ಇತ್ತೀಚೆಗಷ್ಟೆ ಮುಕ್ತಾಯಗೊಂಡ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮುಂಬೈ ಇಂಡಿಯನ್ಸ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಹಾಗೂ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ನಡುವೆ ನಡೆದ ಘಟನೆ ಭಾರೀ ಸುದ್ದಿಯಾಗಿತ್ತು. ಇದರಿಂದ ಭಾರತದ ಹಿರಿಯ ಮತ್ತು ಕಿರಿಯ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈ ವಿಚಾರ ತಣ್ಣಗಾಗುತ್ತಿದ್ದಂತೆ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿ ಹಂಚಿಕೊಂಡಿರುವ ವಿಡಿಯೋ ಒಂದಕ್ಕೆ ಸೂರ್ಯಕುಮಾರ್ ಕಮೆಂಟ್ ಮಾಡಿ ಮತ್ತೆ ಸುದ್ದಿಯಲ್ಲಿದ್ದಾರೆ.
ಐಪಿಎಲ್ 2020ರ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಬ್ಯಾಟಿಂಗ್ ಇನಿಂಗ್ಸ್ ವೇಳೆ ಸೂರ್ಯಕುಮಾರ್ ಯಾದವ್ ಕವರ್ಸ್ ಕಡೆ ಚೆಂಡನ್ನು ಹೊಡೆದರು. ಚೆಂಡು ನೇರವಾಗಿ ವಿರಾಟ್ ಕೊಹ್ಲಿ ಕೈಗೆ ತಲುಪಿತು. ಚೆಂಡನ್ನು ಎತ್ತಿಕೊಂಡ ಆರ್ಸಿಬಿ ನಾಯಕ, ನೇರವಾಗಿ ಸೂರ್ಯಕುಮಾರ್ ಸಮೀಪ ತೆರಳಿದರು. ಅಷ್ಟೇ ಅಲ್ಲದೆ ಕಣ್ಣಲ್ಲಿ ಕಣ್ಣಿಟ್ಟು ನೋಡುವ ಮೂಲಕ ವಿಭಿನ್ನ ರೀತಿಯಲ್ಲಿ ಸ್ಲೆಡ್ಜ್ ಮಾಡಿದರು. ಈ ವೇಳೆ ಸ್ವಲ್ಪ ಹೊತ್ತು ಕೊಹ್ಲಿಯನ್ನೇ ನೋಡುತ್ತಿದ್ದ ಯಾದವ್, ಏನನ್ನೂ ಹೇಳದೆ ಬಲಗಡೆಗೆ ನಡೆದುಕೊಂಡು ಹೋದರು.
PSL 2020: ಐಪಿಎಲ್ನಂತಿರುವ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಟ್ರೋಫಿ ಗೆದ್ದ ತಂಡಕ್ಕೆ ಸಿಕ್ಕ ಹಣವೆಷ್ಟು ಗೊತ್ತೆ?
ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಮುಂಬೈ ಭರ್ಜರಿ ಗೆಲುವು ಸಾಧಿಸಿತು. ಪಂದ್ಯ ಮುಗಿದ ಬಳಿಕ ಸೂರ್ಯಕುಮಾರ್ ಯಾದವ್, 'ನಾನು ಇಲ್ಲಿಯೇ ಇರುತ್ತೇನೆ' ಎಂದು ಕೈಸನ್ನೆಯ ಮೂಲಕ ಹೇಳಿದರು.
ಇದಕ್ಕೂ ಮುನ್ನ ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವಾಗ ಆಯ್ಕೆ ಸಮಿತಿ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದ ಅನೇಕರಿಗೆ ಮಣೆ ಹಾಕಿತು. ಆದರೆ, ಅನೇಕ ವರ್ಷಗಳಿಂದ ಅವಕಾಶಕ್ಕಾಗಿ ಕಾಯುತ್ತಿರುವ ಸೂರ್ಯಕುಮಾರ್ ಹೆಸರು ಮಾತ್ರ ಇರಲಿಲ್ಲ.
ಇದರಿಂದ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಕೆಲ ಕ್ರಿಕೆಟ್ ಪಂಡಿತರು ಕೂಡ ಆಯ್ಕೆ ಸಮಿತಿ ವಿರುದ್ಧ ತಿರುಗಿಬಿದ್ದರು. ಹೀಗಾಗಿ ಕೊಹ್ಲಿ ಹಾಗೂ ಸೂರ್ಯಕುಮಾರ್ ನಡುವೆ ಸಣ್ಣ ಸಂಘರ್ಷ ನಡೆದಿತ್ತು. ಸದ್ಯ ಈ ಘಟನೆ ಮರೆಯುವ ಮುನ್ನವೆ ಸೂರ್ಯಕುಮಾರ್ ನಾಯಕ ವಿರಾಟ್ ಕೊಹ್ಲಿ ವಿಡಿಯೋ ಒಂದಕ್ಕೆ ಕಮೆಂಟ್ ಮಾಡಿ ಅಭಿಮಾನಿಗಳ ಮನಗೆದ್ದಿದ್ದಾರೆ.
India vs Australia: ಆಸ್ಟ್ರೇಲಿಯಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಸಿಕ್ತು ಭರ್ಜರಿ ನ್ಯೂಸ್
ಕೊಹ್ಲಿ ಸದ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಕಾಂಗರೂಗಳ ನಾಡಿನಲ್ಲಿ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಹೀಗೆ ಕೊಹ್ಲಿ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಸೂರ್ಯಕುಮಾರ್, ಎನರ್ಜಿ, ಸೌಂಡ್, ಈ ರೋಚಕ ಕಾದಟ ವೀಕ್ಷಿಸಲು ಕಾತುರನಾಗಿದ್ದೇನೆ ಎಂದು ಕಮೆಂಟ್ ಮಾಡಿದ್ದಾರೆ. ಈ ಮೂಲಕ ಕೊಹ್ಲಿ ಆಟ ನೋಡಲು ತುದಿಗಾಲಿನಲ್ಲಿ ನಿಂತಿದ್ದೇನೆ ಎಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ