ಮೆಲ್ಬೋರ್ನ್ (ಡಿ. 28): ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ಸಾಗುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಉತ್ತಮ ಮುನ್ನಡೆ ಸಾಧಿಸಿದೆ. ನಾಯಕ ಅಜಿಂಕ್ಯಾ ರಹಾನೆ ಅವರ ಅಮೋಘ ಶತಕ ಹಾಗೂ ರವೀಂದ್ರ ಜಡೇಜಾ ಅವರ ಅರ್ಧಶತಕದ ನೆರವಿನಿಂದ ಮೊದಲ ಇನ್ನಿಂಗ್ಸ್ನಲ್ಲಿ ಭಾರತ 326 ರನ್ಗೆ ಆಲೌಟ್ ಆಯಿತು. ಈ ಮೂಲಕ 131 ರನ್ಗಳ ಮುನ್ನಡೆ ಸಾಧಿಸಿತು.
ಸದ್ಯ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ 3 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಉಮೇಶ್ ಯಾದವ್ ಬೌಲಿಂಗ್ನಲ್ಲಿ ಜೋ ಬರ್ನ್ಸ್ ಕೇವಲ 4 ರನ್ ಗಳಿಸಿ ಔಟ್ ಆದರೆ, ದೊಡ್ಡ ಇನ್ನಿಂಗ್ಸ್ ಕಟ್ಟುವ ಯೋಜನೆಯಲ್ಲಿದ್ದ ಮಾರ್ನಸ್ ಲ್ಯಾಬುಶೆನ್ 49 ಎಸೆತಗಳಲ್ಲಿ 28 ರನ್ ಗಳಿಸಿ ಔಟ್ ಆದರು.
ಇತ್ತ ಸ್ಟೀವ್ ಸ್ಮಿತ್ ಈ ಬಾರಿಯೂ ವೈಫಲ್ಯ ಅನುಭವಿಸಿ 8 ರನ್ ಗಳಿಸಿರುವಾಗ ಬುಮ್ರಾ ಬೌಲಿಂಗ್ನಲ್ಲಿ ಬೌಲ್ಡ್ ಆದರು. ಕ್ರೀಸ್ ಕಚ್ಚಿ ನಿಂತಿದ್ದ ಮ್ಯಾಥ್ಯೂ ವೇಡ್ 137 ಎಸೆತಗಳಲ್ಲಿ 40 ರನ್ ಬಾರಿಸಿ ಜಡೇಜ ಬೌಲಿಂಗ್ನಲ್ಲಿ ಎಲ್ಬಿ ಬಲೆಗೆ ಸಿಲುಕಿದರು. ಟ್ರಾವಿಸ್ ಹೆಡ್ ಆಟ 17 ರನ್ಗೆ ಅಂತ್ಯವಾಯಿತು.
ಇದಕ್ಕೂ ಮುನ್ನ ನಿನ್ನೆ ಎರಡನೇ ದಿನದಾಟದಲ್ಲೂ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಿತ್ತು. ಆಸ್ಟ್ರೇಲಿಯಾದ 195 ರನ್ಗಳ ಮೊದಲ ಇನ್ನಿಂಗ್ಸ್ಗೆ ಪ್ರತಿಯಾಗಿ ಭಾರತ ತಂಡ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿ 82 ರನ್ಗಳ ಮುನ್ನಡೆ ಹೊಂದಿತ್ತು.
#TeamIndia’s innings ends at 326/10 and with a lead of 131 runs. It is also Lunch on Day 3 of the Boxing Day Test.
Our bowlers will be out after a break. #AUSVIND
Details - https://t.co/bG5EiYj0Kv pic.twitter.com/jmmkLh9Xyw
— BCCI (@BCCI) December 28, 2020
ಉಮೇಶ್ ಯಾದವ್ 9 ಹಾಗೂ ಜಸ್ಪ್ರೀತ್ ಬುಮ್ರಾ ಸೊನ್ನೆ ಸುತ್ತಿದರು. ಭಾರತ 115.1 ಓವರ್ನಲ್ಲಿ 326 ರನ್ಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ನೇಥನ್ ಲ್ಯಾನ್ ಹಾಗೂ ಮಿಚೆಲ್ ಸ್ಟಾರ್ಕ್ ತಲಾ 3 ವಿಕೆಟ್ ಕಿತ್ತರೆ, ಪ್ಯಾಟ್ ಕಮಿನ್ಸ್ 2 ವಿಕೆಟ್ ಪಡೆದರು.
Some very classy shots from India's captain Ajinkya Rahane yesterday! #AUSvIND pic.twitter.com/Dlw5FrGUga
— cricket.com.au (@cricketcomau) December 27, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ