ಕನ್ನಡಿಗರ ಹೆಮ್ಮೆ ವರನಟ ಡಾ.ರಾಜ್ಕುಮಾರ್ ಅವರ ಜನ್ಮದಿನದಂದು (Dr.Rajkumar Birthday) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಣ್ಣಾವ್ರ ಸ್ಮರಣೆ ಮಾಡಿದೆ. ಡಾ.ರಾಜ್ಕುಮಾರ್ ಅವರನ್ನು ಇಂದು ಕರ್ನಾಟಕ ಹಲವು ರಾಜಕಾರಣಿಗಳು, ಕಲಾವಿದರು ಸೇರಿದಂತೆ ಪ್ರಖ್ಯಾತ ವ್ಯಕ್ತಿಗಳು ಸ್ಮರಿಸಿದ್ದಾರೆ. ನಿನ್ನೆಯ ಪಂದ್ಯದಲ್ಲಿ (IPL 2022) ಸೋಲಿನಿಂದ ಸ್ವಲ್ಪ ಬೇಸರದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಸಹ ಕನ್ನಡಿಗರ ಕಣ್ಮಣಿ ವರನಟ ಡಾ. ರಾಜ್ಕುಮಾರ್ ಅವರನ್ನು ಸ್ಮರಿಸಿಕೊಂಡಿದೆ. ಬೆಂಗಳೂರು ತಂಡದಲ್ಲಿ ಕನ್ನಡಿಗ ಆಟಗಾರರ ಕೊರತೆ ಇದೆ ಎಂದು ಬಹು ಹಿಂದಿನಿಂದಲೂ ಕೇಳಿಬರುತ್ತಿತ್ತು. ಈ ಬೆನ್ನಲ್ಲೇ ಆರ್ಸಿಬಿ ವರನಟ ಡಾ. ರಾಜ್ಕುಮಾರ್ ಅವರನ್ನು ಸ್ಮರಿಸಿ ಟ್ವೀಟ್ ಮಾಡಿದೆ.
"ನಾವಾಡುವ ನುಡಿಯೇ ಕನ್ನಡ ನುಡಿ." ನಟ ಸಾರ್ವಭೌಮ, ಕನ್ನಡಿಗರ ಪ್ರೀತಿಯ ಅಣ್ಣಾವ್ರು, ಡಾ|| ರಾಜ್ ಕುಮಾರ್ ಅವರ 93ನೆ ಜನ್ಮಮಹೋತ್ಸವದ ನೆನಪಿನಲ್ಲಿ. ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಟ್ವೀಟ್ ಮಾಡಿ ವರನಟ ಡಾ.ರಾಜ್ಕುಮಾರ್ ಅವರನ್ನು ಸ್ಮರಿಸಿಕೊಂಡಿದೆ.
"ನಾವಾಡುವ ನುಡಿಯೇ ಕನ್ನಡ ನುಡಿ." ನಟ ಸಾರ್ವಭೌಮ, ಕನ್ನಡಿಗರ ಪ್ರೀತಿಯ ಅಣ್ಣಾವ್ರು, ಡಾ|| ರಾಜ್ ಕುಮಾರ್ ಅವರ 93ನೆ ಜನ್ಮಮಹೋತ್ಸವದ ನೆನಪಿನಲ್ಲಿ. ❤️
— Royal Challengers Bangalore (@RCBTweets) April 24, 2022
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವರನಟ ಡಾ.ರಾಜ್ಕುಮಾರ್ ಅವರ ಜನ್ಮದಿನಕ್ಕೆ ಶುಭಕೋರಿದ ಟ್ವೀಟ್ ಹಲವರ ಮೆಚ್ಚುಗೆಗೆ ಪ್ರಾಪ್ತವಾಗಿದೆ.
Goat🐐 of Cinema Industry ,Dr. Rajkumar the Only Actor in the Indian Film industry to recieve 9 State Awards for acting, 10 Film Fare Awards, 2 State Awards for Singing, First Kannada Actor to win “Dada Saheb Phalke Award”, for achievement in Film Indusry by GOI#DrRajkumarpic.twitter.com/c00o78Zk2j
ನಿನ್ನೆ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ನಿರ್ವಹಣೆ ತೋರಿದ ಆರ್ಸಿಬಿ ತಂಡ 15ನೇ ಆವೃತ್ತಿಯ ಐಪಿಎಲ್ ನಲ್ಲಿ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗಿತ್ತು. ಈಮೂಲಕ ಸನ್ರೈಸರ್ಸ್ ವಿರುದ್ಧ ದಾಖಲೆಯ ಸೋಲು ಅನುಭವಿಸಿತ್ತು.
ಮುಖ್ಯಮಂತ್ರಿ ಅವರಿಂದಲೂ ವಟನಟನ ಸ್ಮರಣೆ ಇದೇ ರೀತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ವರನಟ ಡಾ.ರಾಜ್ಕುಮಾರ್ ಅವರನ್ನು ಸ್ಮರಿಸಿಕೊಂಡಿದ್ದಾರೆ.
'ನಟಸಾರ್ವಭೌಮ, ಕನ್ನಡಿಗರ ಆರಾಧ್ಯ ದೈವ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜ್ ಕುಮಾರ್ ರವರ ಜನ್ಮದಿನದಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗಿ, ತೆರೆಯ ಮೇಲೆ ತಮ್ಮ ಅದ್ಭುತ ನಟನೆಯಿಂದ, ತೆರೆಯ ಹಿಂದೆ ತಮ್ಮ ಹೃದಯ ವೈಶಾಲ್ಯತೆಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ಡಾ.ರಾಜ್ ಅವರು ಈ ನಾಡು, ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮರಿಸಿದ್ದಾರೆ.
Published by:guruganesh bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ