news18-kannada Updated:December 17, 2020, 9:53 PM IST
LPL
ಶ್ರೀಲಂಕಾದಲ್ಲಿ ನಡೆದ ಚೊಚ್ಚಲ ಲಂಕಾ ಪ್ರೀಮಿಯರ್ ಲೀಗ್ನಲ್ಲಿ ಜಾಫ್ನಾ ಸ್ಟಾಲಿಯನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಗಾಲೆ ಗ್ಲಾಡಿಯೇಟರ್ಸ್ ತಂಡವನ್ನು 56 ರನ್ಗಳಿಂದ ಮಣಿಸುವ ಮೂಲಕ ಚೊಚ್ಚಲ ಟ್ರೋಫಿಯನ್ನು ಜಾಫ್ನಾ ಮುಡಿಗೇರಿಸಿಕೊಂಡಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಜಾಫ್ನಾ ಸ್ಟಾಲಿಯನ್ಸ್ ತಂಡದ ನಾಯಕ ತಿಸರಾ ಪೆರೆರಾ ಬ್ಯಾಟಿಂಗ್ ಆಯ್ದುಕೊಂಡರು.
ಆರಂಭಿಕರಾಗಿ ಕಣಕ್ಕಿಳಿದ ಅವಿಷ್ಕಾ ಫರ್ನಾಂಡೊ ಹಾಗೂ ಜಾನ್ಸನ್ ಚಾರ್ಲ್ಸ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್ 44 ರನ್ಗಳ ಜೊತೆಯಾಟವಾಡಿದ ಈ ಜೋಡಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆ ಬಳಿಕ ಬಂದ ಶೊಯೇಬ್ ಮಲಿನ್ 46 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಅಂತಿಮ ಓವರ್ಗಳಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದ ತಿಸರಾ ಪೆರೆರಾ ಕೇವಲ 14 ಎಸೆತಗಳಲ್ಲಿ 39 ರನ್ ಬಾರಿಸುವ ಮೂಲಕ ನಿಗದಿತ 20 ಓವರ್ಗಳಲ್ಲಿ ತಂಡದ ಮೊತ್ತವನ್ನು 6 ವಿಕೆಟ್ ನಷ್ಟಕ್ಕೆ 188 ತಂದು ನಿಲ್ಲಿಸಿದರು.
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಗಾಲೆ ಗ್ಲಾಡಿಯೇಟರ್ಸ್ಗೆ ಆರಂಭಿಕ ಆಘಾತ ನೀಡುವಲ್ಲಿ ಜಾಫ್ನಾ ಬೌಲರುಗಳು ಯಶಸ್ವಿಯಾದರು. ಪರಿಣಾಮ ತಂಡದ ಮೊತ್ತ 7 ಆಗುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿತು. 17 ಎಸೆತಗಳಲ್ಲಿ 36 ರನ್ ಸಿಡಿಸುವ ಮೂಲಕ ಆಜಂ ಖಾನ್ ತಂಡದ ಮೊತ್ತವನ್ನು ಹೆಚ್ಚಿಸುವ ಪ್ರಯತ್ನ ಮಾಡಿದರು. ಇದಾಗ್ಯೂ ಉಳಿದ ಬ್ಯಾಟ್ಸ್ಮನ್ಗಳಿಂದ ನಿರೀಕ್ಷಿತ ಆಟ ಮೂಡಿ ಬಂದಿರಲಿಲ್ಲ. ಅಂತಿಮವಾಗಿ 9 ವಿಕೆಟ್ಗಳನ್ನು ಕಳೆದುಕೊಂಡ 135 ರನ್ ಗಳಿಸಲಷ್ಟೇ ಶಕ್ತರಾದರು. ಇನ್ನು ಜಾಫ್ನಾ ಪರ ಆಲ್ರೌಂಡರ್ ಪ್ರದರ್ಶನ ನೀಡಿದ ಶೊಯೇಬ್ ಮಲಿಕ್ (46 ರನ್ ಮತ್ತು 2 ವಿಕೆಟ್) ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
Published by:
zahir
First published:
December 17, 2020, 9:24 PM IST