ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿ ನಡೆಯಲಿರುವ ವಿಷಯ ಗೊತ್ತೇ ಇದೆ. ಈ ಟೆಸ್ಟ್ ಸರಣಿ ಆಗಸ್ಟ್ 4ರಂದು ಆರಂಭವಾಗಲಿದೆ. ನಾಟಿಂಗ್ ಹ್ಯಾಮ್ನಲ್ಲಿ ಈ ಟೆಸ್ಟ್ ಸರಣಿ ಆರಂಭವಾಗುವ ಮೊದಲೇ ಟೀಮ್ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಅವರು ಗಾಯಗೊಂಡಿದ್ದಾರೆ. ಇದರಿಂದಾಗಿ ಮಯಾಂಕ್ ಅಗರ್ವಾಲ್ ಅವರು ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯುವಂತಾಗಿದೆ. ನಾಟಿಂಗ್ಹ್ಯಾಮ್ನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿದ್ದು, ಈ ವೇಳೆ ಅಭ್ಯಾಸದಲ್ಲಿ ತೊಡಗಿದ್ದ ಆರಂಭಿಕ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಅವರು ಗಾಯಗೊಂಡಿದ್ದಾರೆ.
ಸೋಮವಾರ ಅಭ್ಯಾಸ ಮಾಡುವಾಗ ಬ್ಯಾಟಿಂಗ್ ಮಾಡುತ್ತಿದ್ದ ಮಯಾಂಕ್ ಅಗರ್ವಾಲ್ ಅವರಿಗೆ ಬಲಗೈ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ಎಸೆದ ಬೌನ್ಸರ್ನಲ್ಲಿ ತಲೆಗೆ ಕೊಂಚ ಪೆಟ್ಟಾಗಿದೆ. ಪೆಟ್ಟಾಗುತ್ತಿದ್ದಂತೆಯೇ ಮಯಾಂಕ್ ಅವರು ಅಲ್ಲೇ ಕುಸಿದು ಬಿದ್ದಿದ್ದಾರಂತೆ.
NEWS 🚨- Mayank Agarwal ruled out of first Test due to concussion.
The 30-year-old is stable and will remain under close medical observation.
More details here - https://t.co/6B5ESUusRO #ENGvIND pic.twitter.com/UgOeHt2VQQ
— BCCI (@BCCI) August 2, 2021
ಇದನ್ನೂ ಓದಿ: Bigg Boss Kannada Season 8: ಬಿಗ್ ಬಾಸ್ ಸೀಸನ್ 8ರ ಫಿನಾಲೆಗೂ ಮುನ್ನ 2 ಲಕ್ಷ ಗೆಲ್ಲುವ ಅವಕಾಶ..!
ಮಯಾಂಕ್ ಅಗರ್ವಾಲ್ ಅವರಿಗೆ ಪೆಟ್ಟಾಗಿರುವ ಕಾರಣದಿಂದಾಗಿ ಅವರು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಬಿಸಿಸಿಐ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದೆ. ರೋಹಿತ್ ಶರ್ಮಾ ಜೊತೆ ಮಯಾಂಕ್ ಅವರ ಆಪ್ತ ಸ್ನೇಹಿತ ಕೆ.ಎಲ್ ರಾಹುಲ್ ಅವರು ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಭ್ಯಾಸ ಮಾಡುತ್ತಿದ್ದಾಗ ಸಿರಾಜ್ ಅವರು ಎಸೆದ ಶಾರ್ಟ್ ಪಿಚ್ ಎಸೆತದಿಂದ ಮಯಾಂಕ್ ಅಗರ್ವಾಲ್ ಅವರ ತಲೆಯ ಹಿಂಬದಿಗೆ ಪೆಟ್ಟಾಗಿದೆ. ಇದರಿಂದಾಗಿ ಸದ್ಯ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಅವರನ್ನು ಹೊರಗುಳಿಸಲಾಗಿದೆ. ಮಯಾಂಕ್ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, 30 ವರ್ಷದ ಕ್ರಿಕೆಟಿಗನನ್ನು ವೈದ್ಯರ ಕಣ್ಗಾವಲಿನಲ್ಲಿ ಇಡಲಾಗಿದೆ.
ಇದನ್ನೂ ಓದಿ: Dvitva: ದ್ವಿತ್ವ ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ಗೆ ನಾಯಕಿಯಾದ ತ್ರಿಷಾ..!
ಟೀಮ್ ಇಂಡಿಯಾದಲ್ಲಿ ಆರಂಭಿಕ ಬ್ಯಾಟ್ಸ್ಮನ್ ಆಗಿರುವ ಅಭಿಮನ್ಯು ಈಶ್ವರನ್ ಅವರೂ ಇದ್ದಾರೆ. ಜೊತೆಗೆ ಪೃಥ್ವಿ ಶಾ ಅವರನ್ನು ಇಂಗ್ಲೆಂಡ್ಗೆ ಕಳುಹಿಸಲಾಗಿದೆ. ಎರಡನೇ ಪಂದ್ಯದ ಹೊತ್ತಿಗೆ ಪೃಥ್ವಿ ಶಾ ಅವರು ತಂಡದಲ್ಲಿ ಆಡಲು ಲಭ್ಯವಿರುತ್ತಾರೆ.
ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಆಗಸ್ಟ್ 4ರಿಂದ ಟೆಸ್ಟ್ ಪಂದ್ಯಗಳು ಆರಂಭವಾಗಲಿವೆ. ಈಗಾಗಲೇ ಭಾರತ ತಂಡದ ಹಲವು ಆಟಗಾರರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆರಂಭಿಕ ಬ್ಯಾಟ್ಸಮನ್ ಶುಭಮನ್ ಗಿಲ್, ಸ್ಪಿನ್ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಹಾಗೂ ಯುವ ವೇಗಿ ಆವೇಶ್ ಖಾನ್ ಇಂಗ್ಲೆಂಡ್ ಪ್ರವಾಸದಿಂದ ಹೊರಗೆ ಉಳಿದಿದ್ದರು. ಇದೀಗ ಅಗರ್ವಾಲ್ ಸಹ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಇದನ್ನೂ ಓದಿ: Photoshoot: ಅಂಡರ್ ವಾಟರ್ನಲ್ಲಿ ಬೇಬಿ ಬಂಪ್ ತೋರಿಸುತ್ತಾ ಫೋಟೋಶೂಟ್ಗೆ ಪೋಸ್ ಕೊಟ್ಟ ನಟಿ ಫರೀನಾ ಆಜಾದ್..!
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ