India vs England 3rd ODI: ಇಂಡಿಯಾ-ಇಂಗ್ಲೆಂಡ್ ಫೈನಲ್ ಕದನ: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ

ವಿರಾಟ್ ಕೊಹ್ಲಿ (ನಾಯಕ) ರೋಹಿತ್‌ ಶರ್ಮ, ಶಿಖರ್‌ ಧವನ್‌, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್‌, ಶಾರ್ದುಲ್ ಠಾಕುರ್

India vs England

India vs England

 • Share this:
  ಪುಣೆಯ ಮಹಾರಾಷ್ಟ್ರ ಕ್ರಿಕೆಟ್​ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. 3 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳ ತಲಾ ಒಂದೊಂದು ಜಯ ಸಾಧಿಸಿದ್ದು, ಹೀಗಾಗಿ ಇಂದಿನ ಪಂದ್ಯವು ನಿರ್ಣಾಯಕವಾಗಲಿದೆ.

  ಮೊದಲ ಪಂದ್ಯದಲ್ಲಿ ಭಾರತ 66 ರನ್​ಗಳ ಭರ್ಜರಿ ಜಯ ಸಾಧಿಸಿದರೆ, ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 6 ವಿಕೆಟ್​ಗಳ ಜಯ ಸಾಧಿಸಿತ್ತು. ಅದರಲ್ಲೂ 2ನೇ ಪಂದ್ಯದಲ್ಲಿ ಭಾರತ ನೀಡಿದ 337 ರನ್​ಗಳ ಬೃಹತ್ ಟಾರ್ಗೆಟ್​ನ್ನು ಕೇವಲ 43.3 ಓವರ್​ಗಳಲ್ಲಿ ಚೇಸ್ ಮಾಡಿರುವುದು ವಿಶೇಷ. ಹೀಗಾಗಿ ಇಂದಿನ ಪಂದ್ಯದಲ್ಲೂ ಹಂಗಾಮಿ ನಾಯಕ ಜೋಸ್ ಬಟ್ಲರ್ ಚೇಸಿಂಗ್​ನ್ನು ಆಯ್ದುಕೊಂಡಿದ್ದಾರೆ.

  ಇತ್ತ 2ನೇ ಪಂದ್ಯದಲ್ಲಿ ಭಾರತ ತಂಡದ ಬೌಲರುಗಳು ದುಬಾರಿ ಎನಿಸಿಕೊಂಡಿದ್ದರು. ಅದರಲ್ಲೂ ಸ್ಪಿನ್ನರ್​ಗಳಾದ ಕುಲ್​ದೀಪ್ ಯಾದವ್ ಹಾಗೂ ಕೃನಾಲ್ ಪಾಂಡ್ಯ ಅವರನ್ನು ಬೆನ್ ಸ್ಟೋಕ್ಸ್ ಹಾಗೂ ಜಾನಿ ಬೈರ್​ಸ್ಟೋವ್ ಬೆಂಡೆತ್ತಿದ್ದರು. ಹೀಗಾಗಿ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

  ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದರೂ ಯಶಸ್ಸು ಸಾಧಿಸಿರದ ಸ್ಪಿನ್ನರ್​ ಕುಲ್​ದೀಪ್ ಯಾದವ್ ಬದಲಿಗೆ ಟಿ. ನಟರಾಜನ್ ಅವರಿಗೆ ಅವಕಾಶ ನೀಡಲಾಗಿದೆ. ಹಾಗೆಯೇ ಇಂಗ್ಲೆಂಡ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಕಳೆದ ಪಂದ್ಯದಿಂದ ಹೊರಗುಳಿದಿದ್ದ ಮಾರ್ಕ್​ವುಡ್ ತಂಡಕ್ಕೆ ಮರಳಿದ್ದು, ಟಾಮ್ ಕರ್ರನ್ ಸ್ಥಾನ ಕಳೆದುಕೊಂಡಿದ್ದಾರೆ.

  ಉಭಯ ತಂಡಗಳು ಹೀಗಿವೆ:-

  ಭಾರತ: ವಿರಾಟ್ ಕೊಹ್ಲಿ (ನಾಯಕ) ರೋಹಿತ್‌ ಶರ್ಮ, ಶಿಖರ್‌ ಧವನ್‌, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್‌, ಶಾರ್ದುಲ್ ಠಾಕುರ್‌, ಪ್ರಸಿದ್ಧ್ ಕೃಷ್ಣ, ಟಿ. ನಟರಾಜನ್‌.

  ಇಂಗ್ಲೆಂಡ್‌: ಜೋಸ್ ಬಟ್ಲರ್ (ನಾಯಕ) ಜೇಸನ್‌ ರಾಯ್‌, ಜಾನಿ ಬೇರ್‌ ಸ್ಟೋವ್, ಬೆನ್‌ ಸ್ಟೋಕ್ಸ್‌, ಡೇವಿಡ್‌ ಮಲಾನ್‌, ಲಿಯಮ್‌ ಲಿವಿಂಗ್‌ಸ್ಟೋನ್‌, ಮೊಯಿನ್‌ ಅಲಿ, ಸ್ಯಾಮ್‌ ಕರನ್‌, ಮಾರ್ಕ್‌ ವುಡ್‌, ಆದಿಲ್‌ ರಶೀದ್‌, ರೀಸ್‌ ಟಾಪ್ಲೆ
  Published by:zahir
  First published: