IPL 2021: ಈ ಸಲ ಕಪ್ ಇವರದ್ದೇ...ಭವಿಷ್ಯ ನುಡಿದ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ

ಮೊದಲಾರ್ಧದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಈಗಾಗಲೇ 6 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಕೊಹ್ಲಿ ಪಡೆ ಬಲಿಷ್ಠವಾಗಿ ಹೊರಹೊಮ್ಮಿದೆ.

Ravi shastri

Ravi shastri

 • Share this:
  ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 14ನ ಮೊದಲಾರ್ಧ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಹತ್ತು ಅಂಕಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, 8 ಅಂಕಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ದ್ವಿತೀಯ ಸ್ಥಾನದಲ್ಲಿದೆ. ಉಭಯ ತಂಡಗಳು ಪ್ರಸ್ತುತ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಇದಕ್ಕೆ ಸಾಕ್ಷಿಯಾಗಿ ಉಭಯ ತಂಡಗಳ ಕಳೆದ ಮುಖಾಮುಖಿ ಎನ್ನಬಹುದು.

  ಏಪ್ರಿಲ್ 27 ರಂದು ಅಹಮದಾಬಾದ್​ನಲ್ಲಿ ನಡೆದ ಪಂದ್ಯದಲ್ಲಿ ಎರಡೂ ತಂಡಗಳು ಅತ್ಯದ್ಭುತ ಪ್ರದರ್ಶನವನ್ನು ನೀಡಿತ್ತು. ಇದಗ್ಯೂ ಕೊನೆಯ ಎಸೆತದಲ್ಲಿ ಆರ್​ಸಿಬಿ 1 ರನ್​ನಿಂದ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಈ ರೋಚಕ ಹಣಾಹಣಿಯ ಬಳಿಕ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

  ಪಂದ್ಯದ ಬಳಿಕ ವಿರಾಟ್ ಕೊಹ್ಲಿ- ರಿಷಭ್ ಪಂತ್ ಜೊತೆಗಿನ ಫೋಟೋವನ್ನು ಟ್ವೀಟ್ ಮಾಡಿರುವ ರವಿ ಶಾಸ್ತ್ರಿ, ಅದ್ಭುತ ಪಂದ್ಯ. ಹೊಸ ಚಾಂಪಿಯನ್ ಪಟ್ಟಕ್ಕಾಗಿ ಬೀಜಗಳನ್ನು ಬಿತ್ತಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಥವಾ ಡೆಲ್ಲಿ ಕ್ಯಾಪಿಟಲ್ಸ್​ ಐಪಿಎಲ್​ನ ನೂತನ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎಂದು ರವಿ ಶಾಸ್ತ್ರಿ ಪರೋಕ್ಷವಾಗಿ ತಿಳಿಸಿದ್ದಾರೆ.  ಮೊದಲಾರ್ಧದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಈಗಾಗಲೇ 6 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಕೊಹ್ಲಿ ಪಡೆ ಬಲಿಷ್ಠವಾಗಿ ಹೊರಹೊಮ್ಮಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಸಿಎಸ್​ಕೆ ಸೋಲುಣಿಸಿ ಐಪಿಎಲ್ ಅಭಿಯಾನವನ್ನು ಆರಂಭಿಸಿದ್ದು, ಈಗಾಗಲೇ 4 ಗೆಲುವು ದಾಖಲಿಸಿದೆ. ಇನ್ನು ಎರಡು ಸೋಲುಗಳು ಪಂದ್ಯದ ಅಂತಿಮ ಓವರ್​ನಲ್ಲಿ ದಕ್ಕಿರುವುದು ವಿಶೇಷ. ಹೀಗಾಗಿ ಈ ಬಾರಿ ಕೂಡ ಡೆಲ್ಲಿ ಕ್ಯಾಪಿಟಲ್ಸ್​ ಐಪಿಎಲ್​ ಚಾಂಪಿಯನ್ ಪಟ್ಟಕ್ಕಾಗಿ ಪ್ರಬಲ ಪೈಪೋಟಿ ನೀಡಲಿದೆ.
  Published by:zahir
  First published: