ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಅತ್ತ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಚೆನ್ನೈನಲ್ಲಿ ಬೀಡು ಬಿಟ್ಟಿದೆ. ಶುಕ್ರವಾರ ನಡೆಯಲಿರುವ ಉದ್ಘಾಟನಾ ಪಂದ್ಯದ ಭರ್ಜರಿ ಸಿದ್ದತೆಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಇದೀಗ ಆಘಾತ ಎದುರಾಗಿದೆ.
ಹೌದು, ಕೊಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಳಿಕ ಇದೀಗ ಮುಂಬೈ ಇಂಡಿಯನ್ಸ್ಗೆ ಕೊರೋನಾ ಆಂತಕ ಎದುರಾಗಿದೆ. ತಂಡದ ಸ್ಕೌಟ್ ಮತ್ತು ವಿಕೆಟ್ಕೀಪಿಂಗ್ ಸಲಹೆಗಾರನಾಗಿರುವ ಕಿರಣ್ ಮೋರೆ ಅವರ ಕೊರೋನಾ ಟೆಸ್ಟ್ ಪಾಸಿಟಿವ್ ಆಗಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ವೈದ್ಯಕೀಯ ತಂಡವು ನಿಯಮಿತವಾಗಿ ಮೋರೆ ಅವರ ಅವರ ಆರೋಗ್ಯವನ್ನು ಮೇಲ್ವಿಚಾರಣೆ ನಡೆಸುತ್ತಿದೆ.
ಕಿರಣ್ ಮೋರೆ ಅವರಲ್ಲಿ ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಕೊರೋನಾ ಟೆಸ್ಟ್ನಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ. ಹೀಗಾಗಿ ಅವರನ್ನು ತಂಡದಿಂದ ಪ್ರತ್ಯೇಕವಾಗಿ ಇರಿಸಲಾಗಿದೆ. ಅಲ್ಲದೆ ಬಿಸಿಸಿಐ ಸೂಚಿಸಿರುವ ಎಲ್ಲಾ ಆರೋಗ್ಯ ಮಾರ್ಗಸೂಚಿಗಳನ್ನು ಮುಂಬೈ ಇಂಡಿಯನ್ಸ್ ಬದ್ಧವಾಗಿದೆ. ಇಂತಹ ಸಮಯದಲ್ಲಿ ಅಭಿಮಾನಿಗಳು ಹೆಚ್ಚಿನ ಸುರಕ್ಷಿತವಾಗಿರಬೇಕು ಎಂದು ಮುಂಬೈ ಫ್ರಾಂಚೈಸಿ ತಿಳಿಸಿದೆ.
ಇದಕ್ಕೂ ಮೊದಲು ಐಪಿಎಲ್ ಕೆಕೆಆರ್ ತಂಡದ ನಿತೀಶ್ ರಾಣಾ, ಡೆಲ್ಲಿ ಕ್ಯಾಪಿಟಲ್ಸ್ ಸ್ಪಿನ್ನರ್ ಅಕ್ಷರ್ ಪಟೇಲ್ ಹಾಗೂ ಆರ್ಸಿಬಿ ಆಟಗಾರ ದೇವದತ್ ಪಡಿಕ್ಕಲ್ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್ನ ಕೆಲ ಸದಸ್ಯರಿಗೆ ಹಾಗೂ ಮುಂಬೈ ವಾಂಖೆಡೆ ಸ್ಟೇಡಿಯಂನ 10 ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು.
ಇದೀಗ ಮುಂಬೈ ಇಂಡಿಯನ್ಸ್ ವಿಕೆಟ್ ಕೀಪಿಂಗ್ ಸಲಹೆಗಾರರಾಗಿರುವ ಮಾಜಿ ಟೀಮ್ ಇಂಡಿಯಾ ಆಟಗಾರ ಕಿರಣ್ ಮೋರೆ ಅವರಲ್ಲೂ ವೈರಸ್ ಕಾಣಿಸಿಕೊಂಡಿರುವುದು ಮುಂಬೈ ತಂಡದ ಆತಂಕಕ್ಕೆ ಕಾರಣವಾಗಿದೆ. ಸಾಧ್ಯತೆಯಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ