ಟೀಮ್ ಇಂಡಿಯಾದ ಸ್ಪೋಟಕ ಆಟಗಾರ್ತಿ ಲೇಡಿ ಸೆಹ್ವಾಗ್ ಖ್ಯಾತಿಯ ಶಫಾಲಿ ವರ್ಮಾ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್ನಲ್ಲಿ ಎರಡು ಇನಿಂಗ್ಸ್ನಲ್ಲಿ ಅರ್ಧಶತಕ ಬಾರಿಸಿದ ಅತೀ ಕಿರಿಯ ಆಟಗಾರ್ತಿ ಎನಿಸಿಕೊಂಡಿದ್ದ ಶಫಾಲಿ ಈ ಬಾರಿ ರೆಕಾರ್ಡ್ ಬರೆದಿದ್ದು ಟಿ20 ಕ್ರಿಕೆಟ್ನಲ್ಲಿ ಎಂಬುದು ವಿಶೇಷ.
ಲಂಡನ್ನಲ್ಲಿ ನಡೆಯುತ್ತಿರುವ ಭಾರತ - ಇಂಗ್ಲೆಂಡ್ ನಡುವಣ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಶಫಾಲಿ-ಸ್ಮೃತಿ ಮಂಧಾನ ಜೋಡಿ ಟೀಮ್ ಇಂಡಿಯಾಗೆ ಉತ್ತಮ ಆರಂಭ ಒದಗಿಸಿದ್ದರು. ಅದರಲ್ಲೂ 4ನೇ ಓವರ್ನಲ್ಲಿ ಶಫಾಲಿ ಅಕ್ಷರಶಃ ಆರ್ಭಟಿಸಿದ್ದರು. ಇಂಗ್ಲೆಂಡ್ ಬೌಲರ್ ಕ್ಯಾಥರೀನ್ ಬ್ರಂಟ್ ಅವರ ಒಂದೇ ಓವರ್ನಲ್ಲಿ 20 ರನ್ ಚಚ್ಚಿದ್ದರು. ಅದು ಕೂಡ ಸತತ 5 ಬೌಂಡರಿಗಳ ಮೂಲಕ ಎಂಬುದು ವಿಶೇಷ.
2ನೇ ಎಸೆತದಿಂದ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ ಸತತ 5 ಬೌಂಡರಿ ಬಾರಿಸಿದ ಆಟಗಾರ್ತಿ ಎಂಬ ದಾಖಲೆ ಬರೆದರು. ಇನ್ನು ಈ ಪಂದ್ಯದಲ್ಲಿ 38 ಎಸೆತದಲ್ಲಿ ಶಫಾಲಿ ವರ್ಮಾ 48 ರನ್ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 148 ರನ್ ಕಲೆಹಾಕಿದೆ.
24ನೇ ಟಿ20 ಅಂತಾರಾಷ್ಟ್ರೀಯ ಪಂದ್ಯವಾಡುತ್ತಿರುವ 17 ವರ್ಷದ ಶೆಫಾಲಿ ವರ್ಮಾ ಈಗಾಗಲೇ ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಆಡಿದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ಅರ್ಧಶತಕಗಳನ್ನು ಬಾರಿಸಿದ ಮೊದಲ ಭಾರತೀಯ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ.
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.) ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ