• Home
 • »
 • News
 • »
 • sports
 • »
 • India vs Australia, 3rd Test: ವಿಲ್-ಲಾಬುಶೇನ್ ಅರ್ಧಶತಕ: ಮೊದಲ ದಿನದಾಟದ ಅಂತ್ಯಕ್ಕೆ ಆಸೀಸ್ 166-2

India vs Australia, 3rd Test: ವಿಲ್-ಲಾಬುಶೇನ್ ಅರ್ಧಶತಕ: ಮೊದಲ ದಿನದಾಟದ ಅಂತ್ಯಕ್ಕೆ ಆಸೀಸ್ 166-2

India vs Australia

India vs Australia

ಮೊದಲ ದಿನ ಅಧಿಪತ್ಯ ಮೆರೆದ ಆಸ್ಟ್ರೇಲಿಯಾ ದಿನದಾಟದ ಅಂತ್ಯಕ್ಕೆ 55 ಓವರ್​​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.

 • Share this:

  ಸಿಡ್ನಿ (. 07): ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್​ ಪಂದ್ಯ ಮಳೆಯ ನಡುವೆ ಮೊದಲ ದಿನದಾಟ ಅಂತ್ಯಗೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆತಿಥೇಯರು ಆರಂಭದಲ್ಲೇ 1 ವಿಕೆಟ್ ಕಳೆದುಕೊಂಡಿತಾದರೂ ಬಳಿಕ ಅದ್ಭುತ ಪ್ರದರ್ಶನ ತೋರಿತು. ಪದಾರ್ಪಣೆ ಪಂದ್ಯದಲ್ಲೇ ವಿಲ್​ ಪುಕೋವ್​ಸ್ಕಿ ಭರ್ಜರಿ ಅರ್ಧಶತಕ ಸಿಡಿಸಿದರೆ, ಮಾರ್ನಸ್ ಲಾಬುಶೇನ್ ಆಟ ತಂಡಕ್ಕೆ ನೆರವಾಯಿತು. ಪರಿಣಾಮ ಆಸ್ಟ್ರೇಲಿಯಾ ಮೊದಲ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 166 ರನ್ ಗಳಿಸಿದೆ.


  ಆಸ್ಟ್ರೇಲಿಯಾ ಪರ ಇನ್ನಿಂಗ್ಸ್​ ಆರಂಭಿಸಿದ ಡೇವಿಡ್ ವಾರ್ನರ್ ಹಾಗೂ ವಿಲ್ ಪುಕೋವ್​ಸ್ಕಿ ತಂಡಕ್ಕೆ ಉತ್ತಮ ಆರಂಭ ಒದಗಿಸಲಿಲ್ಲ. ಬಹಳಷ್ಟು ನಿರೀಕ್ಷೆಯೊಂದಿಗೆ ಕಣಕ್ಕಿಳಿದ ವಾರ್ನರ್ ಕೇವಲ 5 ರನ್ ಗಳಿಸಿ ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಔಟ್ ಆದರು.


  Sourav Ganguly: ಆಸ್ಪತ್ರೆಯಿಂದ ಸೌರವ್​ ಗಂಗೂಲಿ ಬಿಡುಗಡೆ; ಚಿಕಿತ್ಸೆ ನೀಡಿದ ವೈದ್ಯರಿಗೆ-ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ದಾದ



  ನಂತರ ಜೊತೆಯಾದ ಮಾರ್ನಸ್ ಲಾಬುಶೇನ್ ಹಾಗೂ ಪುಕೋವ್​ಸ್ಕಿ ಎಚ್ಚರಿಕೆಯಿಂದ ಇನ್ನಿಂಗ್ಸ್​ ಕಟ್ಟಲು ಹೊರಟರು. ಆದರೆ, 7.1 ಓವರ್​ನಲ್ಲಿ 21 ರನ್​ಗೆ 1 ವಿಕೆಟ್ ಕಳೆದುಕೊಂಡಾಗ ಜೋರಾಗಿ ಮಳೆ ಸುರಿಯಲು ಆರಂಭಿಸಿತು. ಹೀಗಾಗಿ ಆಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.


  ಮಳೆ ಕಡಿಮೆಯಾದ ಬಳಿಕ ಮತ್ತೆ ಆಟ ಶುರುಮಾಡಿ ವಿಲ್- ಮಾರ್ನಸ್ ಆರಂಭಿಕ ಆಘಾತದಿಂದ ತಂಡವನ್ನು ಪಾರು ಮಾಡಿದರು. ಅತ್ಯುತ್ತಮ ಜೊತೆಯಾಟ ಆಡಿದ ಈ ಜೋಡಿ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿತು. ಅದರಲ್ಲೂ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ವಿಲ್ ಪುಕೋವ್​ಸ್ಕಿ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದರು.


  ಈ ಜೋಡಿ ಆಸೀಸ್ ತಂಡಕ್ಕೆ 100 ರನ್​ಗಳ ಕಾಣಿಕೆ ನೀಡಿತು. ವಿಲ್ ಪುಕೋವ್​ಸ್ಕಿ 110 ಎಸೆತಗಳಲ್ಲಿ 62 ರನ್ ಬಾರಿಸಿ ನವ್​ದೀಪ್ ಸೈನಿ ಬೌಲಿಂಗ್​ನಲ್ಲಿ ಔಟ್ ಆದರು. ಬಳಿಕ ಸ್ಟೀವ್ ಸ್ಮಿತ್ ಜೊತೆಯಾದ ಲಾಬುಶೇನ್ ಮತ್ತೊಂದು ಅಮೋಘ ಇನ್ನಿಂಗ್ಸ್​ ಕಟ್ಟಿದರು. ಸದ್ಯ ಲಾಬುಶೇನ್ 67 ರನ್ ಬಾರಿಸಿ ಹಾಗೂ ಸ್ಮಿತ್ 31 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.


  Mohammed Siraj: ರಾಷ್ಟ್ರಗೀತೆ ವೇಳೆ ಭಾವುಕರಾಗಿ ಮೈದಾನದಲ್ಲೇ ಕಣ್ಣೀರು ಸುರಿಸಿದ ಮೊಹಮ್ಮದ್ ಸಿರಾಜ್


  ಮೊದಲ ದಿನ ಅಧಿಪತ್ಯ ಮೆರೆದ ಆಸ್ಟ್ರೇಲಿಯಾ ದಿನದಾಟದ ಅಂತ್ಯಕ್ಕೆ 55 ಓವರ್​​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಭಾರತ ಪರ ಮೊಹಮ್ಮದ್ ಸಿರಾಜ್ ಹಾಗೂ ನವ್​ದೀಪ್ ಸೈನಿ ತಲಾ 1 ವಿಕೆಟ್ ಪಡೆದರು.


  ಭಾರತ ತಂಡ: ಅಜಿಂಕ್ಯಾ ರನಾನೆ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಗಗನ್ ಹನುಮ ವಿಹಾರಿ, ರಿಷಭ್ ಪಂತ್ (ವಿ.ಕೀ.), ರವೀಂದ್ರ ಜಡೇಜಾ, ಆರ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ನವದೀಪ್ ಸೈನಿ ಮತ್ತು ಮೊಹಮ್ಮದ್ ಸಿರಾಜ್.


  ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ವಿಲ್ ಪೌಸ್ಕಿ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮರನ್ ಗ್ರೀನ್, ಟಿಮ್ ಪೈನ್ (ನಾಯಕ, ವಿ. ಕೀ.), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನೇಥನ್ ಲ್ಯಾನ್, ಜೋಷ್ ಹ್ಯಾಜ್ಲೆವುಡ್.

  Published by:Vinay Bhat
  First published: