HOME » NEWS » Sports » CRICKET PRASIDH KRISHNA BREAKS 24 YR OLD RECORD TO JOIN LONG LIST OF PACERS SHINING ON DEBUT ZP

Prasidh Krishna: ಚೊಚ್ಚಲ ಪಂದ್ಯದಲ್ಲೇ ದಾಖಲೆ ಬರೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ..!

ಇನ್ನು ಟೀಮ್ ಇಂಡಿಯಾ ಪರ ಪದಾರ್ಪಣೆ ಪಂದ್ಯದಲ್ಲೇ 16 ಬೌಲರ್ಸ್​ಗಳು 3ವಿಕೆಟ್​ ಪಡೆದುಕೊಂಡಿದ್ದಾರೆ. ಇದೇ ಮೊದಲ ಬಾರಿ ಪ್ರಸಿದ್ಧ್ ಕೃಷ್ಣ 4 ವಿಕೆಟ್ ಉರುಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

news18-kannada
Updated:March 24, 2021, 5:25 PM IST
Prasidh Krishna: ಚೊಚ್ಚಲ ಪಂದ್ಯದಲ್ಲೇ ದಾಖಲೆ ಬರೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ..!
prasidh krishna
  • Share this:
ಭಾರತ ಹಾಗೂ ಪ್ರವಾಸಿ ಇಂಗ್ಲೆಂಡ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 66 ರನ್​ಗಳ ಭರ್ಜರಿ ಜಯ ಸಾಧಿಸಿತು. ಭಾರತ ನೀಡಿದ 318 ರನ್​ಗಳ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ ಭಾರತೀಯ ಬೌಲರುಗಳ ಪರಾಕ್ರಮದ ಮುಂದೆ 251 ರನ್​ಗಳಿಗೆ ಸರ್ವಪತನ ಕಂಡಿತು. ಅದರಲ್ಲೂ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಆಂಗ್ಲ ದಾಂಡಿಗರನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇಂಗ್ಲೆಂಡ್​ ತಂಡದ ಪ್ರಮುಖ ನಾಲ್ಕು ವಿಕೆಟ್ ಪಡೆಯುವುದರೊಂದಿಗೆ ಪ್ರಸಿದ್ಧ್ ಕೃಷ್ಣ ಹೊಸ ದಾಖಲೆಯನ್ನು ಸಹ ಬರೆದರು. 8.1 ಓವರ್​ಗಳಲ್ಲಿ 54ರನ್​ ನೀಡಿ 4 ವಿಕೆಟ್ ಉರುಳಿಸುವ ಮೂಲಕ ಚೊಚ್ಚಲ ಪಂದ್ಯದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡರು.

ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ಮಾಜಿ ಆಫ್​ ಸ್ಪಿನ್ನರ್​ ನೋಯೆಲ್ ಡೇವಿಡ್ ಅವರ ಹೆಸರಿನಲ್ಲಿತ್ತು. 1997ರಲ್ಲಿ 21ರನ್​ಗಳಿಗೆ 3 ವಿಕೆಟ್​ ಪಡೆದು ನೋಯೆಲ್ ಈ ರೆಕಾರ್ಡ್ ನಿರ್ಮಿಸಿದ್ದರು. ಇದೀಗ 4 ವಿಕೆಟ್ ಕಬಳಿಸುವ ಮೂಲಕ ಚೊಚ್ಚಲ ಪಂದ್ಯದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಯನ್ನು ಪ್ರಸಿದ್ಧ್ ಕೃಷ್ಣ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಇನ್ನು ಟೀಮ್ ಇಂಡಿಯಾ ಪರ ಪದಾರ್ಪಣೆ ಪಂದ್ಯದಲ್ಲೇ 16 ಬೌಲರ್ಸ್​ಗಳು 3ವಿಕೆಟ್​ ಪಡೆದುಕೊಂಡಿದ್ದಾರೆ. ಇದೇ ಮೊದಲ ಬಾರಿ ಪ್ರಸಿದ್ಧ್ ಕೃಷ್ಣ 4 ವಿಕೆಟ್ ಉರುಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Published by: zahir
First published: March 24, 2021, 5:25 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories