6ನೇ ಟೆಸ್ಟ್​ನಲ್ಲೇ 3 ಬಾರಿ 5 ವಿಕೆಟ್ ಸಾಧನೆ ಮಾಡಿದ ಯುವ ವೇಗಿ..!

New Zealand vs Pakistan: ಸದ್ಯ ಟೆಸ್ಟ್ ರ್ಯಾಂಕಿಂಗ್​ನಲ್ಲಿ ನ್ಯೂಜಿಲೆಂಡ್ 2ನೇ ಸ್ಥಾನದಲ್ಲಿದ್ದು, ಪಾಕ್ ವಿರುದ್ಧ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.

Kyle Jamieson

Kyle Jamieson

 • Share this:
  ಕ್ರಿಸ್ಟ್​ ಚರ್ಚ್​​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ 2ನೇ ಟೆಸ್ಟ್​ನಲ್ಲೂ ನ್ಯೂಜಿಲೆಂಡ್ ತಂಡ ಮೇಲುಗೈ ಸಾಧಿಸಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ನ್ಯೂಜಿಲೆಂಡ್​ ಪಾಕ್ ತಂಡವನ್ನು ಮೊದಲ ದಿನವೇ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಆರಂಭಿಕ ಶಾನ್ ಮಸೂದ್​ರನ್ನು ಶೂನ್ಯಕ್ಕೆ ಪೆವಿಲಿಯನ್ ಕಳುಹಿಸುವಲ್ಲಿ ಯಶಸ್ವಿಯಾದ ಟಿಮ್ ಸೌಥಿ ಕಿವೀಸ್ ಪಡೆಗೆ ಮೊದಲ ಯಶಸ್ಸು ತಂದುಕೊಟ್ಟರು.

  ಇದರ ಬಳಿಕ ಅಜರ್ ಅಲಿ (93) ಹಾಗೂ ನಾಯಕ ಮೊಹಮ್ಮದ್ ರಿಜ್ವಾನ್ (61) ಗಳಿಸಿದರೂ ಉಳಿದ ಬ್ಯಾಟ್ಸ್​ಮನ್​ಗಳು ವೇಗಿ ಕೈಲ್ ಜೇಮಿಸನ್ (Kyle Jamieson) ಮಾರಕ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲೇ ಇಲ್ಲ. ಪರಿಣಾಮ ಮೊದಲ ದಿನದಾಟಕ್ಕೂ ಮುನ್ನವೇ 297 ರನ್​ಗಳಿಗೆ ಸರ್ವಪತನ ಕಂಡಿತು. ನ್ಯೂಜಿಲೆಂಡ್ ಪರ ಕೈಲ್ ಜೇಮಿಸನ್ 69 ರನ್​ ನೀಡಿ 5 ವಿಕೆಟ್ ಉರುಳಿಸಿ ಮಿಂಚಿದರು.

  ಕಳೆದ ವರ್ಷ ಫೆಬ್ರವರಿಯಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ್ದ ಬಲಗೈ ವೇಗಿ 6ನೇ ಟೆಸ್ಟ್ ಪಂದ್ಯವನ್ನಾಡುತ್ತಿದ್ದು, ಇದರಲ್ಲಿ ಮೂರು ಬಾರಿ 5 ವಿಕೆಟ್ ಕಬಳಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಹಾಗೆಯೇ ಪಾಕ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿಯೂ ಐದು ವಿಕೆಟ್​ಗಳ ಗುಚ್ಛ ಪಡೆದಿದ್ದ ಕೈಲ್ ಜೇಮಿಸನ್ ಇದೀಗ 2ನೇ ಟೆಸ್ಟ್​ ಪಂದ್ಯದಲ್ಲೂ ತಮ್ಮ ಕೈ ಚಳಕ ತೋರಿಸಿದ್ದಾರೆ.  ನ್ಯೂಜಿಲೆಂಡ್ ಪರ 6 ಟೆಸ್ಟ್ ಪಂದ್ಯಗಳಿಂದ 30 ವಿಕೆಟ್ ಪಡೆದಿರುವ ಕೈಲ್ ಜೇಮಿಸನ್ ಬೌನ್ಸರ್ ಹಾಗೂ ವೇಗದ ಮೂಲಕ ಬ್ಯಾಟ್ಸ್​ಮನ್​ಗಳನ್ನು ಇಕ್ಕಟಿಗೆ ಸಿಲುಕಿಸುವಲ್ಲಿ ನಿಪುಣರು. ಸದ್ಯ ಟೆಸ್ಟ್ ರ್ಯಾಂಕಿಂಗ್​ನಲ್ಲಿ ನ್ಯೂಜಿಲೆಂಡ್ 2ನೇ ಸ್ಥಾನದಲ್ಲಿದ್ದು, ಪಾಕ್ ವಿರುದ್ಧ ಗೆಲುವು ಸಾಧಿಸಿದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.
  Published by:zahir
  First published: