IND vs AUS: ರಹಾನೆ ಶತಕ, ಜಡೇಜಾ ಅರ್ಧಶತಕ: ದಿಢೀರ್ ಕುಸಿತ ಕಂಡರೂ ಟೀಂ ಇಂಡಿಯಾ ಉತ್ತಮ ಮುನ್ನಡೆ

ಮೂರನೇ ದಿನವಾದ ಇಂದು ಬ್ಯಾಟಿಂಗ್ ಮುಂದುವರೆಸಿದ ಭಾರತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. 49 ರನ್​ಗೆ ಉಳಿದ 5 ವಿಕೆಟ್ ಕಳೆದುಕೊಂಡು ಸರ್ವಪತನ ಕಂಡಿತು.

ರಹಾನೆ

ರಹಾನೆ

  • Share this:
    ಮೆಲ್ಬೋರ್ನ್​ (ಡಿ. 28): ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ಸಾಗುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್​ ಪಂದ್ಯದಲ್ಲಿ ಭಾರತ ತಂಡ ಉತ್ತಮ ಮುನ್ನಡೆ ಸಾಧಿಸಿದೆ. ನಾಯಕ ಅಜಿಂಕ್ಯಾ ರಹಾನೆ ಅವರ ಅಮೋಘ ಶತಕ ಹಾಗೂ ರವೀಂದ್ರ ಜಡೇಜಾ ಅವರ ಅರ್ಧಶತಕದ ನೆರವಿನಿಂದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 326 ರನ್​ಗೆ ಆಲೌಟ್ ಆಯಿತು. ಈ ಮೂಲಕ 131 ರನ್​ಗಳ ಮುನ್ನಡೆ ಸಾಧಿಸಿತು. ಇತ್ತ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್​ ಆರಂಭಿಸಿದ್ದು ಭಾರತೀಯ ಬೌಲರ್​ಗಳ ಪರಾಕ್ರಮ ಮೆರೆಯುತ್ತಿದ್ದಾರೆ.

    ನಿನ್ನೆ ಎರಡನೇ ದಿನದಾಟದಲ್ಲೂ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಿತ್ತು. ಆಸ್ಟ್ರೇಲಿಯಾದ 195 ರನ್​ಗಳ ಮೊದಲ ಇನ್ನಿಂಗ್ಸ್​ಗೆ ಪ್ರತಿಯಾಗಿ ಭಾರತ ತಂಡ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿ 82 ರನ್​ಗಳ ಮುನ್ನಡೆ ಹೊಂದಿತ್ತು.





    ಮೂರನೇ ದಿನವಾದ ಇಂದು ಬ್ಯಾಟಿಂಗ್ ಮುಂದುವರೆಸಿದ ಭಾರತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. 49 ರನ್​ಗೆ ಉಳಿದ 5 ವಿಕೆಟ್ ಕಳೆದುಕೊಂಡು ಸರ್ವಪತನ ಕಂಡಿತು. ರಹಾನೆ 223 ಎಸೆತಗಳಲ್ಲಿ 12 ಬೌಂಡರಿಯೊಂದಿಗೆ 112 ರನ್ ಬಾರಿಸಿದರೆ, ಜಡೇಜಾ 159 ಎಸೆತಗಳಲ್ಲಿ 57 ರನ್ ಗಳಿಸಿದರು. ಅಶ್ವಿನ್ ಆಟ 14 ರನ್​ಗೆ ಅಂತ್ಯವಾಯಿತು.

    ಉಮೇಶ್ ಯಾದವ್ 9 ಹಾಗೂ ಜಸ್​ಪ್ರೀತ್ ಬುಮ್ರಾ ಸೊನ್ನೆ ಸುತ್ತಿದರು. ಭಾರತ 115.1 ಓವರ್​ನಲ್ಲಿ 326 ರನ್​ಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ನೇಥನ್ ಲ್ಯಾನ್ ಹಾಗೂ ಮಿಚೆಲ್ ಸ್ಟಾರ್ಕ್​ ತಲಾ 3 ವಿಕೆಟ್ ಕಿತ್ತರೆ, ಪ್ಯಾಟ್ ಕಮಿನ್ಸ್ 2 ವಿಕೆಟ್ ಪಡೆದರು.





    ಸದ್ಯ ತನ್ನ ಎರಡನೇ ಇನ್ನಿಂಗ್ಸ್​ ಆರಂಭಿಸಿರುವ ಆಸ್ಟ್ರೇಲಿಯಾ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಉಮೇಶ್ ಯಾದವ್ ಬೌಲಿಂಗ್​ನಲ್ಲಿ ಜೋ ಬರ್ನ್ಸ್​ ಕೇವಲ 4 ರನ್ ಗಳಿಸಿ ಔಟ್ ಆದರು.
    Published by:Vinay Bhat
    First published: