ವಿಜಯ್ ಹಜಾರೆ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ: ಹೊಸ ನಾಯಕನ ಆಯ್ಕೆ..!

Ravikumar Samarth

Ravikumar Samarth

ಮೊಣಕೈ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮನೀಶ್ ಪಾಂಡೆ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಕೂಡ ತಂಡದಿಂದ ಹೊರಗುಳಿದಿದ್ದಾರೆ.

  • Share this:

    2021ರ ವಿಜಯ್ ಹಜಾರೆ ಏಕದಿನ ಟೂರ್ನಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿ ತಂಡವನ್ನು ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ ಮುನ್ನಡೆಸಲಿದ್ದಾರೆ. ಒಟ್ಟು 22 ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಸೈಯದ್ ಮುಷ್ತಾಕ್ ಅಲಿ ಟೂರ್ನಿಯನ್ನು ಪ್ರತಿನಿಧಿಸಿದ್ದ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳಲಾಗಿದೆ. ವಿಶೇಷವೆಂದರೆ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ತಂಡದ ಉಪನಾಯಕನಾಗಿದ್ದ ಅನುಭವಿ ಆಲ್‌ರೌಂಡರ್ ಪವನ್ ದೇಶಪಾಂಡೆ ಅವರನ್ನು ಕೈಬಿಡಲಾಗಿದೆ.


    ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಕರುಣ್ ನಾಯರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದು, ವೈಶಾಖ್ ವಿಜಯಕುಮಾರ್ ಹಾಗೂ ನಿಕಿನ್ ಜೋಸ್​ ಅವರಿಗೂ ತಂಡದಲ್ಲಿ ಸ್ಥಾನ ನೀಡಲಾಗಿದೆ.


    ಇನ್ನು ಮೊಣಕೈ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮನೀಶ್ ಪಾಂಡೆ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಹಾಗೆಯೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಕೂಡ ತಂಡದಿಂದ ಹೊರಗುಳಿಯಲಿದ್ದಾರೆ.


    2014 ರ ವಿಜಯ್ ಹಜಾರೆ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ಸಮರ್ಥ್, ಕಳೆದ ರಣಜಿ ಸೀಸನ್​ನಲ್ಲಿ 32 ಪಂದ್ಯಗಳಿಂದ 1162 ರನ್ ಗಳಿಸಿ ಮಿಂಚಿದ್ದರು. ಇದೀಗ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ 50 ಓವರ್​ಗಳ ಟೂರ್ನಿಯಲ್ಲಿ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.


    ಕರ್ನಾಟಕ ತಂಡ ಹೀಗಿದೆ:
    ರವಿಕುಮಾರ್ ಸಮರ್ಥ್ (ನಾಯಕ), ಕರುಣ್ ನಾಯರ್, ದೇವದತ್ ಪಡಿಕ್ಕಲ್, ರೋಹಮ್ ಕದಂ, ದೇಗಾ ನಿಸ್ಚಲ್, ಕೆ.ಎಲ್.ಶ್ರೀಜಿತ್, ಶರತ್ ಬಿ.ಆರ್ (ವಿಕೆಟ್ ಕೀಪರ್), ರಕ್ಷಿತ್ ಎಸ್ (ವಿಕೆಟ್ ಕೀಪರ್), ಅನಿರುದ್ಧ ಜೋಶಿ, ಕೆ.ವಿ. ಸಿದ್ಧಾರ್ಥ್, ನಿಕಿನ್ ಜೋಸ್, ಶ್ರೇಯಸ್ ಗೋಪಾಲ್, ಜಗದೀಶ್ ಸುಜಿತ್ , ಆದಿತ್ಯ ಸೋಮಣ್ಣ, ಶುಭಾಂಗ್ ಹೆಗ್ಡೆ, ಅಭಿಮನ್ಯು ಮಿಥುನ್, ಪ್ರಸಿದ್ಧ್ ಕೃಷ್ಣ, ರೋನಿತ್ ಮೋರ್, ವೈಶಾಖ್ ವಿಜಯಕುಮಾರ್, ಮನೋಜ್ ಭಂಡಗೆ, ಎಂಬಿ ದರ್ಶನ್.

    Published by:zahir
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು