ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ಗೆದ್ದು ಬೀಗುತ್ತಿರುವ ಟೀಮ್ ಇಂಡಿಯಾ ಇಂದು ಎರಡನೇ ಏಕದಿನ ಪಂದ್ಯ ಗೆದ್ದು ಸರಣಿ ಜಯಿಸುವ ಯೋಜನೆಯಲ್ಲಿ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡ ಹಂಗಾಮಿ ನಾಯಕ ಜೋಸ್ ಬಟ್ಲರ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಮೊದಲ ಏಕದಿನ ಪಂದ್ಯದ ವೇಳೆ ಗಾಯಗೊಂಡಿರುವ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ಇಂದು ಕಣಕ್ಕಿಳಿದಿಲ್ಲ. ಅವರ ಬದಲಿಗೆ ತಂಡದಲ್ಲಿ ಡೇವಿಡ್ ಮಲಾನ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಗಾಯದಿಂದ ಬಳಲುತ್ತಿರುವ ಸ್ಯಾಮ್ ಬಿಲ್ಲಿಂಗ್ಸ್ ಬದಲಿಗೆ ಲಿಯಾಮ್ ವಿಲಿಂಗ್ಸ್ಟೋನ್ ಸ್ಥಾನ ಪಡೆದಿದ್ದಾರೆ. ಅದೇ ರೀತಿ ಮಾರ್ಕ್ವುಡ್ ಸ್ಥಾನದಲ್ಲಿ ರೀಸ್ ಟಾಪ್ಲೆ ಕಣಕ್ಕಿಳಿದಿದ್ದಾರೆ.
ಇನ್ನು ಗಾಯಗೊಂಡು ಸರಣಿಯಿಂದಲೇ ಹೊರಬಿದ್ದಿರುವ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಬದಲಿಗೆ ಇಂದು ತಂಡದಲ್ಲಿ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ.
ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಹೊಂದಿರುವ ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಜಯಗಳಿಸಿದರೆ ಸರಣಿ ವಶವಾಗಲಿದೆ. ಹಾಗೆಯೇ ಇಂಗ್ಲೆಂಡ್ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸರಣಿಯನ್ನು ಮುಂದಿನ ಪಂದ್ಯಕ್ಕೆ ಉಳಿಸಿಕೊಳ್ಳಲು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.
ಭಾರತ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ, ಶಿಖರ್ ಧವನ್, ಕೆ.ಎಲ್. ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ