India vs Australia: ಭಾರತ-ಆಸ್ಟ್ರೇಲಿಯಾ ಸರಣಿ ವೇಳಾಪಟ್ಟಿ ಪ್ರಕಟ: ಡೇ-ನೈಟ್ ಟೆಸ್ಟ್​ಗೆ ಅಸ್ತು

ಏಕದಿನ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9.10 ಕ್ಕೆ ಆರಂಭವಾಗಲಿದ್ದು, ಹಾಗೆಯೇ ಟಿ20 ಪಂದ್ಯಗಳು ಮಧ್ಯಾಹ್ನ 1.40 ಕ್ಕೆ ನಡೆಯಲಿದೆ

Virat kohli

Virat kohli

 • Share this:
  ಭಾರತದ ಮುಂಬರುವ ಪೂರ್ಣ ಆಸ್ಟ್ರೇಲಿಯಾ ಪ್ರವಾಸದ ವೇಳಾಪಟ್ಟಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ. ಕೋವಿಡ್ -19 ನಂತರ ಇದು ಭಾರತದ ಮೊದಲ ಅಂತರರಾಷ್ಟ್ರೀಯ ಸರಣಿಯಾಗಿದ್ದು, ಸಂಪೂರ್ಣ ಸುರಕ್ಷತಾ ನಿಯಮದೊಂದಿಗೆ ಉಭಯ ತಂಡಗಳು ಮಹತ್ವದ ಸರಣಿ ಆಡಲಿದೆ. ಒಟ್ಟು 3 ಏಕದಿನ, 3 ಟಿ20 ಮತ್ತು 4 ಟೆಸ್ಟ್ ಪಂದ್ಯಗಳಾಡಲಿದ್ದು, ಟೀಮ್ ಇಂಡಿಯಾ ನವೆಂಬರ್ 12 ಕ್ಕೆ ಸಿಡ್ನಿ ತಲುಪಲಿದೆ.

  ನವೆಂಬರ್ 27 ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಉಳಿದೆರಡು ಮ್ಯಾಚ್​ಗಳು ನವೆಂಬರ್ 29 ಹಾಗೂ ಡಿಸೆಂಬರ್ 2 ರಂದು ನಡೆಯಲಿದೆ. ಹಾಗೆಯೇ ಮೊದಲ ಟಿ20 ಪಂದ್ಯ ಡಿಸೆಂಬರ್ 4 ರಂದು ನಡೆಯಲಿದ್ದು, ಡಿಸೆಂಬರ್ 6 ಮತ್ತು 8 ರಂದು 2ನೇ ಮತ್ತು 3ನೇ ಟಿ20 ಪಂದ್ಯ ಜರುಗಲಿದೆ.

  ಇನ್ನು ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿರುವುದು ವಿಶೇಷ. ಹಾಗೆಯೇ ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್​ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್​ ಬ್ರಿಸ್ಬೇನ್​ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ.

  ಏಕದಿನ ಪಂದ್ಯಗಳು ಭಾರತೀಯ ಕಾಲಮಾನ ಬೆಳಿಗ್ಗೆ 9.10 ಕ್ಕೆ ಆರಂಭವಾಗಲಿದ್ದು, ಹಾಗೆಯೇ ಟಿ20 ಪಂದ್ಯಗಳು ಮಧ್ಯಾಹ್ನ 1.40 ಕ್ಕೆ ನಡೆಯಲಿದೆ. ಇನ್ನು ಡೇ-ನೈಟ್​ ಟೆಸ್ಟ್ ಪಂದ್ಯ ಬೆಳಿಗ್ಗೆ 9.30 ರಿಂದ ಆರಂಭವಾದರೆ, ಉಳಿದೆರೆಡು ಟೆಸ್ಟ್​ ಪಂದ್ಯಗಳು ಮುಂಜಾನೆ 5 ಕ್ಕೆ ಶುರುವಾಗಲಿದೆ.

  ಆಸ್ಟ್ರೇಲಿಯಾ ಸರಣಿಗೆ ಆಯ್ಕೆಯಾದ ಟೀಮ್ ಇಂಡಿಯಾ

  ಟಿ20 ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ದೀಪಕ್ ಚಹರ್, ವರುಣ್ ಚಕ್ರವರ್ತಿ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್​ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ

  ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಶುಭ್​ಮನ್ ಗಿಲ್, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್

  ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ಶುಭ್​ಮನ್ ಗಿಲ್, ವೃದ್ಧಿಮಾನ್ ಸಾಹ, ರಿಷಭ್ ಪಂತ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್

  ಇದನ್ನೂ ಓದಿ: IPL 2020: ಬೆನ್ ಸ್ಟೋಕ್ಸ್ ಬೆರಳು ಮಡಚಿದ್ದರ ಹಿಂದಿದೆ ಮತ್ತೊಂದು ಕಹಾನಿ..!
  Published by:zahir
  First published: