Virat kohli: ಸಚಿನ್ ತೆಂಡೂಲ್ಕರ್ ಹಾದಿಯಲ್ಲಿ ವಿರಾಟ್ ಕೊಹ್ಲಿ..!

ಈ ದಾಖಲೆಯಲ್ಲಿ ಸಚಿನ್ ತೆಂಡೂಲ್ಕರ್ ಅವರೇ ಮುಂಚೂಣಿಯಲ್ಲಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿಜೀವನದಲ್ಲಿ ಸರಾಸರಿ 48 ಸರಾಸರಿಯಲ್ಲಿ 664 ಪಂದ್ಯಗಳಲ್ಲಿ 34357 ಅಂತರರಾಷ್ಟ್ರೀಯ ರನ್ ಗಳಿಸಿದ್ದಾರೆ. 

Virat kohli - Sachin

Virat kohli - Sachin

 • Share this:
  ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಪ್ರಾರಂಭವಾಗಿದೆ. ಪುಣೆಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ತಮ್ಮ 61 ನೇ ಏಕದಿನ ಅರ್ಧಶತಕ ಪೂರ್ಣಗೊಳಿಸಿದರು. ಇದರೊಂದಿಗೆ ವಿಶೇಷ ದಾಖಲೆಯನ್ನು ಕೊಹ್ಲಿ ಬರೆದರು.

  ರೋಹಿತ್ ಶರ್ಮಾ ಔಟಾದ ಬಳಿಕ ಕ್ರೀಸ್​ಗಿಳಿದ ವಿರಾಟ್ ಕೊಹ್ಲಿ 60 ಎಸೆತಗಳಲ್ಲಿ 56 ರನ್ ಗಳಿಸಿದರು. ಅಲ್ಲದೆ ಶಿಖರ್ ಧವನ್ ಜೊತೆಗೂಡಿ ಎರಡನೇ ವಿಕೆಟ್‌ಗೆ 105 ರನ್‌ಗಳ ಜೊತೆಯಾಟವಾಡಿದರು. ಈ ಭರ್ಜರಿ ಇನಿಂಗ್ಸ್​ ಮೂಲಕ ತವರಿನಲ್ಲಿ ಕೊಹ್ಲಿ 10 ಸಾವಿರ ಅಂತಾರಾಷ್ಟ್ರೀಯ ರನ್ ಪೂರೈಸಿದರು. ಅಲ್ಲದೆ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

  ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತವರಿನಲ್ಲಿ 10 ಸಾವಿರ ರನ್ ಪೂರೈಸಿದ್ದರು. ಇದೀಗ ಕೊಹ್ಲಿ 176 ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಇದುವರೆಗೆ 432 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 55 ಸರಾಸರಿಯಲ್ಲಿ 22689 ರನ್ ಗಳಿಸಿದ್ದಾರೆ. ಈ ವಿಷಯದಲ್ಲಿ ಸಚಿನ್ ತೆಂಡೂಲ್ಕರ್ ಅವರೇ ಮುಂಚೂಣಿಯಲ್ಲಿದ್ದಾರೆ. ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿಜೀವನದಲ್ಲಿ ಸರಾಸರಿ 48 ಸರಾಸರಿಯಲ್ಲಿ 664 ಪಂದ್ಯಗಳಲ್ಲಿ 34357 ಅಂತರರಾಷ್ಟ್ರೀಯ ರನ್ ಗಳಿಸಿದ್ದಾರೆ.
  Published by:zahir
  First published: