India vs Australia: ಭಾರತ – ಆಸ್ಟ್ರೇಲಿಯಾ ಟೆಸ್ಟ್​ ಸರಣಿಗೆ ಕ್ಷಣಗಣನೆ: ಯಾವಾಗ, ಏಲ್ಲಿ, ಎಷ್ಟು ಗಂಟೆಗೆ?, ಇಲ್ಲಿದೆ ಮಾಹಿತಿ

ಆಸ್ಟ್ರೇಲಿಯಾ ವಿರುದ್ಧ ಎರಡು ಅಭ್ಯಾಸ ಪಂದ್ಯವನ್ನಾಡಿರುವ ಭಾರತೀಯ ಆಟಗಾರರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹಾಗಾದ್ರೆ ಟೆಸ್ಟ್​ ಸರಣಿ ಯಾವಾಗ ಆರಂಭ?, ಎಷ್ಟು ಗಂಟೆಗೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

India vs Australia

India vs Australia

 • Share this:
  ಕಾಂಗರೂಗಳ ನಾಡಿನಲ್ಲಿ ಬೀಡುಬಿಟ್ಟಿರುವ ಭಾರತ ಕ್ರಿಕೆಟ್ ತಂಡ ಈಗಾಗಲೇ ಏಕದಿನ ಹಾಗೂ ಟಿ-20 ಸರಣಿಯನ್ನಾಡಿ ಮುಗಿಸಿದೆ. ಏಕದಿನ ಸರಣಿಯನ್ನ ಆಸ್ಟ್ರೇಲಿಯಾ 2-1 ಅಂತರದಿಂದ ವಶಪಡಿಸಿಕೊಂಡರೆ, ಟಿ-20 ಸರಣಿಯಲ್ಲಿ ಭಾರತ 2-1 ಅಂತರದಿಂದ ಗೆದ್ದು ಸೇಡು ತೀರಿಸಿಕೊಂಡಿತು. ಸದ್ಯ ಉಭಯ ತಂಡಗಳು ಪ್ರತಿಷ್ಠಿತ ಟೆಸ್ಟ್​ ಸರಣಿಗೆ ಸಜ್ಜಾಗುತ್ತಿದೆ. ಎರಡು ಅಭ್ಯಾಸ ಪಂದ್ಯವನ್ನಾಡಿರುವ ಭಾರತೀಯ ಆಟಗಾರರು ಉತ್ತಮ ಫಾರ್ಮ್​ನಲ್ಲಿದ್ದಾರೆ. ಹಾಗಾದ್ರೆ ಟೆಸ್ಟ್​ ಸರಣಿ ಯಾವಾಗ ಆರಂಭ?, ಎಷ್ಟು ಗಂಟೆಗೆ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

  ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್​ ಸರಣಿ ಆಡಲಿದೆ. ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿರುವುದು ವಿಶೇಷ. ಈ ಪಂದ್ಯ ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.

  Bangabandhu T20: ಅದು ನನ್ನ ಕ್ಯಾಚ್...ಸಹ ಆಟಗಾರನ ಮೇಲೆ ಹಲ್ಲೆಗೆ ಮುಂದಾದ ಮುಷ್ಫಿಕುರ್ ರಹೀಮ್

  ಇನ್ನೂ ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್​ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್​ ಬ್ರಿಸ್ಬೇನ್​ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ. ಎರಡು ಹಾಗೂ ಮೂರನೇ ಟೆಸ್ಟ್ ಮುಂಜಾನೆ 5 ಗಂಟೆಗೆ ಶುರುವಾದರೆ, ಅಂತಿಮ ಟೆಸ್ಟ್​ 5:30ಕ್ಕೆ ಆರಂಭವಾಗಲಿದೆ.

  ಆಡಿದ ಎರಡು ಅಭ್ಯಾಸ ಪಂದ್ಯಗಳಲ್ಲಿ ಭಾರತೀಯ ಬೌಲರ್​ಗಳು ಉತ್ತಮ ಪ್ರದರ್ಶನ ತೋರಿದ್ದರು. ಆದರೆ, ಬ್ಯಾಟಿಂಗ್​ನಲ್ಲಿ ಘನತೆಗೆ ತಕ್ಕಂತೆ ಆಡಲಿಲ್ಲ. ಮೊದಲ ಪಂದ್ಯದಲ್ಲಿ ನಾಯಕ ಅಜಿಂಕ್ಯಾ ರಹಾನೆ ಶತಕ ಬಾರಿಸಿದರೆ, ಎರಡನೇ ಪಂದ್ಯದಲ್ಲಿ ಸಂಪೂರ್ಣ ವಿಫಲರಾದರು. ಟೆಸ್ಟ್​ ಸ್ಪೆಷಲಿಸ್ಟ್​ ಚೇತೇಶ್ವರ್ ಪೂಜಾರ ಕೂಡ ಫಾರ್ಮ್​ ಕಳೆದುಕೊಂಡಿದ್ದಾರೆ.

  ಓಪನರ್ ಪೃಥ್ವಿ ಶಾ ಯಾವೊಂದು ಪಂದ್ಯದಲ್ಲಿ ನಿರೀಕ್ಷೆಗೆ ತಕ್ಕಂತೆ ಆಡಿಲ್ಲ. ಹೀಗಾಗಿ ಆರಂಭಿಕರಾಗಿ ಮಯಾಂಕ್ ಅಗರ್ವಾಲ್ ಜೊತೆ ಶುಭ್ಮನ್ ಗಿಲ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇನ್ನೂ ವಿಕೆಟ್ ಕೀಪರ್ ಸ್ಥಾನದ ಗೊಂದಲ ಭಾರತಕ್ಕೆ ಮತ್ತಷ್ಟು ತಲೆನೋವು ನೀಡಿದೆ. ವೃದ್ದಿಮಾನ್ ಸಾಹ ಮೊದಲ ಟೆಸ್ಟ್​ನಲ್ಲಿ ತಂಡಕ್ಕೆ ಆಸರೆಯಾಗಿದ್ದರೆ, ಎರಡನೇ ಟೆಸ್ಟ್​ನಲ್ಲಿ ರಿಷಭ್ ಪಂತ್ ಶತಕ ಸಿಡಿಸಿ ಅಬ್ಬರಿಸಿದ್ದರು.

  ಬೌಲಿಂಗ್​ನಲ್ಲಿ ಇಶಾಂತ್ ಶರ್ಮಾ ಅಲಭ್ಯತೆ ನಡುವೆ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ತಂಡಕ್ಕೆ ಬಲ ನೀಡಬೇಕಿದೆ. ಇವರ ಜೊತೆ ಉಮೇಶ್ ಯಾದವ್ ಅಥವಾ ಮೊಹಮ್ಮದ್ ಸಿರಾಜ್ ನಡುವೆ ಪೈಪೋಟಿ ಏರ್ಪಡಲಿದೆ. ಹೀಗಾಗಿ ಮೊದಲ ಟೆಸ್ಟ್​ನಲ್ಲಿ ಭಾರತದ ಆಡುವ ಬಳಗ ಹೇಗಿರಲಿದೆ ಎಂಬುದು ಸಾಕಷ್ಟು ಕುತೂಹಲ ಕೆರಳಿಸಿದೆ.

  ಅಚ್ಚರಿಯ ಆಯ್ಕೆ: ಆಕಾಶ್ ಚೋಪ್ರಾ ಹೆಸರಿಸಿದ ದಶಕದ ಟಿ20 ತಂಡದಲ್ಲಿ ಯಾರಿಗೆಲ್ಲಾ ಸ್ಥಾನ?

  ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ. ಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರಹಾನೆ (ಉಪ ನಾಯಕ), ಹನುಮ ವಿಹಾರಿ, ಶುಭ್ಮನ್ ಗಿಲ್, ವೃದ್ಧಿಮಾನ್ ಸಾಹ, ರಿಷಭ್ ಪಂತ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್.
  Published by:Vinay Bhat
  First published: