ಬ್ರಿಸ್ಬೇನ್ (ಜ. 19): ಇಲ್ಲಿನ ಗಬ್ಬಾದಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ನಾಲ್ಕನೇ ಟೆಸ್ಟ್ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಇಂದು ಕೊನೆಯ ದಿನವಾಗಿದ್ದು ಭಾರತ ತಂಡ ಗೆಲುವಿಗೆ ಹೋರಾಟ ನಡೆಸುತ್ತಿದೆ. ಭಾರತ ಎರಡು ವಿಕೆಟ್ ಕಳೆದುಕೊಂಡಿದ್ದು, ಆರಂಭಿಕ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಶತಕದ ಅಂಚಿನಲ್ಲಿ ಔಟ್ ಆಗಿ ನಿರಾಸೆ ಮೂಡಿಸಿದ್ದಾರೆ. ಸದ್ಯ ಕ್ರೀಸ್ನಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಹಾಗೂ ನಾಯಕ ಅಜಿಂಕ್ಯಾ ರಹಾನೆ ಇದ್ದಾರೆ.
ನಿನ್ನೆ ಆಸ್ಟ್ರೇಲಿಯಾವನ್ನು 294 ರನ್ಗೆ ಆಲೌಟ್ ಮಾಡಿ 328 ರನ್ಗಳ ಗುರಿ ಬೆನ್ನಟ್ಟಿದ ಭಾರತ ನಾಲ್ಕನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 4 ರನ್ ಗಳಿಸಿತ್ತು. ಅಂತಿಮ ಸೆಷನ್ನಲ್ಲಿ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ ಕಾರಣ ಬೇಗನೆ ದಿನದಾಟವನ್ನು ಮುಗಿಸಲಾಯಿತು.
Video: 41ರ ಹರೆಯದ ಹಿರಿಯ ವೇಗಿ ದಾಳಿಗೆ ನಲುಗಿದ ಬಲಿಷ್ಠ ಮುಂಬೈ..!
ಇಂದು ಬ್ಯಾಟಿಂಗ್ ಮುಂದುವರೆಸಿದ ಭಾರತ ಆರಂಭದಲ್ಲೇ 7 ರನ್ ಗಳಿಸಿದ್ದ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಆದರೆ, 2ನೇ ವಿಕೆಟ್ಗೆ ಜೊತೆಯಾದ ಶುಭ್ಮನ್ ಗಿಲ್ ಹಾಗೂ ಚೇತೇಶ್ವರ್ ಪೂಜಾರ ಕ್ರೀಸ್ ಕಚ್ಚಿ ನಿಂತರು. ಶತಕದ ಜೊತೆಯಾಟ ಆಡಿದ ಈ ಜೋಡಿ ತಂಡದ ಗೆಲುವಿನ ಆಸೆಯನ್ನು ಚುಗುರಿಸಿತು.
ಆದರೆ, ಶತಕದ ಅಂಚಿನಲ್ಲಿ ಎಡವಿದ ಗಿಲ್ 146 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಿಡಿಸಿ 91 ರನ್ಗೆ ಔಟ್ ಆದರು.
That is Lunch on the final day of the Border-Gavaskar Test series. India are 83-1 with Gill on 64 and Pujara on 8. #TeamIndia #AUSvIND
1st session - 36.1 overs | 79 runs | 1 wicket
Details - https://t.co/OgU227P9dp pic.twitter.com/5aWLc07VC1
— BCCI (@BCCI) January 19, 2021
IPL 2021: ಕಿಂಗ್ಸ್ ಇಲೆವೆನ್ ಪಂಜಾಬ್ ಈ ಆಟಗಾರರನ್ನು ಕೈ ಬಿಡುವುದು ಬಹುತೇಕ ಖಚಿತ..!
ಭಾರತ ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಸದ್ಯ 1-1ರಿಂದ ಸಮವಾಗಿದ್ದು, ಕಳೆದ ಟೆಸ್ಟ್ನಲ್ಲಿ ಭಾರತ ಸೋಲಿನ ದವಡೆಯಿಂದ ಪಾರಾಗಿ ರೋಚಕ ರೀತಿಯಲ್ಲಿ ಡ್ರಾ ಸಾಧಿಸಿತ್ತು. ಈ ನಾಲ್ಕನೇ ಪಂದ್ಯದ ಸದ್ಯದ ಗತಿ ಗಮನಿಸಿದರೆ ಡ್ರಾ ಆಗುವ ಸಾಧ್ಯತೆ ತುಸು ಹೆಚ್ಚಿದ್ದಂತಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ