ಭಾರತ vs ಶ್ರೀಲಂಕಾ ಸರಣಿ ಎಲ್ಲಿ?, ಯಾವಾಗ?, ಎಷ್ಟು ಗಂಟೆಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ!

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ರೋಹಿತ್ ಶರ್ಮಾ ಮತ್ತು ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಲಂಕಾ ವಿರುದ್ಧದ ಟಿ-20 ಸರಣಿಗೆ ವಿಶ್ರಾಂತಿ ನೀಡಲಾಗಿದೆ.

Vinay Bhat | news18-kannada
Updated:December 24, 2019, 7:51 AM IST
ಭಾರತ vs ಶ್ರೀಲಂಕಾ ಸರಣಿ ಎಲ್ಲಿ?, ಯಾವಾಗ?, ಎಷ್ಟು ಗಂಟೆಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ!
ಜಸ್‌ಪ್ರೀತ್‌ ಬುಮ್ರಾ (ಬಲಗೈ ವೇಗಿ)
  • Share this:
ಬೆಂಗಳೂರು (ಡಿ. 24): ಜನವರಿಯಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಶಿಖರ್ ಧವನ್ ಮತ್ತು ಜಸ್​ಪ್ರೀತ್ ಬುಮ್ರಾ ಇಬ್ಬರೂ ಕಂಬ್ಯಾಕ್ ಮಾಡಿದ್ದಾರೆ. ಎರಡೂ ಸರಣಿಗಳಿಗೆ ಇಬ್ಬರೂ ಆಯ್ಕೆಯಾಗಿದ್ಧಾರೆ.

ಧವನ್ ತಂಡಕ್ಕೆ ಮರಳುತ್ತಿದ್ದಂತೆಯೇ ಕರ್ನಾಟಕದ ಪ್ರತಿಭೆ ಮಯಂಕ್ ಅಗರ್ವಾಲ್ ಸ್ಥಾನವಂಚಿತರಾಗಿದ್ದಾರೆ. ಆದಾಗ್ಯೂ ಭಾರತದ ಎರಡೂ ತಂಡಗಳಲ್ಲಿ ಇಬ್ಬರು ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆಗೆ ಅವಕಾಶ ಸಿಕ್ಕಿದೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಕೂಡ ಎರಡೂ ಸರಣಿಗಳಿಗೆ ಆಯ್ಕೆಯಾಗಿದ್ದಾರೆ.

ವಿಶ್ವಖ್ಯಾತ ಆಟಗಾರನ ಮೊದಲ ಸೆಕ್ಸ್ ನೆನಪು; ಏಲಿಯನ್​ಗಳಿಂದ ಕಿಡ್ನಾಪ್ ಆಗಿದ್ದರಾ ಡೀಗೋ?

ಇನ್ನು, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದ ರೋಹಿತ್ ಶರ್ಮಾ ಮತ್ತು ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಲಂಕಾ ವಿರುದ್ಧದ ಟಿ-20 ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಪ್ರತಿಭಾನ್ವಿತ ಆಟಗಾರರಾದ ಸಂಜು ಸ್ಯಾಮ್ಸನ್ ಮತ್ತು ವಾಷಿಂಗ್ಟನ್ ಸುಂದರ್ ಅವರಿಗೆ ಲಂಕಾ ವಿರುದ್ಧದ ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿದೆ.

 2020 ಜನವರಿ ಮೊದಲ ವಾರದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಮೂರು ಪಂದ್ಯಗಳ ಟಿ-20 ಸರಣಿ ಆಡಲಿದೆ. ಜ. 5 ರಂದು ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಮೊದಲ ಟಿ-20 ಪಂದ್ಯ ಆಯೋಜಿಸಲಾಗಿದೆ. ಜ. 7 ರಂದು ಇಂದೋರ್​ನ ಹೊಲ್ಕಾರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯ ಹಾಗೂ ಜ. 10 ರಂದು ಪುಣೆ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಅಂತಿಮ ಟಿ-20 ಪಂದ್ಯ ನಡೆಯಲಿದೆ. ಎಲ್ಲ ಟಿ-20 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಿದೆ.

PAK vs SL: ದಶಕಗಳ ಬಳಿಕ ತನ್ನ ನೆಲದಲ್ಲಿ ಟೆಸ್ಟ್​ ಸರಣಿ ಗೆದ್ದ ಪಾಕಿಸ್ತಾನ!

 ಇದಾಗಿ ಮೂರು ದಿನ ಕಳೆದ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಜ. 14 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಏಕದಿನ ನಡೆಯಲಿದ್ದರೆ, ಜ. 17ಕ್ಕೆ ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ 2ನೇ ಏಕದಿನ ಹಾಗೂ ಅಂತಿಮ ಪಂದ್ಯ ಜ. 19 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಎಲ್ಲ ಏಕದಿನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.

ಶ್ರೀಲಂಕಾ ವಿರುದ್ಧದ ಟಿ-20 ಪಂದ್ಯಗಳಿಗೆ ಭಾರತ ತಂಡ:

ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ರಿಷಭ್ ಪಂತ್(ವಿಕೆಟ್ ಕೀಪರ್), ಶಿವಂ ದುಬೇ, ಯುಜವೇಂದ್ರ ಚಹಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ಜಸ್​ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್.

Virat Kohli: ಈ ವರ್ಷದ ಆ 30 ನಿಮಿಷ ಬಿಟ್ಟು ಉಳಿದ ಘಳಿಗೆ ಅದ್ಭುತವಾಗಿತ್ತು; ವಿರಾಟ್ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳಿಗೆ ಭಾರತ ತಂಡ:

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದಾರ್ ಜಾಧವ್, ರಿಷಭ್ ಪಂತ್(ವಿಕೆಟ್ ಕೀಪರ್), ಶಿವಮ್ ದುಬೇ, ರವೀಂದ್ರ ಜಡೇಜಾ, ಯುಜವೇಂದ್ರ ಚಹಲ್, ಕುಲದೀಪ್ ಯಾದವ್, ನವದೀಪ್ ಸೈನಿ, ಜಸ್​ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ.

Published by: Vinay Bhat
First published: December 24, 2019, 7:51 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading