ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಸಾಗುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ. ಇದರ ಬೆನ್ನಲ್ಲೆ ರಹಾನೆ ಪಡೆಗೆ ಎರಡು ದೊಡ್ಡ ಆಘಾತ ಉಂಟಾಗಿದೆ. ಈಗಾಗಲೇ ಮೊದಲ ಇನ್ನಿಂಗ್ಸ್ ನಲ್ಲಿ ಕಡಿಮೆ ಮೊತ್ತಕ್ಕೆ ತನ್ನಲ್ಲಾ ವಿಕೆಟ್ ಕಳೆದುಕೊಂಡು ಟೀಂ ಇಂಡಿಯಾ ಒತ್ತಡದಲ್ಲದೆ. ಇತ್ತ ದ್ವಿತೀಯ ಇನ್ನಿಂಗ್ಸ್ ಆಸೀಸ್ ಉತ್ತಮವಾಗಿ ಆಡುತ್ತಿದ್ದು, ಪಂದ್ಯದ ಮೇಲೆ ಹಿಡಿತ ಸಾಧಿಸಿದೆ. ಭಾರತೀಯ ಬೌಲರ್ಗಳಿ ನಾನಾ ಪ್ರಯೋಗ ಮಾಡಿದರು ಆಸೀಸ್ ಬ್ಯಾಟ್ಸ್ಮನ್ಗಳನ್ನು ಪೆವಿಲಿಯನ್ಗೆ ಅಟ್ಟಲು ಹರಸಾಹಸ ಪಡುತ್ತಿದ್ದಾರೆ.
ಮೊದಲ ಇನ್ನಿಂಗ್ಸ್ ನಲ್ಲಿ 244 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡ ಭಾರತ ತಂಡ ಆಸ್ಟ್ರೇಲಿಯಾಕ್ಕೆ 94 ರನ್ ಗಳ ಮುನ್ನಡೆ ಬಿಟ್ಟುಕೊಟ್ಟಿತು. ಬಳಿಕ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಆಸೀಸ್ ಇಂದು ಮೂರನೇ ದಿನದ ಅಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ. ಇದರೊಂದಿಗೆ 197 ರನ್ ಗಳ ಮುನ್ನಡೆ ಹೊಂದಿದೆ.
IPL 2021: ಹರಾಜಿಗೂ ಮುನ್ನ ಸ್ಟಾರ್ ಕನ್ನಡಿಗನನ್ನ ಕೈಬಿಡಲು ಮುಂದಾದ ಕಿಂಗ್ಸ್ ಇಲೆವೆನ್ ಪಂಜಾಬ್?
ಟೀಂ ಇಂಡಿಯಾಕ್ಕೆ ಈ ಪಂದ್ಯದಲ್ಲಿ ಜಯವಂತು ದೂರದ ಮಾತಾಗಿದ್ದು ಕನಿಷ್ಠ ಪಂದ್ಯವನ್ನು ಸೋಲದೆ ಡ್ರಾ ಸಾಧಿಸುವ ಪ್ಲ್ಯಾನ್ ಮಾಡಬೇಕಿದೆ. ಹೀಗಿರುವಾಗಲೇ ತಂಡಕ್ಕೆ ಮತ್ತೆ ಇಂಜುರಿ ಸಮಸ್ಯೆ ತಲೆ ಎದ್ದಿದೆ. ಇಂದು ಇಬ್ಬರು ಪ್ರಮುಖ ಆಟಗಾರರು ಗಾಯಕ್ಕೆ ತುತ್ತಾಗಿ ಮೈದಾನದಿಂದ ಹೊರ ನಡೆದಿದ್ದಾರೆ.
ರಿಷಭ್ ಪಂತ್ ಬ್ಯಾಟಿಂಗ್ ಮಾಡುವಾಗ ಪ್ಯಾಟ್ ಕಮ್ಮಿನ್ಸ್ ಎಸೆದ ಚೆಂಡು ಅವರ ಮೊಣಕೈಗೆ ತಗುಲಿತು. ಈ ವೇಳೆ ಮೈದಾನಕ್ಕೆ ಬಂದ ಫಿಸಿಯೋ ಚಿಕಿತ್ಸೆ ನೀಡಿದ ನಂತರ ಪಂತ್ ಮತ್ತೆ ಬ್ಯಾಟಿಂಗ್ ಮುಂದುವರೆಸಿದರು. ಆದರೆ, ಔಟ್ ಆದ ಬಳಿಕ ಪಂತ್ ಮೊಣಕೈಗೆ ಬಲವಾದ ಪೆಟ್ಟು ಬಿದ್ದಿದ್ದು ಕಂಡುಬಂದಿದೆ. ಅವರನ್ನು ಸ್ಕ್ಯಾನ್‌ಗಾಗಿ ಕರೆದೊಯ್ಯಲಾಗಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಹೀಗಾಗಿ ಎರಡನೇ ಇನ್ನಿಂಗ್ಸ್ನಲ್ಲಿ ಪಂತ್ ಬದಲು ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
India vs Australia: ಸಂಕಷ್ಟದಲ್ಲಿ ಭಾರತ, ಆಸೀಸ್ ಉತ್ತಮ ಮುನ್ನಡೆ: ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 103/2
ಇನ್ನೂ ಪಂತ್ ಬೆನ್ನಲ್ಲೆ ಆಲ್ರೌಂಡರ್ ರವೀಂದ್ರ ಜಡೇಜಾ ಕೂಡ ಇಂಜುರಿಗೆ ತುತ್ತಾಗಿದ್ದಾರೆ. ಬ್ಯಾಟಿಂಗ್ ನಡೆಸುತ್ತಿದ್ದ ವೇಳೆ ಜಡೇಜಾ ಕೂಡ ಗಾಯಗೊಂಡಿದ್ದು, ಅವರನ್ನು ಸ್ಕ್ಯಾನ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ರವೀಂದ್ರ ಜಡೇಜಾ ಬ್ಯಾಟಿಂಗ್ ಮಾಡುವಾಗ ಎಡಗೈ ಹೆಬ್ಬೆರಳಿಗೆ ಪೆಟ್ಟು ಮಾಡಿಕೊಂಡಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಜಡೇಜಾ ಅವರನ್ನು ಸ್ಕ್ಯಾನ್‌ಗಾಗಿ ಕರೆದೊಯ್ಯಲಾಗಿದೆ ಎಂದು ಹೇಳಿದೆ.
ಈಗಾಗಲೇ ಭಾರತ ತಂಡದಿಂದ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಕೆ. ಎಲ್ ರಾಹುಲ್, ಉಮೇಶ್ ಯಾದವ್ ಇಂಜುರಿಯಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಸದ್ಯ ಪಂತ್ ಹಾಗೂ ಜಡೇಜ ಗಾಯದ ಸಮಸ್ಯೆಗೆ ಒಳಗಾಗಿರುವುದು ತಂಡಕ್ಕೆ ತೀವ್ರ ಹಿನ್ನಡೆಯಾಗಿ ಪರಿಣಮಿಸಿದೆ. ಈ ಇಬ್ಬರು ದ್ವಿತೀಯ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಗೆ ಲಭ್ಯವಾಗುವರೇ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ