ಇತ್ತೀಚೆಗೆ ಮುಕ್ತಾಯಗೊಂಡ ರೋಡ್ ಸೇಫ್ಟಿ ಟೂರ್ನಿಯಲ್ಲಿ ಪಾಲ್ಗೊಂಡ ನಾಲ್ವರು ಆಟಗಾರರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮೊದಲಿಗೆ ಸಚಿನ್ ತೆಂಡೂಲ್ಕರ್ ಕೊರೋನಾ ಸೋಂಕಿನ ಲಕ್ಷಣಗಳಿರುವುದನ್ನು ಬಹಿರಂಗಪಡಿಸಿದ್ದರು. ಇದರ ಬೆನ್ನಲ್ಲೇ ಯುಸೂಫ್ ಪಠಾಣ್ ಕೂಡ ಕೊರೋನಾ ಸೋಂಕಿಗೆ ಒಳಗಾಗಿದ್ದು, ಕ್ವಾರಂಟೈನ್ನಲ್ಲಿ ಇರುವುದಾಗಿ ತಿಳಿಸಿದ್ದಾರೆ. ಆ ಬಳಿಕ ಸುಬ್ರಹ್ಮಣ್ಯ ಬದ್ರಿನಾಥ್ ಸಹ ತಮ್ಮ ಕೊರೋನಾ ಟೆಸ್ಟ್ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದರು. ಇದೀಗ ಇರ್ಫಾನ್ ಪಠಾಣ್ ಅವರ ಕೊವೀಡ್ ಟೆಸ್ಟ್ ರಿಪೋರ್ಟ್ ಕೂಡ ಪಾಸಿಟಿವ್ ಎಂದು ಬಂದಿದ್ದು, ಈ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಇರ್ಫಾನ್‍ಪಠಾಣ್, ನನಗೆ ಕೊರೋನಾ ಪಾಸಿಟಿವ್ ಬಂದಿರುವುದು ನಿಜ. ಆದರೆ ಸೋಂಕಿನ ಯಾವುದೇ ಗುಣ ಲಕ್ಷಣಗಳು ಕಂಡುಬಂದಿಲ್ಲ ಎಂದಿದ್ದಾರೆ. ಇದಾಗ್ಯೂ ಕಳೆದ 10 ದಿನಗಳ ಒಳಗೆ ನನ್ನೊಂದಿಗೆ ಸಂಪರ್ಕ ಬಂದಿರುವವರೆಲ್ಲಾ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಇರ್ಫಾನ್ ಪಠಾಣ್ ಕೋರಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ