ಸಿಡ್ನಿ (ಜ. 08): ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಸಾಗುತ್ತಿರುವ ಭಾರತ ವಿರುದ್ಧದ ಬಾರ್ಡರ್ – ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಉತ್ತಮ ಮೊತ್ತ ಕಲೆಹಾಕಿದೆ. ಸ್ಟೀವ್ ಸ್ಮಿತ್ ಅವರ ಆಕರ್ಷಕ ಶತಕ ಹಾಗೂ ಮಾರ್ನಸ್ ಲಾಬುಶೇನ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ 338 ರನ್ಗೆ ಆಲೌಟ್ ಆಯಿತು. ಇತ್ತ ಮೊದಲ ದಿನ ವೈಫಲ್ಯ ಅನುಭವಿಸಿದ್ದ ಭಾರತೀಯ ಬೌಲರ್ಗಳು ಎರಡನೇ ದಿನ ಭರ್ಜರಿ ಕಮ್ಬ್ಯಾಕ್ ಮಾಡಿದರು. ಅದರಲ್ಲೂ ರವೀಂದ್ರ ಜಡೇಜಾ 4 ವಿಕೆಟ್ ಕಿತ್ತು ಮಿಂಚಿದರು.
ಸದ್ಯ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದೆ. ಓಪನರ್ಗಳಾದ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದು ಅರ್ಧಶತಕದ ಜೊತೆಯಾಟ ಆಡಿ ಮುನ್ನುಗ್ಗುತ್ತಿದ್ದಾರೆ.
ಇದಕ್ಕೂ ಮುನ್ನ ನಿನ್ನೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯ ಆರಂಭದಲ್ಲಿ ಡೇವಿಡ್ ವಾರ್ನರ್(5) ವಿಕೆಟ್ ಕಳೆದುಕೊಂಡಿತು. ನಂತರ ಜೊತೆಯಾದ ಮಾರ್ನಸ್ ಲಾಬುಶೇನ್ ಹಾಗೂ ಪುಕೋವ್ಸ್ಕಿ ಎಚ್ಚರಿಕೆಯಿಂದ ಇನ್ನಿಂಗ್ಸ್ ಕಟ್ಟಲು ಹೊರಟರು. ಈ ಜೋಡಿ ತಂಡಕ್ಕೆ 100 ರನ್ಗಳ ಕಾಣಿಕೆ ನೀಡಿತು.
India vs Australia, 3rd Test: ವಿಲ್-ಲಾಬುಶೇನ್ ಅರ್ಧಶತಕ: ಮೊದಲ ದಿನದಾಟದ ಅಂತ್ಯಕ್ಕೆ ಆಸೀಸ್ 166-2
ವಿಲ್ ಪುಕೋವ್ಸ್ಕಿ 110 ಎಸೆತಗಳಲ್ಲಿ 62 ರನ್ ಬಾರಿಸಿ ನವ್ದೀಪ್ ಸೈನಿ ಬೌಲಿಂಗ್ನಲ್ಲಿ ಔಟ್ ಆದರು. ಬಳಿಕ ಸ್ಟೀವ್ ಸ್ಮಿತ್ ಜೊತೆಯಾದ ಲಾಬುಶೇನ್ ಮತ್ತೊಂದು ಅಮೋಘ ಇನ್ನಿಂಗ್ಸ್ ಕಟ್ಟಿದರು. ಲಾಬುಶೇನ್ 67 ರನ್ ಬಾರಿಸಿ ಹಾಗೂ ಸ್ಮಿತ್ 31 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರು.
Wonderful shot from Smith! And he moves into the 90s.
Live #AUSvIND: https://t.co/xdDaedY10F pic.twitter.com/B6zgMycY1q
— cricket.com.au (@cricketcomau) January 8, 2021
ಈ ಸಂದರ್ಭ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್ನಲ್ಲಿ 27ನೇ ಶತಕ ಸಿಡಿಸಿ ಮಿಂಚಿದರು. ಆದರೆ, ಇವರಿಗೆ ಮಿಚೆಲ್ ಸ್ಟಾರ್ಕ್(24) ಹಾಗೂ ನೇಥನ್ ಲ್ಯಾನ್ (0) ಸಾತ್ ನೀಡಲಿಲ್ಲ. ಅಂತಿಮವಾಗಿ ಸ್ಮಿತ್ ಕೂಡ ರನೌಟ್ ಆಗುವ ಮೂಲಕ ಆಸ್ಟ್ರೇಲಿಯಾ 105.4 ಓವರ್ಗಳಲ್ಲಿ 338 ರನ್ಗೆ ಆಲೌಟ್ ಆಯಿತು. ಸ್ಮಿತ್ 226 ಎಸೆತಗಳಲ್ಲಿ 16 ಬೌಂಡರೊಯೊಂದಿಗೆ 131 ರನ್ ಬಾರಿಸಿದರು. ಭಾರತ ಪರ ಜಡೇಜಾ 4 ವಿಕೆಟ್ ಕಿತ್ತರೆ, ಜಸ್ಪ್ರೀತ್ ಬುಮ್ರಾ ಹಾಗೂ ನವ್ದೀಪ್ ಸೈನಿ ತಲಾ 2, ಮೊಹಮ್ಮದ್ ಸಿರಾಜ್ ವಿಕೆಟ್ ಪಡೆದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ