ಬೆಂಗಳೂರು (ಜು. 27): ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಬೌಲರ್, ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಾಲಿಂಗ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಮಾಲಿಂಗ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವು ತಮ್ಮ ವಿದಾಯದ ಏಕದಿನ ಪಂದ್ಯ ಎಂದು ಘೋಷಿಸಿದ್ದರು. ಈ ಹಿನ್ನಲೆಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಲಂಕಾ ಗೆಲುವು ಸಾಧಿಸಿದ ನಂತರ ತಮ್ಮ15 ವರ್ಷಗಳ ಏಕದಿನ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದರು.
ಈ ಮೂಲಕ ಶ್ರೀಲಂಕಾ ಆಟಗಾರರು ಮಾಲಿಂಗಾಗೆ ಗೆಲುವಿನ ವಿದಾಯ ಹೇಳಿದ್ದಾರೆ. ಪಂದ್ಯ ಮುಗಿದ ಬಳಿಕ ಮಾತನಾಡಿದ ಮಾಲಿಂಗ 'ನನ್ನ ಸಮಯ ಮುಗಿದಿದೆ, ನಾನು ಏಕದಿನ ಕ್ರಿಕೆಟ್ನಿಂದ ಹಿಂದೆ ಸರಿಯುತ್ತಿದ್ದೇನೆ' ಎಂದಿದ್ದಾರೆ.
ಶೀಘ್ರದಲ್ಲೇ ಟಿ-20 ಕ್ರಿಕೆಟ್ಗೆ ವಿರಾಟ್ ಕೊಹ್ಲಿ ನಿವೃತ್ತಿ; ಇಲ್ಲಿವೆ ಮೂರು ಕಾರಣಗಳು
'ಕಳೆದ 15 ವರ್ಷಗಳಿಂದ ಏಕದಿನ ಕ್ರಿಕೆಟ್ನಲ್ಲಿ ಶ್ರೀಲಂಕಾ ತಂಡವನ್ನು ಪ್ರತಿನಿಧಿಸಿದ್ದು, ನಿವೃತ್ತಿ ಪಡೆಯಲು ಇದು ಸರಿಯಾದ ಸಮಯ. ನನ್ನ ವಿದಾಯದ ಪಂದ್ಯದಲ್ಲಿ ಗೆಲುವು ನನಗೆ ಬಹಳ ಮಹತ್ವದ್ದಾಗಿತ್ತು. ನನ್ನ ವೃತ್ತಿ ಜೀವನದುದ್ದಕ್ಕೂ ತಂಡಕ್ಕೆ ಉತ್ತಮ ಸೇವೆ ನೀಡಲು ಪ್ರಯತ್ನಿಸಿದ್ದೇನೆ. ಶ್ರೀಲಂಕಾ ತಂಡ ಯುವ ಬೌಲರ್ಗಳಿಂದ ಕೂಡಿದೆ. ಮುಂದಿನ ದಿನಗಳಲ್ಲಿ ಎಲ್ಲರೂ ಉತ್ತಮ ಪ್ರದರ್ಶನ ನೀಡಲಿ ಎಂದು ಆಶಿಸುತ್ತೇನೆ' ಎಂದರು.
ಧೋನಿಗೆ ರಕ್ಷಣೆಯ ಅಗತ್ಯವಿಲ್ಲ, ಅವರೇ ಜನತೆಗೆ ರಕ್ಷಣೆ ನೀಡಲಿದ್ದಾರೆ: ಸೇನಾ ಮುಖ್ಯಸ್ಥ
ಮಾಲಿಂಗ ಜುಲೈ 17 2004ರಲ್ಲಿ ಯುಎಇ ವಿರುದ್ಧ ಪಂದ್ಯವನ್ನು ಆಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಮಾಲಿಂಗ ಏಕದಿನ ಕ್ರಿಕೆಟ್ನಲ್ಲಿ ಶ್ರೀಲಂಕಾ ಪರ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಒಟ್ಟು 219 ಇನ್ನಿಂಗ್ಸ್ಗಳಲ್ಲಿ 338 ವಿಕೆಟ್ಗಳನ್ನು ಪಡೆದಿದ್ದಾರೆ. 38 ರನ್ ನೀಡಿ 6 ವಿಕೆಟ್ ಪಡೆದಿರುವುದು ಅವರ ಶ್ರೇಷ್ಠ ಸಾಧನೆಯಾಗಿದೆ. ಅಲ್ಲದೆ ತಮ್ಮ 15 ವರ್ಷಗಳ ಕ್ರಿಕೆಟ್ ಜೀವನದಲ್ಲಿ 8 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
35 ವರ್ಷ ಪ್ರಾಯದ ಮಾಲಿಂಗ 2011 ರಲ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದರು ಸದ್ಯ ಏಕದಿನಕ್ಕೂ ವಿದಾಯ ಘೋಷಿಸಿರುವ ಮಾಲಿಂಗ ಟಿ-20 ಕ್ರಿಕೆಟ್ನಲ್ಲಿ ಮುಂದುವರೆಯಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ