IND vs AUS, 1st Test: 90 ರನ್ಸ್ ಟಾರ್ಗೆಟ್: ಗೆಲುವಿನತ್ತ ಆಸ್ಟ್ರೇಲಿಯಾ

ಜಸ್​ಪ್ರೀತ್ ಬುಮ್ರಾ ಕೇವಲ 2 ರನ್​ಗಳಿಸಿ ಪೆವಿಲಿಯನ್ ಹಾದಿ ಹಿಡಿದರೆ, ಬಂದ ಬೆನ್ನಲ್ಲೇ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ಸೊನ್ನೆ ಸುತ್ತಿದರು. ಮಯಾಂಕ್ ಅಗರ್ವಾಲ್ 9 ರನ್​ಗೆ ಔಟ್ ಆದರೆ, ನಾಯಕ ವಿರಾಟ್ ಕೊಹ್ಲಿ ಹಾಗೂ ವೃದ್ದಿಮಾನ್ ಸಾಹ ಆಟ ಕೇವಲ 4 ರನ್​ಗೆ ಅಂತ್ಯವಾಯಿತು.

India vs Australia

India vs Australia

  • Share this:
    ಅಡಿಲೇಡ್ (ಡಿ. 19): ಇಲ್ಲಿನ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಡೇ ನೈಟ್ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ಹಿಂದೆಂದೂ ನೀಡದ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಕೇವಲ 36 ರನ್​ಗೆ ಆಲೌಟ್ ಆಗುವ ಮೂಲಕ ಆಸ್ಟ್ರೇಲಿಯಾಕ್ಕೆ ಗೆಲ್ಲಲು 90 ರನ್​ಗಳ ಟಾರ್ಗೆಟ್ ನೀಡಿದೆ. ಆಸ್ಟ್ರೇಲಿಯಾವನ್ನು 191 ರನ್​ಗೆ ಆಲೌಟ್ ಮಾಡಿ ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್​ನಲ್ಲಿ ದ್ವಿತೀಯ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 9 ರನ್ ಗಳಿಸಿತ್ತು. ಇಂದು ಮೂರನೇ ದಿನದಾಟದ ಆರಂಭದಲ್ಲಿ ತರಗೆಲೆಯಂತೆ ಭಾರತದ ವಿಕೆಟ್ ಉರುಳಿದವು

    ಜಸ್​ಪ್ರೀತ್ ಬುಮ್ರಾ ಕೇವಲ 2 ರನ್​ಗಳಿಸಿ ಪೆವಿಲಿಯನ್ ಹಾದಿ ಹಿಡಿದರೆ, ಬಂದ ಬೆನ್ನಲ್ಲೇ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ಸೊನ್ನೆ ಸುತ್ತಿದರು. ಮಯಾಂಕ್ ಅಗರ್ವಾಲ್ 9 ರನ್​ಗೆ ಔಟ್ ಆದರೆ, ನಾಯಕ ವಿರಾಟ್ ಕೊಹ್ಲಿ ಹಾಗೂ ವೃದ್ದಿಮಾನ್ ಸಾಹ ಆಟ ಕೇವಲ 4 ರನ್​ಗೆ ಅಂತ್ಯವಾಯಿತು.





    8 ರನ್​ಗೆ ಔಟ್ ಆದರು. ಆರ್. ಅಶ್ವಿನ್ ಸೊನ್ನೆ ಸುತ್ತಿದರು. ಮೊಹಮ್ಮದ್ ಶಮಿ ಇಂಜುರಿಗೆ ತುತ್ತಾದ ಪರಿಣಾಮ ಬ್ಯಾಟಿಂಗ್ ಮುಂದುವರೆಸಲು ಸಾಧ್ಯವಾಗಲಿಲ್ಲ. ಹೀಗಾಗಿ ಭಾರತ 21.2 ಓವರ್​ನಲ್ಲಿ ಕೇವಲ 36 ರನ್​ಗೆ 9 ವಿಕೆಟ್ ಕಳೆದುಕೊಂಡಾಗ ಆಟ ನಿಲ್ಲಿಸಿತು. ಆಸ್ಟ್ರೇಲಿಯಾ ಪರ ಜೋಷ್ ಹ್ಯಾಜ್ಲೆವುಡ್ 5 ವಿಕೆಟ್ ಕಿತ್ತು ಮಿಂಚಿದರೆ, ಪ್ಯಾಟ್ ಕಮಿನ್ಸ್​ 4 ವಿಕೆಟ್ ಪಡೆದರು. ಈ ಮೂಲಕ ಭಾರತ ತಂಡ ಆಸ್ಟ್ರೇಲಿಯಾಕ್ಕೆ ಗೆಲ್ಲಲು 88 ರನ್​ಗಳ ಸುಲಭ ಟಾರ್ಗೆಟ್ ನೀಡಿದೆ.

    ಮೊದಲ ದಿನದಾಟದ ಅಂತ್ಯಕ್ಕೆ6 ವಿಕೆಟ್ ಕಳೆದುಕೊಂಡು 233 ರನ್ ಗಳಿಸಿದ್ದ ಕೊಹ್ಲಿ ಪಡೆ ನಿನ್ನೆ 11 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ 244 ರನ್​ಗೆ ಸರ್ವಪತನ ಕಂಡಿತು. ಬಳಿಕ ತನ್ನ ಮೊದಲ ಇನ್ನಿಂಗ್ಸ್​ ಆರಂಭಿಸಿದ ಆಸ್ಟ್ರೇಲಿಯಾ ಆರಂಭದಿಂದ ವಿಕೆಟ್ ಕಳೆದುಕೊಂಡು ಸಾಗಿತು.

    India vs Australia: ಭಾರತ-ಆಸ್ಟ್ರೇಲಿಯಾ ಮೊದಲ ಟೆಸ್ಟ್​ನ ಎರಡನೇ ದಿನದಾಟದ ಕೆಲ ರೋಚಕ ಕ್ಷಣಗಳು





    ಟಿಮ್ ಪೈನ್ 99 ಎಸೆತಗಳಲ್ಲಿ ಅಜೇಯ 73 ರನ್ ಗಳಿಸಿದರು. ಆಸ್ಟ್ರೇಲಿಯಾ 72.1 ಓವರ್​ಗಳಲ್ಲಿ 191 ರನ್​ಗೆ ಆಲೌಟ್ ಆಯಿತು. ಭಾರತ ಪರ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಕಿತ್ತು ಮಿಂಚಿದರೆ, ಉಮೇಶ್ ಯಾದವ್ 3 ಹಾಗೂ ಜಸ್​ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು.





    ಎರಡನೇ ಇನ್ನಿಂಗ್ಸ್​ ಆರಂಭಿಸಿದ ಭಾರತ ಮತ್ತೆ ಕಳಪೆ ಆರಂಭ ಪಡೆದುಕೊಂಡಿತು. ಪೃಥ್ವಿ ಶಾ ಕೇವಲ 4 ರನ್​ಗೆ ಕ್ಲೀನ್ ಬೌಲ್ಡ್​ ಆದರು. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 9 ರನ್​ಗೆ 1 ವಿಕೆಟ್ ಕಳೆದುಕೊಂಡಿತ್ತು. ಮಯಾಂಕ್ ಅಗರ್ವಾಲ್ 5 ಹಾಗೂ ಜಸ್​ಪ್ರೀತ್ ಬುಮ್ರಾ ಖಾತೆ ತೆರೆಯದೆ ಇಂದು ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು.
    Published by:Vinay Bhat
    First published: