ಆಸ್ಟ್ರೇಲಿಯಾ ವಿರುದ್ದದ ಐತಿಹಾಸಿಕ ಟೆಸ್ಟ್ ಸರಣಿ ಜಯದ ಬಳಿಕ ಟೀಮ್ ಇಂಡಿಯಾದ ನಾಯಕತ್ವದ ಚರ್ಚೆಗಳು ಶುರುವಾಗಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಟೆಸ್ಟ್‌ನಲ್ಲಿ ಮಾತ್ರ ತಂಡವನ್ನು ಮುನ್ನಡೆಸಿದ್ದರು. ಆ ಪಂದ್ಯದಲ್ಲಿ ಭಾರತ ತಂಡ ಹೀನಾಯವಾಗಿ ಸೋಲನುಭವಿಸಿತ್ತು. ಆ ಬಳಿಕ ಪಿತೃತ್ವ ರಜೆ ಪಡೆದು ಕೊಹ್ಲಿ ಭಾರತಕ್ಕೆ ವಾಪಸ್ಸಾಗಿದ್ದರು. ಇದೇ ವೇಳೆ ಹಂಗಾಮಿ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಅನಾನುಭವಿ ಪಡೆಯೊಂದಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 2-1 ಅಂತರದಿಂದ ಬಗ್ಗು ಬಡಿದಿದ್ದರು.
ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ವಿರಾಟ್ ಕೊಹ್ಲಿ ನಾಯಕರಾಗಿ ವಾಪಾಸ್ಸಾಗಲಿದ್ದಾರೆ. ಅತ್ತ ಆಸ್ಟ್ರೇಲಿಯಾ ನೆಲದಲ್ಲಿ ಅದ್ಭುತವಾಗಿ ಅಜಿಂಕ್ಯ ರಹಾನೆ ಮುನ್ನಡೆಸಿರುವುದೇ ಈ ಸರಣಿಯುದ್ದಕ್ಕೂ ಕೊಹ್ಲಿ ನಾಯಕತ್ವವನ್ನು ಚರ್ಚೆಗೀಡು ಮಾಡಲಿದೆ ಎಂದು ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಮಹತ್ವ ಪಡೆದುಕೊಂಡಿದೆ. ಹೀಗಾಗಿಯೇ ಸರಣಿಯು ನಾನಾ ಚರ್ಚಗೆ ಕಾರಣವಾಗಲಿದೆ. ಅದರಲ್ಲೂ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿರುವುದರಿಂದ ಅವರ ನಾಯಕತ್ವ ಸರಣಿಯುದಕ್ಕೂ ಚರ್ಚೆಗೀಡಾಗಲಿದೆ. ಇದೊಂದು ಥರ ಕುತೂಹಲಕಾರಿ ಸ್ಟೋರಿ ಅನಿಸಲಿದೆ ಎಂದು ಪೀಟರ್ಸನ್ ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ