ಬೆಂಗಳೂರು (ಜ. 24): ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿಗೆ ಗೆದ್ದು ಬೀಗಿ ತವರಿಗೆ ಬಂದಿಳಿದಿರುವ ಟೀಂ ಇಂಡಿಯಾ ಸದ್ಯ ಮತ್ತೊಂದು ದೊಡ್ಡ ಸರಣಿಗೆ ಸಜ್ಜಾಗುತ್ತಿದೆ. ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸುದೀರ್ಘ ಸರಣಿಯಲ್ಲಿ 4 ಟೆಸ್ಟ್ ಪಂದ್ಯ, 5 ಟಿ-20 ಪಂದ್ಯಗಳು ಮತ್ತು 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಫೆಬ್ರವರಿ 5 ರಿಂದ ಚೆನ್ನೈನ ಎಂ. ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗುವ ಮೂಲಕ ಚಾಲನೆ ಸಿಗಲಿದೆ. ಟೆಸ್ಟ್ ಪಂದ್ಯಗಳು ಪ್ರೇಕ್ಷಕರಿಲ್ಲದೆ ಖಾಲಿ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ. ಇದಕ್ಕೆ ಅಭಿಮಾನಿಗಳು ತುಂಬಾನೆ ಬೇಸರ ವ್ಯಕ್ತಪಡಿಸಿದ್ದರು.
ಸದ್ಯ ಟೆಸ್ಟ್ ಸರಣಿ ಪ್ರೇಕ್ಷಕರಿಲ್ಲದೆ ನಡೆಯುವುದು ಬಹುತೇಕ ಖಚಿತವಾಗಿದೆ. ಆದರೆ ಟಿ-20 ಸರಣಿಯ ಹೈವೋಲ್ಟೇಜ್ ಪಂದ್ಯಕ್ಕೆ ಬಿಸಿಸಿಐ ಪ್ಲ್ಯಾನ್ ಮಾಡಿದೆ. ಐದು ಪಂದ್ಯಗಳ ಟಿ-20 ಸರಣಿಗೆ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಂತಿಸಿದೆ.
IPL 2021 Auction: ಹರಾಜಿನಲ್ಲಿ ಈ ವಿಶ್ವಶ್ರೇಷ್ಠ ಆಟಗಾರನನ್ನು ಖರೀದಿಸಲು ಕಣ್ಣಿಟ್ಟಿದೆ RCB?
ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, “ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ-20 ಸರಣಿಗೆ ಸ್ಟೇಡಿಯಂನಲ್ಲಿ ಶೆ. 50ರಷ್ಟು ಪ್ಲೇಕ್ಷಕರನ್ನು ಕರೆತರಲು ನಾವು ಮುಂದಾಗಿದ್ದೇವೆ. ಆದರೆ, ಇದರ ಅಂತಿಮ ತೀರ್ಮಾನವನ್ನು ನಾವು ಸರ್ಕಾರಕ್ಕೆ ಬಿಟ್ಟಿದ್ದೇವೆ“ ಎಂದು ಬಿಸಿಸಿಐ ಖಚಿತ ಮೂಲಗಳಿಂದ ತಿಳಿದುಬಂದಿದೆ.
ಫೆಬ್ರವರಿ 5 ರಿಂದ ಚೆನ್ನೈನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದ್ದು, 13 ರಿಂದ 17 ರ ವರೆಗೆ 2ನೇ ಪಂದ್ಯ ನಡೆಯಲಿದೆ. ಫೆಬ್ರವರಿ 24 ರಿಂದ 28 ವರೆಗೆ ಅಹಮದಾವಾದ್ನಲ್ಲಿ 3ನೇ ಟೆಸ್ಟ್ ಮತ್ತು ಮಾರ್ಚ್ 4 ರಿಂದ 8 ವರೆಗೆ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ. ನಂತರ ಅಹಮದಾಬಾದ್‌ನಲ್ಲಿ ಐದು ಪಂದ್ಯಗಳ ಟಿ-20 ಸರಣಿ ಮತ್ತು ಪುಣೆಯಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.
IPL 2021: ಈ ಬಾರಿಯ ಐಪಿಎಲ್ ಬಾರತದಲ್ಲೋ? ಅಥವಾ ಯುಎಇನಲ್ಲೋ?: ಹೊರಬಿತ್ತು ಮಾಹಿತಿ
ನಿನ್ನೆಯಷ್ಟೆ ತಮಿಳುನಾಡು ಕ್ರಿಕೆಟ್ ಸಂಸ್ಥೆ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಎರಡು ಟೆಸ್ಟ್ ಪಂದ್ಯಗಳು ಪ್ರೇಕ್ಷಕರಿಲ್ಲದೆ ಖಾಲಿ ಸ್ಟೇಡಿಯಂನಲ್ಲಿ ನಡೆಯಲಿವೆ ಎಂದು ಖಚಿತ ಪಡಿಸಿತ್ತು. “ಬಿಸಿಸಿಐ ಮಾರ್ಗಸೂಚಿಯಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾ ವೈರಸ್ ಭೀತಿಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಮೊದಲೇ ಬಿಸಿಸಿಐ ಎಸ್‌ಒಪಿ ಸಿದ್ಧಪಡಿಸಿತ್ತು. ಬಿಸಿಸಿಐ ಮಾರ್ಗಸೂಚಿಯಂತೆ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅನುಮತಿ ನೀಡಲಾಗುತ್ತಿಲ್ಲ” ಎಂದು ಟಿಎನ್‌ಸಿಎ ಕಾರ್ಯದರ್ಶಿ ಆರ್.ಎಸ್ ರಾಮಸ್ವಾಮಿ ತಿಳಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ