೆಲುವು ಸಾಧಿಸಿದೆ. ಬೌಲರ್ಗಳ ಅಮೋಘ ಪ್ರದರ್ಶನದ ನೆರವಿನಿಂದ ಕಾಂಗರೂ ಪಡೆ 8 ವಿಕೆಟ್ಗಳ ಜಯ ಸಾಧಿಸಿ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇತ್ತ ಭಾರತೀಯ ಬ್ಯಾಟ್ಸ್ಮನ್ಗಳು ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ಪ್ರದರ್ಶನ ತೋರಿ ಭಾರೀ ಮುಖಭಂಗ ಅನುಭವಿಸಿದ್ದಾರೆ. ವಿರಾಟ್ ಕೊಹ್ಲಿ ಈ ಟೆಸ್ಟ್ ಬಳಿಕ ತವರಿಗೆ ಮರಳುತ್ತಿದ್ದು, ಇದು ಭಾರತಕ್ಕೆ ಮತ್ತಷ್ಟು ಹಿನ್ನಡೆಯಾಗಲಿದೆ.
ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್ನಲ್ಲಿ ಹಿಂದೆಂದೂ ನೀಡದ ಅತ್ಯಂತ ಕಳಪೆ ಪ್ರದರ್ಶನ ತೋರಿತು. ಕೇವಲ 36 ರನ್ಗೆ 9 ವಿಕೆಟ್ ಕಳೆದುಕೊಳ್ಳುವ ಮೂಲಕ ಆಸ್ಟ್ರೇಲಿಯಾಕ್ಕೆ ಗೆಲ್ಲಲು 90 ರನ್ಗಳ ಟಾರ್ಗೆಟ್ ನೀಡಿತು.
That's that from the 1st Test.
Australia win by 8 wickets and go 1-0 up in the four-match series.
Scorecard - https://t.co/dBLRRBSJrx #AUSvIND pic.twitter.com/B00dlrLoeu
— BCCI (@BCCI) December 19, 2020
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ನಾಯಕ ವಿರಾಟ್ ಕೊಹ್ಲಿ ಅವರ 74 ರನ್, ಚೇತೇಶ್ವರ್ ಪೂಜಾರ 43 ಹಾಗೂ ಉಪ ನಾಯಕ ಅಜಿಂಕ್ಯಾ ರಹಾನೆaವರ 42 ರನ್ಗಳ ನೆರವಿನಿಂದ 244 ರನ್ ಗಳಿಸಿತು. ಇತ್ತ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ ಭಾರತೀಯ ಬೌಲರ್ಗಳ ದಾಳಿಗೆ ಕುಸಿದು ಹೋಯಿತು.
ಆಸ್ಟ್ರೇಲಿಯಾ ಆರಂಭದಿಂದ ವಿಕೆಟ್ ಕಳೆದುಕೊಂಡು ಸಾಗಿತು. ಟಿಮ್ ಪೈನ್ 99 ಎಸೆತಗಳಲ್ಲಿ ಅಜೇಯ 73 ರನ್ ಗಳಿಸಿದರು. ಆಸ್ಟ್ರೇಲಿಯಾ 72.1 ಓವರ್ಗಳಲ್ಲಿ 191 ರನ್ಗೆ ಆಲೌಟ್ ಆಯಿತು. ಭಾರತ ಪರ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಕಿತ್ತು ಮಿಂಚಿದರೆ, ಉಮೇಶ್ ಯಾದವ್ 3 ಹಾಗೂ ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು.
53 ರನ್ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಪ್ಯಾಟ್ ಕಮಿನ್ಸ್ ಹಾಗೂ ಜೋಷ್ ಹ್ಯಾಜ್ಲೆವುಡ್ ಬೌಲಿಂಗ್ ದಾಳಿಗೆ ಅಲ್ಪ ಮೊತ್ತಕ್ಕೆ ಕುಸಿಯಿತು. ಎರಡನೇ ದಿನದಾಟದ ಅಂತ್ಯಕ್ಕೆ 9 ರನ್ಗೆ 1 ವಿಕೆಟ್ ಕಳೆದುಕೊಂಡಿದ್ದ ಭಾರತ ಇಂದು ಮೂರನೇ ದಿನದಾಟದ ಆರಂಭದಲ್ಲೇ ತರಗೆಲೆಯಂತೆ ವಿಕೆಟ್ ಉರುಳಿದವು.
Six and fifty for Joe Burns!
What a way to seal victory for Australia! #AUSvIND pic.twitter.com/9ZLfC3f41r
— cricket.com.au (@cricketcomau) December 19, 2020
ಆರ್. ಅಶ್ವಿನ್ ಸೊನ್ನೆ ಸುತ್ತಿದರು. ಮೊಹಮ್ಮದ್ ಶಮಿ ಇಂಜುರಿಗೆ ತುತ್ತಾದ ಪರಿಣಾಮ ಬ್ಯಾಟಿಂಗ್ ಮುಂದುವರೆಸಲು ಸಾಧ್ಯವಾಗಲಿಲ್ಲ. ಹೀಗಾಗಿ ಭಾರತ 21.2 ಓವರ್ನಲ್ಲಿ ಕೇವಲ 36 ರನ್ಗೆ 9 ವಿಕೆಟ್ ಕಳೆದುಕೊಂಡಾಗ ಆಟ ನಿಲ್ಲಿಸಿತು. ಆಸ್ಟ್ರೇಲಿಯಾ ಪರ ಜೋಷ್ ಹ್ಯಾಜ್ಲೆವುಡ್ 5 ವಿಕೆಟ್ ಕಿತ್ತು ಮಿಂಚಿದರೆ, ಪ್ಯಾಟ್ ಕಮಿನ್ಸ್ 4 ವಿಕೆಟ್ ಪಡೆದರು. ಈ ಮೂಲಕ ಭಾರತ ತಂಡ ಆಸ್ಟ್ರೇಲಿಯಾಕ್ಕೆ ಗೆಲ್ಲಲು 88 ರನ್ಗಳ ಸುಲಭ ಟಾರ್ಗೆಟ್ ನೀಡಿತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ