ವಿಶ್ವದ ಎರಡು ಬಲಿಷ್ಠ ಕ್ರಿಕೆಟ್ ತಂಡಗಳ ಕಾದಾಟಕ್ಕೆ ದಿನಗಣನೆ ಶುರುವಾಗಿದೆ. ನವೆಂಬರ್ 27 ರಿಂದ ಭಾರತದ ಆಸ್ಟ್ರೇಲಿಯಾ ಪೂರ್ಣ ಪ್ರವಾಸ ಆರಂಭವಾಗಲಿದೆ. ಟೀಂ ಇಂಡಿಯಾ ಆಟಗಾರರು ಈಗಾಗಲೇ ಕಾಂಗರೂಗಳ ನಾಡಿಗೆ ತಲುಪಿ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಕೋವಿಡ್ -19 ನಡುವೆ ಇದು ಭಾರತದ ಮೊದಲ ಅಂತರಾಷ್ಟ್ರೀಯ ಸರಣಿಯಾಗಿದ್ದು, ಸಂಪೂರ್ಣ ಸುರಕ್ಷತಾ ನಿಯಮದೊಂದಿಗೆ ಉಭಯ ತಂಡಗಳು ಮಹತ್ವದ ಸರಣಿ ಆಡಲಿದೆ. ಒಟ್ಟು 3 ಏಕದಿನ, 3 ಟಿ-20 ಮತ್ತು 4 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿವೆ.
ರೋಹಿತ್ ಶರ್ಮಾ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗದ ಕಾರಣ ಏಕದಿನ ಹಾಗೂ ಟಿ-20 ಸರಣಿಗೆ ಲಭ್ಯರಿಲ್ಲ. ಹೀಗಾಗಿ ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸುವ ಬಗ್ಗೆ ಕೊಹ್ಲಿ ತಂಡ ಮಹತ್ವದ ಹೆಜ್ಜೆ ಇಡಬೇಕಿದೆ. ಇನ್ನೂ ಟೆಸ್ಟ್ಗೆ ವೃದ್ದಿಮಾನ್ ಸಾಹ ಹಾಗೂ ಇಶಾಂತ್ ಶರ್ಮಾ ಫಿಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.
AUS vs IND: ODI, T-20 ಸರಣಿಗೆ ರೋಹಿತ್ ಜಾಗಕ್ಕೆ ಯಾವ ಆಟಗಾರ: ಮೂವರ ನಡುವೆ ಶುರುವಾಗಿದೆ ಪೈಪೋಟಿ
ಏಕದಿನ ಸರಣಿ: ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನವೆಂಬರ್ 27 ರಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. 2ನೇ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದ್ದು ನ. 29ಕ್ಕೆ ಏರ್ಪಡಿಸಲಾಗಿದೆ. ಡಿ. 2 ರಂದು ಅಂತಿಮ ಮೂರನೇ ಏಕದಿನ ಪಂದ್ಯ ಕ್ಯಾನ್ಬೆರಾದಲ್ಲಿ ನಡೆಯಲಿದೆ. ಎಲ್ಲಾ ಏಕದಿನ ಪಂದ್ಯ ಭಾರತದ ಕಾಲಮಾನದ ಪ್ರಕಾರ ಬೆಳಗ್ಗೆ 9:10ಕ್ಕೆ ಆರಂಭವಾಗಲಿದೆ.
ಟಿ-20 ಸರಣಿ: ಮೊದಲ ಟಿ-20 ಪಂದ್ಯ ಡಿಸೆಂಬರ್ 4 ರಂದು ಕ್ಯಾನ್ಬೆರಾದಲ್ಲಿ ನಡೆಯಲಿದ್ದು, ಡಿಸೆಂಬರ್ 6 ರಂದು ಎರಡನೇ ಮತ್ತು ಡಿ.8 ರಂದು 3ನೇ ಟಿ-20 ಪಂದ್ಯ ಸಿಡ್ನಿಯಲ್ಲಿ ಜರುಗಲಿದೆ. ಎಲ್ಲಾ ಟಿ-20 ಪಂದ್ಯಗಳು ಭಾರತದ ಕಾಲಮಾನದ ಪ್ರಕಾರ ಮಧ್ಯಾಹ್ಹ 1:40ಕ್ಕೆ ಶುರುವಾಗಲಿದೆ.
ಐಪಿಎಲ್ 2021ರಲ್ಲಿ ದೊಡ್ಡ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಾ ಆರ್ಸಿಬಿ?; ಇಲ್ಲಿದೆ ಉತ್ತರ
ಟೆಸ್ಟ್ ಸರಣಿ: ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಒಟ್ಟು 4 ಪಂದ್ಯಗಳ ಐದು ದಿನಗಳ ಟೆಸ್ಟ್ ಸರಣಿ ಆಡಲಿದೆ. ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿರುವುದು ವಿಶೇಷ. ಈ ಪಂದ್ಯ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.
ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್ ಬ್ರಿಸ್ಬೇನ್ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ. ಎರಡು ಹಾಗೂ ಮೂರನೇ ಟೆಸ್ಟ್ ಮುಂಜಾನೆ 5 ಗಂಟೆಗೆ ಶುರುವಾದರೆ, ಅಂತಿಮ ಟೆಸ್ಟ್ 5:30ಕ್ಕೆ ಆರಂಭವಾಗಲಿದೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ:
ಟಿ-20 ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್, ಉಪ ನಾಯಕ), ಮೊಹಮ್ಮದ್ ಶಮಿ, ನವದೀಪ್ ಸೈನಿ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಜಸ್ಪ್ರೀತ್ ಬುಮ್ರಾ, ದೀಪಕ್ ಚಹರ್, ನವದೀಪ್ ಸೈನಿ, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಟಿ. ನಟರಾಜನ್.
ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಶುಭ್ಮನ್ ಗಿಲ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್, ಉಪ ನಾಯಕ), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್).
India vs Australia: ಕಾಂಗರೂಗಳ ನಾಡಿನಲ್ಲಿ ಟೀಂ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಇಲ್ಲಿದೆ ವಿಡಿಯೋ
ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ಶುಭ್ಮನ್ ಗಿಲ್, ವೃದ್ಧಿಮಾನ್ ಸಾಹ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ