ಸಿಡ್ನಿ (ನ. 29): ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಬೃಹತ್ ಮೊತ್ತ ಕಲೆಹಾಕಿದೆ. ಸ್ಟೀವ್ ಸ್ಮಿತ್ ಅವರ ಅಮೋಘ ಶತಕದ ಜೊತೆ, ನಾಯಕ ಆ್ಯರೋನ್ ಫಿಂಚ್, ಡೇವಿಡ್ ವಾರ್ನರ್, ಮ್ಯಾಕ್ಸ್ವೆಲ್ ಹಾಗೂ ಮಾರ್ನಸ್ ಲಾಬುಶೇನ್ ಅವರ ಅರ್ಧಶತಕದ ನೆರವಿನಿಂದ ಆಸೀಸ್ 50 ಓವರ್ಗಳಲ್ಲಿ ಬರೋಬ್ಬರಿ 389 ರನ್ ಚಚ್ಚಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿತು. ಓಪನರ್ಗಳಾದ ನಾಯಕ ಆ್ಯರೋನ್ ಫಿಂಚ್ ಹಾಗೂ ಡೇವಿಡ್ ವಾರ್ನರ್ ಕಳೆದ ಪಂದ್ಯದಂತೆ ತಂಡಕ್ಕೆ ಅತ್ಯುತ್ತಮ ಆರಂಭ ಒದಗಿಸಿದರು. ಬಿರುಸಿನ ಆಟ ಪ್ರದರ್ಶಿಸಿದ ಇಬ್ಬರೂ ಅರ್ಧಶತಕ ಸಿಡಿಸಿ ಮಿಂಚಿದರು.
ಈ ಜೋಡಿ ಮೊದಲ ವಿಕೆಟ್ಗೆ 142 ರನ್ಗಳ ಜೊತೆಯಾಟ ಆಡಿತು. ಫಿಂಚ್ 69 ಎಸೆತಗಳಲ್ಲಿ 6 ಫೋರ್, 1 ಸಿಕ್ಸರ್ ಬಾರಿಸಿ 60 ರನ್ ಗಳಿಸಿ ಔಟ್ ಆದರೆ. ವಾರ್ನರ್ 77 ಎಸೆತಗಳಲ್ಲಿ 7 ಫೋರ್, 3 ಸಿಕ್ಸರ್ ಸಿಡಿಸಿ 83 ರನ್ಗೆ ನಿರ್ಗಮಿಸಿದರು.
Babar Azam: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಕಾಮಕಾಂಡ ಬಯಲು; ಹಳೇ ಕತೆ ಬಿಚ್ಚಿಟ್ಟ ಮಾಜಿ ಪ್ರೇಯಸಿ
ಬಳಿಕ ಒಂದಾದ ಸ್ಟೀವ್ ಸ್ಮಿತ್ ಹಾಗೂ ಮಾರ್ನಸ್ ಲಾಬುಶೇನ್ ಮತ್ತೊಂದು ಅಮೋಘ ಇನ್ನಿಂಗ್ಸ್ ಕಟ್ಟಿದರು. ಸ್ಮಿತ್ ತಮ್ಮ ಹಳೇಯ ಫಾರ್ಮ್ ಮುಂದುವರೆಸಿ ಮನಮೋಹಕ ಹೊಡೆತಗಳ ಮೂಲಕ ಗಮನ ಸೆಳೆದರು. ಸತತ ಎರಡನೇ ಶತಕವನ್ನೂ ಪೂರೈಸಿದರು.
ಭಾರತೀಯ ಬೌಲರ್ಗಳ ಬೆವರಿಳಿಸಿದ ಸ್ಮಿತ್-ಮಾರ್ನಸ್ ಜೋಡಿ 136 ರನ್ಗಳ ಕಾಣಿಕೆ ನೀಡಿದರು. ಸ್ಮಿತ್ 64 ಎಸೆತಗಳಲ್ಲಿ 14 ಬೌಂಡರಿ, 2 ಸಿಕ್ಸರ್ ಬಾರಿಸಿ 104 ರನ್ ಚಚ್ಚಿದರು. ಬಳಿಕ ಅಂತಿಮ ಹಂತದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಜೊತೆಗೂಡಿ ಸ್ಫೋಟಕ ಆಟವಾಡಿದ ಮಾರ್ನಸ್ ಅರ್ಧಶತಕ ಸಿಡಿಸಿ ತಂಡದ ಮೊತ್ತವನ್ನು 370ರ ಗಡಿ ದಾಟಿಸಿದರು. ಮಾರ್ನಸ್ 61 ಎಸೆತಗಳಲ್ಲಿ 5 ಬೌಂಡರಿ ಬಾರಿಸಿ 70 ರನ್ ಗಳಿಸಿದರೆ, ಮ್ಯಾಕ್ಸ್ವೆಲ್ ಕೇವಲ 29 ಎಸೆತಗಳಲ್ಲಿ 4 ಬೌಂಡರಿ, 4 ಸಿಕ್ಸರ್ ಸಿಡಿಸಿ ಅಜೇಯ 63 ರನ್ ಚಚ್ಚಿದರು.
ಆಸ್ಟ್ರೇಲಿಯಾ 50 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 389 ರನ್ ಗಳಿಸಿತು. ಭಾರತ ಪರ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದರು.
ಆಸ್ಟ್ರೇಲಿಯ ತಂಡ: ಆ್ಯರೋನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್ವೆಲ್, ಮೊಯ್ಸೆಸ್ ಹೆನ್ರಿಕ್ಯೂ, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್ವುಡ್, ಆ್ಯಡಂ ಝಂಪ.
ಭಾರತ ತಂಡ: ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಕೆ. ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ನವದೀಪ್ ಸೈನಿ, ಯಜುವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ