Indias vs Australia: ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡದಲ್ಲಿ ದೊಡ್ಡ ಬದಲಾವಣೆ: ಹೊಸ ತಂಡದ ಮಾಹಿತಿ ಇಲ್ಲಿದೆ

ಈ ಬಾರಿಯ ಐಪಿಎಲ್​ನಲ್ಲಿ ಮಿಂಚಿದ ವರುಣ್ ಚಕ್ರವರ್ತಿ ಈ ಮೊದಲು ಆಸೀಸ್ ವಿರುದ್ಧದ ಟಿ-20 ಸರಣಿಗೆ ಆಯ್ಕೆಯಾಗಿದ್ದರು. ಆದರೆ, ಸದ್ಯ ಭುಜದ ನೋವಿನಿಂದ ಬಳಲುತ್ತಿರುವ ಕಾರಣ ಇವರನ್ನು ಕೈಬಿಟ್ಟು ಟಿ. ನಟರಾಜನ್ ಅವರನ್ನು ಸೇರಿಸಿಕೊಳ್ಳಲಾಗಿದೆ.

Team India

Team India

 • Share this:
  ಇತ್ತೀಚೆಗಷ್ಟೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಮಾಡಿತ್ತು. ಆದರೆ, ಸದ್ಯ ಈ ತಂಡದಲ್ಲಿ ಕೆಲವು ಬದಲಾವಣೆ ಮಾಡಿ ಹೊಸ ಅಪ್ಡೇಟ್ ನೀಡಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ನಂತರ ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಲಭ್ಯರಿಲ್ಲ ಎಂದು ಹೇಳಿದೆ. ಈ ಸಂದರ್ಭ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಹೆರಿಗೆ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಅವರ ಜೊತೆಗಿರಲು ಕೊಹ್ಲಿ ಭಾರತಕ್ಕೆ ಮರಳಲಿದ್ದಾರೆ.

  ಇನ್ನೂ ರೋಹಿತ್ ಶರ್ಮಾ ಇಂಜುರಿ ವಿಚಾರವಾಗಿ ಬಿಸಿಸಿಐ ಮಾಹಿತಿ ನೀಡಿದ್ದು, ಅವರಿನ್ನೂ ಸರಿಯಾಗಿ ಫಿಟ್ ಆಗಾದ ಕಾರಣ ಏಕದಿನ ಹಾಗೂ ಟಿ-20 ಸರಣಿಗೆ ವಿಶ್ರಾಂತಿ ನೀಡಿ ಟೆಸ್ಟ್​ ಸರಣಿಗೆ ಆಯ್ಕೆ ಮಾಡಲಾಗಿದೆ.

  ಇತ್ತ ಐಪಿಎಲ್ ನಡೆಯುತ್ತಿದ್ದರೆ ಅತ್ತ ನ್ಯೂಜಿಲೆಂಡ್ ನಡೆಯಿತು ಕ್ರಿಕೆಟ್​ನಲ್ಲಿ ಯಾರೂ ಊಹಿಸಲಾಗದ ಘಟನೆ

  ಪ್ರತಿಭಾನ್ವಿತ ವಿಕೆಟ್-ಕೀಪರ್ ಬ್ಯಾಟ್ಸ್​ಮನ್​ ಸಂಜು ಸ್ಯಾಮ್ಸನ್ ಅವರನ್ನು ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪ್ರಮುಖ ವೇಗಿ ಇಶಾಂತ್ ಶರ್ಮಾ ಕೂಡ ಇಂಜುರಿಯಿಂದ ಬಳಲುತ್ತಿದ್ದು ಅವರ ಸದ್ಯ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಣಮುಖರಾದ ಬೆನ್ನಲ್ಲೇ ಟೆಸ್ಟ್​ ತಂಡಕ್ಕೆ ಸೇರಿಕೊಳ್ಳಲಿದ್ದಾರೆ.

  ಇನ್ನೂ ಈ ಬಾರಿಯ ಐಪಿಎಲ್​ನಲ್ಲಿ ಮಿಂಚಿದ ವರುಣ್ ಚಕ್ರವರ್ತಿ ಈ ಮೊದಲು ಆಸೀಸ್ ವಿರುದ್ಧದ ಟಿ-20 ಸರಣಿಗೆ ಆಯ್ಕೆಯಾಗಿದ್ದರು. ಆದರೆ, ಸದ್ಯ ಭುಜದ ನೋವಿನಿಂದ ಬಳಲುತ್ತಿರುವ ಕಾರಣ ಇವರನ್ನು ಕೈಬಿಟ್ಟು ಟಿ. ನಟರಾಜನ್ ಅವರನ್ನು ಸೇರಿಸಿಕೊಳ್ಳಲಾಗಿದೆ.

  ವೃದ್ದಿಮಾನ್ ಸಾಹ ಕೂಡ ಐಪಿಎಲ್ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದರು. ಈ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಬಿಸಿಸಿಐ ಹೇಳಿದೆ. ಜೊತೆಗೆ ಕಮಲೇಶ್ ನಾಗರಕೋಟಿ ಕೂಡ ಚಿಕಿತ್ಸೆ ಪಡೆಯುತ್ತಿದ್ದು ಆಸ್ಟ್ರೇಲಿಯಾ ಪ್ರವಾಸಕ್ಕೆ ಅಲಭ್ಯರಾಗಿದ್ದಾರೆ.

  ಟಿ20 ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್, ಉಪ ನಾಯಕ), ಮೊಹಮ್ಮದ್ ಶಮಿ, ನವದೀಪ್ ಸೈನಿ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್​ಪ್ರೀತ್ ಬುಮ್ರಾ, ದೀಪಕ್ ಚಹರ್, ನವದೀಪ್ ಸೈನಿ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಟಿ. ನಟರಾಜನ್.

  IPL 2020: ನೀನಾ ನಾನಾ: ಐಪಿಎಲ್​ ಫೈನಲ್​ನಲ್ಲಿ ವೇಗಿಗಳಿಬ್ಬರ ಪೈಪೋಟಿ

  ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಶುಭ್​ಮನ್ ಗಿಲ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್, ಉಪ ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್).

  ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ಶುಭ್​ಮನ್ ಗಿಲ್, ವೃದ್ಧಿಮಾನ್ ಸಾಹ, ರಿಷಭ್ ಪಂತ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್.
  Published by:Vinay Bhat
  First published: