news18-kannada Updated:December 15, 2020, 9:01 PM IST
virat kohli
ಪ್ರತಿಷ್ಠಿತ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಡಿಸೆಂಬರ್ 17 ರಂದು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಚಾಲನೆ ದೊರೆಯಲಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಮಾತ್ರ ವಿರಾಟ್ ಕೊಹ್ಲಿ ಲಭ್ಯರಿದ್ದು, ಉಳಿದ ಮೂರು ಪಂದ್ಯಗಳಿಂದ ಪಿತೃತ್ವ ರಜೆಯ ಹಿನ್ನೆಲೆಯಲ್ಲಿ ಹೊರಗುಳಿದಿದ್ದಾರೆ. ಇತ್ತ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರರು ವಿರಾಟ್ ಕೊಹ್ಲಿಯನ್ನು ಕೆಣಕಬೇಡಿ ಎಂದು ಆಸೀಸ್ ಟಿ20 ತಂಡದ ನಾಯಕ ಆರೋನ್ ಫಿಂಚ್ ಎಚ್ಚರಿಸಿದ್ದಾರೆ.
ಆಸ್ಟ್ರೇಲಿಯಾ ಆಟಗಾರರು ವಿರಾಟ್ ಕೊಹ್ಲಿಯೊಂದಿಗೆ ಸಮತೋಲನ ಕಾಪಾಡಿಕೊಳ್ಳಬೇಕು. ಒಂದು ವೇಳೆ ಆತನನ್ನು ಕೆಣಕಿದ್ರೆ, ಎದುರಾಳಿ ತಂಡ ಯಾವುದೆಂದೂ ಯೋಚಿಸದೇ ನಿರ್ದಯವಾಗಿ ದಂಡಿಸಲಿದ್ದಾರೆ ಎಂದು ಆರ್ಸಿಬಿ ತಂಡದ ಆರಂಭಿಕ ಆಟಗಾರರಾಗಿರುವ ಫಿಂಚ್ ಹೇಳಿದ್ದಾರೆ. ಕಳೆದ ವರ್ಷ ನಡೆದ ಆಸ್ಟ್ರೇಲಿಯಾ-ಭಾರತ ನಡುವಣ ಟೆಸ್ಟ್ ಪಂದ್ಯವು ಮಾತಿನ ಚಕಮಕಿಗೆ ಸಾಕ್ಷಿಯಾಗಿತ್ತು. ಅಲ್ಲದೆ ಆ ಸರಣಿಯ್ನು ಭಾರತ 2-1 ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿತ್ತು.
ಹೀಗಾಗಿ ಈ ಬಾರಿ ಆಸ್ಟ್ರೇಲಿಯಾ ಆಟಗಾರರು ಕೊಹ್ಲಿಯನ್ನು ಕೆಣಕಲು ಹೋಗಬೇಡಿ. ಪ್ರಚೋದನೆಗೆ ಒಳಪಡಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಫಿಂಚ್ ಎಚ್ಚರಿಸಿದ್ದಾರೆ. ಇನ್ನು ಆಸ್ಟ್ರೇಲಿಯಾ ಏಕದಿನ ಹಾಗೂ ಟಿ20 ತಂಡದ ನಾಯಕರಾಗಿರುವ ಆರೋನ್ ಫಿಂಚ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹಾಗೆಯೇ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಅಡಿಯಲ್ಲಿ ಆಡಿದ ಅನುಭವ ಫಿಂಚ್ಗಿದೆ. ಹೀಗಾಗಿ ಸಹ ಆಟಗಾರರಿಗೆ ಟೀಮ್ ಇಂಡಿಯಾ ನಾಯಕನ ಬಗ್ಗೆ ಎಚ್ಚರಿಕೆ ರವಾನಿಸಿದ್ದಾರೆ.
ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಡಿಸೆಂಬರ್ 17 ರಿಂದ ಆರಂಭವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಲು ಬೆಳಕಿನಲ್ಲಿ ನಡೆಯಲಿರುವುದು ವಿಶೇಷ. ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ತವರಿಗೆ ಮರಳಲಿದ್ದಾರೆ. ಕೊಹ್ಲಿ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದು, ಹೀಗಾಗಿ ಟೀಮ್ ಇಂಡಿಯಾ ನಾಯಕ ಭಾರತಕ್ಕೆ ವಾಪಾಸ್ಸಾಗುತ್ತಿದ್ದಾರೆ.
ಅಚ್ಚರಿಯ ಆಯ್ಕೆ: ಆಕಾಶ್ ಚೋಪ್ರಾ ಹೆಸರಿಸಿದ ದಶಕದ ಟಿ20 ತಂಡದಲ್ಲಿ ಯಾರಿಗೆಲ್ಲಾ ಸ್ಥಾನ?
ಇನ್ನೂ ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್ ಬ್ರಿಸ್ಬೇನ್ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ. ಎರಡು ಹಾಗೂ ಮೂರನೇ ಟೆಸ್ಟ್ ಮುಂಜಾನೆ 5 ಗಂಟೆಗೆ ಶುರುವಾದರೆ, ಅಂತಿಮ ಟೆಸ್ಟ್ 5:30ಕ್ಕೆ ಆರಂಭವಾಗಲಿದೆ. ಕೊಹ್ಲಿಯ ಅನುಪಸ್ಥಿಯಲ್ಲಿ ತಂಡವನ್ನು ಉಪನಾಯಕ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ.
Published by:
zahir
First published:
December 15, 2020, 9:01 PM IST