IPL 2021: RCB ವಿರುದ್ಧದ ಮೊದಲ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಸ್ಟಾರ್ ಆಟಗಾರ ಅಲಭ್ಯ..!

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅಂಕುಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್

Mumbai Indians

Mumbai Indians

 • Share this:
  ರಂಗು ರಂಗಿನ ಕ್ರಿಕೆಟ್ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2021ರ ಆರಂಭಕ್ಕೆ ದಿನಗಳು ಮಾತ್ರ ಉಳಿದಿದೆ. ಅತ್ತ ಮೊದಲ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಹಣಿಯಾಗುತ್ತಿದೆ. ಏಪ್ರಿಲ್ 9 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಕೊಹ್ಲಿ ಬಳಗವು ಬಲಿಷ್ಠ ರೋಹಿತ್ ಪಡೆಯನ್ನು ಎದುರಿಸಲಿದ್ದು, ಉಭಯ ತಂಡಗಳು ಗೆಲುವಿನೊಂದಿಗೆ ಅಭಿಯಾನ ಆರಂಭಿಸುವ ಇರಾದೆಯಲ್ಲಿದೆ.

  ಆದರೀಗ ಮುಂಬೈ ಇಂಡಿಯನ್ ತಂಡವು ತನ್ನ ಸ್ಟಾರ್ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಸೇವೆಯನ್ನು ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಆರ್​ಸಿಬಿ ವಿರುದ್ದದ ಪಂದ್ಯದ ವೇಳೆ ಡಿಕಾಕ್ ತಂಡವನ್ನು ಕೂಡಿಕೊಳ್ಳಲಾಗುವುದಿಲ್ಲ. ಹೀಗಾಗಿ ಎಡಗೈ ದಾಂಡಿಗನ ಬದಲಿಗೆ ಮತ್ತೋರ್ವನನ್ನು ಆರಂಭಿಕರಾಗಿ ಮುಂಬೈ ಇಂಡಿಯನ್ಸ್​ ಕಣಕ್ಕಿಳಿಸಲಿದೆ.

  ಕ್ವಿಂಟನ್ ಡಿಕಾಕ್ ಸದ್ಯ ಅಂತಾರಾಷ್ಟ್ರೀಯ ತಂಡದಲ್ಲಿ ನಿರತರಾಗಿದ್ದು, ಹೀಗಾಗಿ ಐಪಿಎಲ್ ಆರಂಭಿಕ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಡಿಕಾಕ್ ಸೇರಿದಂತೆ ದಕ್ಷಿಣ ಆಫ್ರಿಕಾದ ಇನ್ನಿತರೆ ಆಟಗಾರರಾದ ಲುಂಗಿ ಎನ್​ಗಿಡಿ, ಕಗಿಸೊ ರಬಾಡ ಮತ್ತು ಎನ್ರಿಕ್ ನೊಕಿಯ ಏಪ್ರಿಲ್ 5ರ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ.

  ಹೀಗಾಗಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಲಿನ್ ಅಥವಾ ಇಶಾನ್ ಕಿಶನ್​ನನ್ನು ಆರಂಭಿಕರಾಗಿ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಇನ್ನು ಮತ್ತೊಂದೆಡೆ ಈ ಬಾರಿ ಕೂಡ ರೋಹಿತ್ ಶರ್ಮಾ ಅವರೇ ಆರಂಭಿಕರಾಗಿ ಇನಿಂಗ್ಸ್​ ಆರಂಭಿಸಲಿದ್ದಾರೆ.

  ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅಂಕುಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್, ಸೂರ್ಯಕುಮಾರ್ ಯಾದವ್ ತಿವಾರಿ, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಜೇಮ್ಸ್ ನೀಶನ್, ಯುಧ್ವೀರ್ ಚರಕ್, ಮಾರ್ಕೊ ಜಾನ್ಸೆನ್, ಅರ್ಜುನ್ ತೆಂಡೂಲ್ಕರ್
  Published by:zahir
  First published: