ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಮೂರನೇ ಟೆಸ್ಟ್ ಆರಂಭವಾಗಿದೆ. ಆದರೆ, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 7.1 ಓವರ್ನಲ್ಲಿ 1 ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿದ್ದ ವೇಳೆ ಜೋರಾಗಿ ಮಳೆ ಸುರಿಯಲು ಆರಂಭವಾದ ಕಾರಣ ಪಂದ್ಯವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಯಿತು. ಇದಕ್ಕೂ ಮುನ್ನ ಪಂದ್ಯದ ಆರಂಭದಲ್ಲಿ ಭಾರತದ ರಾಷ್ಟ್ರಗೀತೆ ಹಾಡುವ ವೇಳೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಭಾವುಕರಾಗಿ ಕಣ್ಣೀರು ಇಟ್ಟಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮೆಲ್ಬೋರ್ನ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಸಿರಾಜ್ ಚೊಚ್ಚಲ ಪಂದ್ಯದಲ್ಲೇ ಅಮೋಘ ಪ್ರದರ್ಶನ ನೀಡಿದ್ದರು. ಮೊದಲ ಇನ್ನಿಂಗ್ಸ್ನಲ್ಲಿ 2 ವಿಕೆಟ್ ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ ಮೂರು ವಿಕೆಟ್ ಕಿತ್ತು ಮಿಂಚಿದ್ದರು. ಸದ್ಯ ಆರಂಭವಾಗಿರುವ ಮೂರನೇ ಟೆಸ್ಟ್ನಲ್ಲೂ ಡೇವಿಡ್ ವಾರ್ನರ್ರಂತಹ ವಿಶ್ವಶ್ರೇಷ್ಠ ಆಟಗಾರನನ್ನು ಪೆವಿಲಿಯನ್ಗೆ ಅಟ್ಟಿದ್ದಾರೆ.
India vs Australia: ಭಾರತ - ಆಸ್ಟ್ರೇಲಿಯಾ ಮೂರನೇ ಟೆಸ್ಟ್ಗೆ ವರುಣನ ಅಡ್ಡಿ: ಪಂದ್ಯ ತಾತ್ಕಾಲಿಕ ಸ್ಥಗಿತ
ಮೊದಲ ಟೆಸ್ಟ್ನಲ್ಲಿ ಮೊಹಮ್ಮದ್ ಶಮಿ ಇಂಜುರಿಗೆ ತುತ್ತಾದ ಪರಿಣಾಮ ಇವರ ಜಾಗದಲ್ಲಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿದಿದ್ದರು. ಇತ್ತೀಚೆಗಷ್ಟೆ ಅಸೌಖ್ಯದಿಂದ ಸಿರಾಜ್ ತಂದೆ ಮೊಹಮ್ಮದ್ ಘೌಸ್ ನಿಧನರಾಗಿದ್ದರು. ಈ ಸಂದರ್ಭ ತವರಿಗೆ ಮರಳಲು ಅವಕಾಶ ನೀಡಿದರೂ ತಂಡದೊಂದಿಗೆ ಇದ್ದು ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲು ನಿರ್ಧರಿಸಿದ್ದರು. ಅಲ್ಲದೆ ನಾನು ತಂದೆಯ ಕನಸನ್ನು ನನಸು ಮಾಡಲು ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದಿದ್ದರು.
ಸದ್ಯ ಸಿಡ್ನಿ ಟೆಸ್ಟ್ನ ಆರಂಭಕ್ಕೂ ಮುನ್ನ ಭಾರತ ಹಾಗೂ ಆಸ್ಟ್ರೇಲಿಯಾ ಎರಡೂ ದೇಶಗಳ ರಾಷ್ಟ್ರಗೀತೆಯನ್ನು ಹಾಡಲಾಯುತು. ಈ ಸಂದರ್ಭದಲ್ಲಿ ಮೊಹಮ್ಮದ್ ಸಿರಾಜ್ ತಮ್ಮ ಭಾವುಕತೆಯನ್ನು ನಿಯಂತ್ರಣ ಮಾಡುವಲ್ಲಿ ವಿಫಲರಾಗಿ ಕಣ್ಣೀರು ಹರಿಸಿದರು.
ತಮ್ಮ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗದ ಸಿರಾಜ್, ರಾಷ್ಟ್ರಗೀತೆ ವೇಳೆಯಲ್ಲಿ ಅತ್ಯಂತ ಭಾವುಕರಾಗಿ ಕಂಡುಬಂದಿದ್ದರಲ್ಲದೆ ಆನಂದ ಭಾಷ್ಪವನ್ನು ಸುರಿಸಿದರು. ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಳಿಕ ಅತಿ ಮುಖ್ಯವಾದ ಡೇವಿಡ್ ವಾರ್ನರ್ ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಮೊದಲ ಬ್ರೇಕ್ ನೀಡಿದರು.
IPL 2021: ಡೆಲ್ಲಿ ಕ್ಯಾಪಿಟಲ್ಸ್ ಬಳಗ ಸೇರಿದ ಟೀಮ್ ಇಂಡಿಯಾದ ಮಾಜಿ ಆಟಗಾರ..!
ಭಾರತ ಟೆಸ್ಟ್ ತಂಡಕ್ಕೆ ಪದಾರ್ಪಣೆ ಮಾಡಿದ ವೇಳೆ ಮಾತನಾಡಿದ್ದ ಸಿರಾಜ್, ಇದು ನನ್ನ ಜೀವನದ ದೊಡ್ಡ ಸಾಧನೆ ಎಂದು ಭಾವಿಸುತ್ತೇನೆ ಎಂದಿದ್ದರು. ನಾಯಕ ಅಜಿಂಕ್ಯ ರಹಾನೆ ನನಗೆ ವಿಶ್ವಾಸವನ್ನು ತುಂಬುತ್ತಿದ್ದರು ಹಾಗೂ ಜಸ್ಪ್ರಿತ್ ಬುಮ್ರಾ ಎಲ್ಲಾ ಸಮಯದಲ್ಲೂ ನನ್ನ ಸುತ್ತುಮುತ್ತು ಇರುತ್ತಿದ್ದರು. ಮೊದಲ ಓವರ್ ಬೌಲಿಂಗ್ ಮಾಡಲು ನಾನು ಉತ್ಸುಕನಾಗಿದ್ದೆ ಎಂದು ಅವರು ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ