ಕಾಂಗರೂಗಳ ನಾಡಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಭಾರತ ಸರಣಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ನ. 27ಕ್ಕೆ ಇಂಡೋ-ಆಸೀಸ್ ಕಾದಾಟಕ್ಕೆ ಕ್ವಿಕ್ ಸ್ಟಾರ್ಟ್ ಸಿಗಲಿದ್ದು, ಟೀಂ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಒಟ್ಟು ಮೂರು ಏಕದಿನ, ಮೂರು ಟಿ-20 ಮತ್ತು 4 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿವೆ. ಆಸ್ಟ್ರೇಲಿಯಾದ ಬೌನ್ಸಿಂಗ್ ಪಿಚ್ನಲ್ಲಿ ಭಾರತಕ್ಕೆ ಗೆಲುವು ಅಷ್ಟೊಂದು ಸುಲಭವಿಲ್ಲ. ಆದರೆ, ಈ ನಡುವೆ ಕೊಹ್ಲಿ ಪಡೆಗೆ ಎರಡು ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.
ಐಪಿಎಲ್ ವೇಳೆ ಗಾಯಗೊಂಡಿದ್ದ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ವೃದ್ಧಿಮಾನ್ ಸಹಾ ಸದ್ಯ ಫಿಟ್ ಆಗಿದ್ದು ಭಾರತ ತಂಡದ ಜೊತೆಗೆ ನೆಟ್ಸ್ನಲ್ಲಿ ಅಭ್ಯಾಸ ಶುರು ಮಾಡಿದ್ದಾರೆ.
India vs Australia: ಭಾರತ-ಆಸ್ಟ್ರೇಲಿಯಾ ಸರಣಿ ಯಾವಾಗ ಆರಂಭ?, ಎಲ್ಲಿ?, ಎಷ್ಟು ಗಂಟೆಗೆ?: ಇಲ್ಲಿದೆ ಸಂಪೂರ್ಣ ಮಾಹಿತಿ
ಜೊತೆಗೆ ಐಪಿಎಲ್ ನಡುವೆ ಅನುಭವಿ ಬಲಗೈ ವೇಗಿ ಇಶಾಂತ್ ಶರ್ಮಾ ಸ್ನಾಯು ಸೆಳೆತದ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಸದ್ಯ ಎರಡು ವಾರಗಳಿಂದ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು ಟೆಸ್ಟ್ ಸರಣಿಗೆ ಲಭ್ಯರಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ವೃದ್ದಿಮಾನ್ ಸಾಹ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಬಿಸಿಸಿಐ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, "ನೋಡಿ ಇಂದು ನೆಟ್ಸ್ನಲ್ಲಿ ಯಾರು ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೆಲೋ ವೃದ್ಧಿಮಾನ್ ಸಹಾ" ಎಂದು ಟ್ವೀಟ್ನಲ್ಲಿ ಬರೆದುಕೊಂಡಿದೆ.
ಇತ್ತ ಇಶಾಂತ್ ಶರ್ಮಾ ಕೂಡ ಬಹುತೇಕ ಫಿಟ್ ಆಗಿದ್ದು, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ಅವರು ನೆಟ್ಸ್ನಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿದ್ದಾರೆ. ಇಶಾಂತ್ ಸಿಂಗಲ್ ಸ್ಟಂಪ್ ಗುರಿಯಾಗಿಟ್ಟುಕೊಂಡು ಬೌಲಿಂಗ್ ಮಾಡಿದ್ದು, ತರಬೇತುದಾರರಾದ ಪಾರಸ್ ಮಾಂಬ್ರೆ ಮತ್ತು ಮನ್ಸೂರ್ ಖಾನ್ ಈ ಸಂದರ್ಭದಲ್ಲಿ ಹಾಜರಿದ್ದರು.
ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಒಟ್ಟು 4 ಪಂದ್ಯಗಳ ಐದು ದಿನಗಳ ಟೆಸ್ಟ್ ಸರಣಿ ಆಡಲಿದೆ. ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿರುವುದು ವಿಶೇಷ.
ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಸರಣಿ ಘೋಷಿಸಿದ ಇಂಗ್ಲೆಂಡ್; ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ
ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್ ಬ್ರಿಸ್ಬೇನ್ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ