ಈ ಪ್ರಮುಖ ಬದಲಾವಣೆ ಮಾಡಿಕೊಂಡು ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕೆ ಇಳಿಯುತ್ತಿದೆ ಭಾರತ

ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾ ಓಪನರ್​ ಶಿಖರ್​ ಧವನ್​ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಆರಂಭದಲ್ಲಿ ಪಂದ್ಯಕಟ್ಟುವ ಜವಾಬ್ದಾರಿ ರೋಹಿತ್​ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್​. ರಾಹುಲ್​ ಹೆಗಲಿಗೆ ಬೀಳುವ ಸಾಧ್ಯತೆ ಇದೆ.

Rajesh Duggumane | news18-kannada
Updated:December 15, 2019, 11:51 AM IST
ಈ ಪ್ರಮುಖ ಬದಲಾವಣೆ ಮಾಡಿಕೊಂಡು ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕೆ ಇಳಿಯುತ್ತಿದೆ ಭಾರತ
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ
  • Share this:
ಚೆನ್ನೈ: ವೆಸ್ಟ್​ ಇಂಡೀಸ್ ವಿರುದ್ಧದ ಟಿ-20 ಸರಣಿಯನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ ಇಂದು ಏಕದಿನ ಸರಣಿ ಆಡಲಿದೆ. ಈ ಪಂದ್ಯವನ್ನೂ ಗೆಲ್ಲುವ ನಿರೀಕ್ಷೆಯಲ್ಲಿರುವ ಕೊಹ್ಲಿ ಪಡೆದ ಅದಕ್ಕಾಗಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ.

ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ-ವೆಸ್ಟ್​ ಇಂಡೀಸ್​ ಪಂದ್ಯ ನಡೆಯಲಿದೆ. ಮಧ್ಯಾಹ್ನ 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದ್ದು, 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಇಂದಿನ ಮ್ಯಾಚ್​ಗಾಗಿ ಕೆಲ ಪ್ರಮುಖ ಬದಲಾವಣೆಯನ್ನು ಟೀಂ ಇಂಡಿಯಾ ಮಾಡಿಕೊಂಡಿದೆ.

ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾ ಓಪನರ್​ ಶಿಖರ್​ ಧವನ್​ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಆರಂಭದಲ್ಲಿ ಪಂದ್ಯಕಟ್ಟುವ ಜವಾಬ್ದಾರಿ ರೋಹಿತ್​ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್​. ರಾಹುಲ್​ ಹೆಗಲಿಗೆ ಬೀಳುವ ಸಾಧ್ಯತೆ ಇದೆ. ವೆಸ್ಟ್​ ಇಂಡೀಸ್​ ವಿರುದ್ಧ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ನೀಡುವ ಕೆಲಸವನ್ನು ಇವರು ಮಾಡಿದ್ದರು. ಹೀಗಾಗಿ, ಶಿಖರ್​ ಧವನ್​ ಜಾಗದಲ್ಲಿ ರಾಹುಲ್​ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ವೆಸ್ಟ್​ ಇಂಡೀಸ್ ವಿರುದ್ಧ ಮೊದಲ ಏಕದಿನ; ಎಲ್ಲಿ?, ಎಷ್ಟು ಗಂಟೆಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ನು, ಬೌಲರ್​ ಭುವನೇಶ್ವರ್​ ಕುಮಾರ್​ ಬದಲಿಗೆ ಶಾರ್ದೂಲ್​ ಠಾಕೂರ್​ ಕಣಕ್ಕೆ ಇಳಿಯುತ್ತಿದ್ದಾರೆ. ಧವನ್​ ಬದಲು ಕನ್ನಡಿಗ ಮಯಾಂಕ್​ ಅಗರ್​ವಾಲ್​ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಆದರೆ, ಅವರಿಗೆ 11ರ ಪಟ್ಟಿಯಲ್ಲಿ ಸ್ಥಾನ ಸಿಗುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಿದೆ. ಒಂದೊಮ್ಮೆ ಅವರಿಗೆ ಇಂದು ಆಡಲು ಅವಕಾಶ ಸಿಕ್ಕರೆ ಏಕದಿನ ಪಂದ್ಯಕ್ಕೂ ಅವರು ಪದಾರ್ಪಣೆ ಮಾಡಿದಂತಾಗುತ್ತದೆ. ಇನ್ನು, ಶ್ರೇಯಸ್​ ಐಯ್ಯರ್​ ನಾಲ್ಕನೇ ಸ್ಥಾನದಲ್ಲಿ ಆಡುವ ಸಾಧ್ಯತೆ ಇದೆ.

ಸಂಭಾವ್ಯ ತಂಡ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪನಾಯಕ), ಕೆ ಎಲ್ ರಾಹುಲ್, ಶ್ರೇಯಸ್‌ ಐಯ್ಯರ್‌, ಕೇದರ್‌ ಜಾಧವ್‌, ರಿಷಭ್‌ ಪಂತ್‌, ರವೀಂದ್ರ ಜಡೇಜಾ, ಶಿವಂ ದುಬೆ, ಯಜುವೇಂದ್ರ ಚಹಲ್‌, ದೀಪಕ್‌ ಚಹರ್‌, ಮೊಹಮ್ಮದ್‌ ಶಮಿ.
First published:December 15, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ