ಬ್ರಿಸ್ಬೇನ್ (ಜ. 15): ಇಲ್ಲಿನ ದಿ ಗಬ್ಬಾ ಕ್ರಿಕೆಟ್ ಗ್ರೌಂಡ್ನಲ್ಲಿ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು ಮೊದಲ ದಿನದ ಗೌರವ ಸಂಪಾದಿಸಿದೆ. ಟಾಸ್ ಗೆದ್ದು ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಮಾರ್ನಸ್ ಲಾಬುಶೇನ್ ಅವರ ಆಕರ್ಷಕ ಶತಕದ ನೆರವಿನಿಂದ ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 274 ರನ್ ಗಳಿಸಿದೆ. ಟೆಸ್ಟ್ ಕ್ರಿಕೆಟ್ ಆಡಿದ ಅನುಭವ ಇಲ್ಲದ ಯುವ ವೇಗಿಗಳನ್ನು ಇಟ್ಟುಕೊಂಡು ಕಣಕ್ಕಿಳಿದ ಭಾರತ ಕೂಡ ಆಸೀಸ್ನ 5 ಪ್ರಮುಖ ವಿಕೆಟ್ ಕಿತ್ತು ಉತ್ತಮ ಪ್ರದರ್ಶನ ತೋರಿದೆ.
ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಮೊಹಮ್ಮದ್ ಸಿರಾಜ್ ಬೌಲಿಂಗ್ನ ಮೊದಲ ಓವರ್ನಲ್ಲೆ ಡೇವಿಡ್ ವಾರ್ನರ್(1) ವಿಕೆಟ್ ಕಳೆದುಕೊಂಡಿತು. ಇವರ ಬೆನ್ನಲ್ಲೆ ಮಾರ್ಕಸ್ ಹ್ಯಾರಿಸ್ 5 ರನ್ ಗಳಿಸಿ ಶಾರ್ದೂಲ್ ಠಾಕೂರ್ಗೆ ವಿಕೆಟ್ ಒಪ್ಪಿಸಿದರು.
India vs Australia: 4ನೇ ಟೆಸ್ಟ್ನ ಮೊದಲ ದಿನವೇ ಟೀಂ ಇಂಡಿಯಾಕ್ಕೆ ಆಘಾತ: ಮತ್ತೊಬ್ಬ ಸ್ಟಾರ್ ಆಟಗಾರನಿಗೆ ಇಂಜುರಿ
That will be Stumps on Day 1 of the 4th Test.
Australia 274/5
Scorecard - https://t.co/gs3dZfTNNo #AUSvIND pic.twitter.com/lhceSJ0nue
— BCCI (@BCCI) January 15, 2021
ಹೌದು, ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ವಿಶ್ವ ಶ್ರೇಷ್ಠ ಬ್ಯಾಟ್ಸ್ಮನ್ ಸ್ಟೀವ್ ಸ್ಮಿತ್ ಅವರನ್ನು ಔಟ್ ಮಾಡಿ ಡ್ರೀಮ್ ಡೆಬ್ಯೂ ಮಾಡಿದರು. ಸುಂದರ್ ಸ್ಪಿನ್ ಮೋಡಿಗೆ 77 ಎಸೆತಗಳಲ್ಲಿ 36 ರನ್ ಗಳಿಸಿದ್ದ ಸ್ಮಿತ್ ಪೆವಿಲಿನ್ ಸೇರಬೇಕಾಯಿತು.
ಬಳಿಕ ಶುರುವಾಗಿದ್ದು ಲಾಬುಶೇನ್ ಹಾಗೂ ಮ್ಯಾಥ್ಯೂ ವೇಡ್ ಆಟ. ಅತ್ಯುತ್ತಮ ಜೊತೆಯಾಟ ಆಡಿದ ಈ ಜೋಡಿ ಭಾರತಕ್ಕೆ ಮಾರಕವಾಗಿ ಪರಿಣಮಿಸಿತು. ಈ ಜೋಡಿ 113 ರನ್ಗಳ ಕಾಣಿಕೆ ನೀಡಿತು. ಅಲ್ಲದೆ ಲಾಬುಶೇನ್ ಟೆಸ್ಟ್ ಕ್ರಿಕೆಟ್ನಲ್ಲಿ ನಾಲ್ಕನೇ ಶತಕ ಪೂರೈಸಿದರು. ಆದರೆ, ಸೆಂಚುರಿ ಬಾರಿಸಿ ಹೆಚ್ಚುಹೊತ್ತು ಕ್ರೀಸ್ನಲ್ಲಿ ನಿಲ್ಲದ ಇವರು 204 ಎಸೆತಗಳಲ್ಲಿ 9 ಬೌಂಡರಿಯೊಂದಿಗೆ 108 ರನ್ ಗಳಿಸಿ ನಟರಾಜನ್ ಬೌಲಿಂಗ್ನಲ್ಲಿ ಔಟ್ ಆದರು.
A home ground hundred to remember for @marnus3cricket! 🔥@hcltech | #AUSvIND pic.twitter.com/ACcRzq3AiH
— cricket.com.au (@cricketcomau) January 15, 2021
ಶ್ರೀಶಾಂತ್ ಗುರಾಯಿಸಿದ್ದಕ್ಕೆ ಮುಟ್ಟಿ ನೋಡುವಂತಹ ಉತ್ತರ ಕೊಟ್ಟ ಯಶಸ್ವಿ ಜೈಸ್ವಾಲ್: ಇಲ್ಲಿದೆ ವಿಡಿಯೋ
ಭಾರತ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಅಜಿಂಕ್ಯಾ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ರಿಷಭ್ ಪಂತ್ (ವಿಕೆಟ್-ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನವ್ದೀಪ್ ಸೈನಿ, ಮೊಹಮ್ಮದ್ ಸಿರಾಜ್, ಟಿ. ನಟರಾಜನ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮರೊನ್ ಗ್ರೀನ್, ಟಿಮ್ ಪೈನ್(ನಾಯಕ- ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹೇಝಲ್ವುಡ್, ನಾಥನ್ ಲಿಯಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ