news18-kannada Updated:April 5, 2021, 6:30 PM IST
sanju samson
ಇಂಡಿಯನ್ ಪ್ರೀಮಿಯರ್ ಲೀಗ್ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಧರಿಸಲಿರುವ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಾಗಿದೆ. ಜೈಪುರದ ಸವಾಲ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ವರ್ಣರಂಚಿತ ಕಾರ್ಯಕ್ರಮದಲ್ಲಿ ನೂತನ ಜೆರ್ಸಿಯನ್ನು ಬಿಡುಗಡೆಗೊಳಿಲಾಯಿತು. ವಿಶೇಷ ಎಂದರೆ ರಾಜಸ್ಥಾನ್ ರಾಯಲ್ಸ್ ಲೈವ್ನಲ್ಲೇ ಜೆರ್ಸಿಯನ್ನು ಬಿಡುಗಡೆಗೊಳಿಸಿ, ಎಲ್ಲಾ ಅಭಿಮಾನಿಗಳು ನೇರ ಪ್ರಸಾರದ ಮೂಲಕ ವೀಕ್ಷಿಸುವ ವ್ಯವಸ್ಥೆ ಮಾಡಿದ್ದರು.
ಈ ಬಾರಿ ಕೂಡ ಪಿಂಕ್ ಜೆರ್ಸಿಯಲ್ಲೇ ರಾಜಸ್ಥಾನ್ ರಾಯಲ್ಸ್ ಕಣಕ್ಕಿಳಿಯಲಿದೆ. ಆದರೆ ಹೊಸ ಜೆರ್ಸಿಯ ವಿನ್ಯಾಸದಲ್ಲಿ ಸಣ್ಣ ಪುಟ್ಟ ಬದಲಾವಣೆ ಮಾಡಲಾಗಿದೆ. ಇದರೊಂದಿಗೆ ತಂಡದ ಪ್ರಮುಖ ಪ್ರಾಯೋಜಕತ್ವ ಕೂಡ ಬದಲಾಗಿದ್ದು, ಅದರಂತೆ ಈ ಬಾರಿ ದುಬೈ ಎಕ್ಸ್ಪೋ ಜಾಹೀರಾತು ಜೆರ್ಸಿಯ ಮುಂಭಾಗದಲ್ಲಿ ಕಾಣಿಸಿಕೊಳ್ಳಲಿದೆ.
ಇನ್ನು ಈ ಸಲ ತಂಡವನ್ನು ಯುವ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಮುನ್ನಡೆಸಲಿದ್ದು, ಅವರಿಗೆ ಹಿರಿಯ ಆಟಗಾರರಾದ ಬೆನ್ ಸ್ಟೋಕ್ಸ್ ಹಾಗೂ ಜೋಸ್ ಬಟ್ಲರ್ ಅವರ ಬೆಂಬಲ ಸಿಗಲಿದೆ. ಹಾಗೆಯೇ ಗಾಯದ ಕಾರಣ ಈ ಬಾರಿಯ ಟೂರ್ನಿಯಿಂದ ಆರ್ಆರ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿದಿದ್ದಾರೆ. ಇದಾಗ್ಯೂ ತಂಡದಲ್ಲಿ ಅತ್ಯುತ್ತಮ ಆಲ್ರೌಂಡರ್ ಆಟಗಾರರಿದ್ದು, ಹೀಗಾಗಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಆರ್ಆರ್ ಕೂಡ ಗುರುತಿಸಿಕೊಂಡಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ: ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನಮ್ ವೊಹ್ರಾ , ಕ್ರಿಸ್ ಮೋರಿಸ್, ಮುಸ್ತಾಫಿಜುರ್ ರಹೀಮ್, ಚೇತನ್ ಸಕರಿಯಾ, ಕೆ.ಸಿ.ಕರಿಯಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ಕುಲದೀಪ್ ಯಾದವ್, ಆಕಾಶ್ ಸಿಂಗ್
Published by:
zahir
First published:
April 5, 2021, 6:30 PM IST