news18-kannada Updated:December 15, 2020, 6:07 PM IST
Australia
ಡಿಸೆಂಬರ್ 17 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭವಾಗಲಿದೆ. ಹೊನಲು-ಬೆಳಕಿನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಇಡೀ ವಿಶ್ವ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಅತ್ತ ದಿನ ಕಳೆದಂತೆ ಆಸ್ಟ್ರೇಲಿಯಾ ತಂಡದಲ್ಲಿ ಒಬ್ಬರೊಬ್ಬರೆ ಗಾಯಗೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿ ಈಗಾಲೇ ಡೇವಿಡ್ ವಾರ್ನರ್ ಸೇರಿದಂತೆ ಪ್ರಮುಖ ಆಟಗಾರರು ಗಾಯದಿಂದ ಬಳಲುತ್ತಿದ್ದಾರೆ. ಡೇವಿಡ್ ವಾರ್ನರ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್, ಮಾರ್ಕಸ್ ಸ್ಟೋಯಿನಿಸ್, ವಿಲ್ ಪುಕೋವ್ಸ್ಕಿ, ಕ್ಯಾಮರೂನ್ ಗ್ರೀನ್, ಶಾನ್ ಅಬಾಟ್ ಈ ಎಲ್ಲರೂ ಗಾಯಗೊಂಡಿದ್ದಾರೆ. ಇದರಲ್ಲಿ ಕೆಲವರು ಮೊದಲ ಟೆಸ್ಟ್ ವೇಳೆಗೆ ಚೇತರಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಆದರೀಗ ತಂಡದ ಪ್ರಮುಖ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಸಹ ಗಾಯಗೊಂಡಿರುವುದು ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ. ಅಭ್ಯಾಸ ಪಂದ್ಯದ ವೇಳೆ ಸ್ಮಿತ್ ಬೆನ್ನು ನೋವಿಗೆ ತುತ್ತಾಗಿದ್ದು, ಹೀಗಾಗಿ ಮಂಗಳವಾರ ಅಭ್ಯಾಸದಿಂದ ಹೊರಗುಳಿದಿದ್ದಾರೆ. ಅಲ್ಲದೆ ಇದಕ್ಕೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಹೀಗಾಗಿ ಬುಧವಾರದವರೆಗೂ ಮೈದಾನಕ್ಕೆ ಇಳಿಯುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ.
ಒಂದು ವೇಳೆ ಬುಧವಾರದೊಳಗೆ ಚೇತರಿಸಿಕೊಳ್ಳದಿದ್ರೆ ಮೊದಲ ಟೆಸ್ಟ್ ಪಂದ್ಯದಿಂದ ಸ್ಟೀವ್ ಸ್ಮಿತ್ ಹೊರಗುಳಿಯುವುದು ಬಹುತೇಕ ಖಚಿತ. ಅತ್ತ ಡೇವಿಡ್ ವಾರ್ನರ್ ಮೊದಲ ಟೆಸ್ಟ್ಗೆ ಅಲಭ್ಯರಾಗಿದ್ದು, ಇದೀಗ ಸ್ಮಿತ್ ಕೂಡ ತಂಡದಿಂದ ಹೊರಗುಳಿದರೆ ಆಸ್ಟ್ರೇಲಿಯಾ ತಂಡಕ್ಕೆ ಅನುಭವಿ ಬ್ಯಾಟ್ಸ್ಮನ್ಗಳ ಕೊರತೆ ಕಾಡುವುದಂತು ನಿಜ.
ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿರುವುದು ವಿಶೇಷ. ಈ ಪಂದ್ಯ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.
ಇದನ್ನೂ ಓದಿ: ಅಚ್ಚರಿಯ ಆಯ್ಕೆ: ಆಕಾಶ್ ಚೋಪ್ರಾ ಹೆಸರಿಸಿದ ದಶಕದ ಟಿ20 ತಂಡದಲ್ಲಿ ಯಾರಿಗೆಲ್ಲಾ ಸ್ಥಾನ?ಇನ್ನೂ ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್ ಬ್ರಿಸ್ಬೇನ್ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ. ಎರಡು ಹಾಗೂ ಮೂರನೇ ಟೆಸ್ಟ್ ಮುಂಜಾನೆ 5 ಗಂಟೆಗೆ ಶುರುವಾದರೆ, ಅಂತಿಮ ಟೆಸ್ಟ್ 5:30ಕ್ಕೆ ಆರಂಭವಾಗಲಿದೆ.
Published by:
zahir
First published:
December 15, 2020, 3:44 PM IST